LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಜನತೆಗೆ ಬಿಗ್ ಶಾಕ್ : ತೀವ್ರ ಬರಗಾಲ ಹಿನ್ನೆಲೆ, ಈರುಳ್ಳಿ, ಟೊಮೇಟೊ ಸೇರಿ ತರಕಾರಿ ಬೆಲೆ ಗಗನಕ್ಕೆರಿಕೆ!

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಾಗಿ ಬರ ಆವರಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ದಿನನಿತ್ಯದ ಜೀವನದ ಮೇಲೆ ತೀವ್ರ ಪೆಟ್ಟು ಬಿದ್ದಿದೆ. ಮಳೆ ಇಲ್ಲದೆ ಬೆಳೆಗಳು ನಾಶವಾಗಿ ಫಸಲು ರೈತನ ಕೈ ಸೇರದಿರುವುದು ಹಾಗೂ ಹಲವೆಡೆ ಕೃಷಿ ಚಟುವಟಿಕೆಗಳೇ ನಡೆಯದಿರುವುದು ಇಂದಿನ ಅಗತ್ಯ ವಸ್ತುಗಳ ಅಭಾವಕ್ಕೆ ಮುಖ್ಯ ಕಾರಣವಾಗಿದೆ. ಇದರ ನೇರ ಪರಿಣಾಮವಾಗಿ ಮಾರುಕಟ್ಟೆಯಲ್ಲಿ ತರಕಾರಿ ಸೇರಿದಂತೆ ದಿನಬಳಕೆಯ ವಸ್ತುಗಳ ದರ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರ ಜೇಬಿಗೆ ದೊಡ್ಡ ಮಟ್ಟದ ಹೊರೆಯಾಗುತ್ತಿದೆ.

ಸಾಮಾನ್ಯವಾಗಿ ಪ್ರತಿ ವರ್ಷ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಹೊಸ ಬೆಳೆ ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದರಿಂದ ತರಕಾರಿ ದರ ಕಡಿಮೆಯಾಗಿ ಜನರಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿತ್ತು. ಆದರೆ ಈ ಬಾರಿ ಪರಿಸ್ಥಿತಿ ತದ್ವಿರುದ್ಧವಾಗಿದ್ದು, ಸೆಪ್ಟೆಂಬರ್‌ನಲ್ಲೇ ದರಗಳು ಗಗನಕ್ಕೇರುತ್ತಿವೆ. ಸದ್ಯ ಪ್ರತಿ ಕೆ.ಜಿ.ಗೆ ಬೆಳ್ಳುಳ್ಳಿ ದರ ಬರೋಬ್ಬರಿ 300 ರೂ. ದಾಟಿದ್ದರೆ, ಈರುಳ್ಳಿ 78 ರೂ., ನುಗ್ಗೆಕಾಯಿ ಹಾಗೂ ನಾಟಿ ಕ್ಯಾರೆಟ್ 70 ರೂ.ವರೆಗೆ ಮಾರಾಟವಾಗುತ್ತಿವೆ. ಇನ್ನು ಸೌತೆಕಾಯಿ (48-60 ರೂ.), ಮಂಗಳೂರು ಸೌತೆಕಾಯಿ (64 ರೂ.), ಬೀಟ್‌ರೂಟ್ (50 ರೂ.) ಹಾಗೂ ಆಲೂಗೆಡ್ಡೆ (46-50 ರೂ.) ದರವೂ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಕೆಲವೆಡೆ ಬೀಳುತ್ತಿರುವ ಮಳೆ ಮುಂದೆಯೂ ಮುಂದುವರಿದರೆ ಮಾತ್ರ ದರ ಇಳಿಕೆಯಾಗಬಹುದು ಎಂಬುದು ವ್ಯಾಪಾರಿಗಳ ಆಶಯವಾಗಿದೆ.

ಮತ್ತೊಂದೆಡೆ ಸಿಹಿ ಪ್ರಿಯರಿಗೆ ಸಕ್ಕರೆ ದರ ಕೊಂಚ ಸಮಾಧಾನ ತಂದಿದ್ದರೂ, ಬೆಲ್ಲದ ದರ ಮಾತ್ರ ಗ್ರಾಹಕರಿಗೆ ಕಹಿಯಾಗಿ ಪರಿಣಮಿಸಿದೆ. ಕಬ್ಬಿನ ಇಳುವರಿ ಕುಸಿದಿರುವುದು ಮತ್ತು ಮಾರುಕಟ್ಟೆಗೆ ಬೆಲ್ಲದ ಪೂರೈಕೆ ಕಡಿಮೆಯಾಗಿರುವುದರಿಂದ ಬೆಲ್ಲದ ಬೆಲೆ ಏರಿಕೆಯ ಹಂತದಲ್ಲೇ ಮುಂದುವರಿದಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಕೆ.ಜಿ. ಬೆಲ್ಲದ ದರ 75 ರೂಪಾಯಿ ಗಡಿ ದಾಟಿದೆ. ಬೆಲೆ ಏರಿಕೆಯ ಈ ಸರಣಿ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನರು ಸದ್ಯದ ಪರಿಸ್ಥಿತಿಯಲ್ಲಿ ಮನೆ ಖರ್ಚಿನ ಬಜೆಟ್ ಸರಿದೂಗಿಸಲು ಹೆಣಗಾಡುವಂತಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!