LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿಗೆ ಬಂದ ಹಲವು ಶಾಸಕರು ಎರಡೆರಡು ಮದುವೆ ಆಗಿದ್ದಾರೆ : ಸಂಚಲನ ಸೃಷ್ಟಿಸಿದ ಸಿಎಂ ಡಿಕೆ ಶಿವಕುಮಾರ್ ಹೇಳಿಕೆ!

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ ಒಂದು ಸಣ್ಣ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿಗೆ ಬಂದಿರುವ ಅನೇಕ ಶಾಸಕರು ಎರಡೆರಡು ಮದುವೆಯಾಗಿದ್ದು, ಇಲ್ಲಿಗೆ ಬಂದವರು ಯಾರೂ ವಾಪಸ್ ತಮ್ಮ ಊರುಗಳಿಗೆ ಹೋಗುತ್ತಿಲ್ಲ ಎಂದು ಹೇಳಿರುವುದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಡಿಕೆಶಿ ಅವರ ಈ ಹೇಳಿಕೆಗೆ ಬಿಜೆಪಿ ಹಿರಿಯ ಶಾಸಕ S. ಸುರೇಶ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎರಡನೇ ಮದುವೆಯಾಗಿರುವ ಆ ಶಾಸಕರು ಯಾರೆಂಬ ಹೆಸರುಗಳನ್ನು ತಕ್ಷಣ ಬಹಿರಂಗಪಡಿಸುವಂತೆ ಆಗ್ರಹಿಸಿದ್ದಾರೆ.

ಸದನದಲ್ಲಿ ವಿಷಯವೊಂದಕ್ಕೆ ಉತ್ತರಿಸುವ ವೇಳೆ ಮಾತನಾಡಿದ್ದ ಡಿ.ಕೆ. ಶಿವಕುಮಾರ್, ಬೆಂಗಳೂರಿಗೆ ಬಂದ ಶಾಸಕರು ಯಾರೂ ವಾಪಸ್ ಹೋಗುತ್ತಿಲ್ಲ. ಅದಕ್ಕಾಗಿ ನಗರದ ಜನಸಂಖ್ಯೆ ಹೆಚ್ಚಾಗಿದೆ. ಯಾರ್ಯಾರು ಎರಡೆರಡು ಮದುವೆಯಾಗಿದ್ದಾರೆ ಎಂಬ ಪೂರ್ಣ ಹಿಸ್ಟ್ರೀ ನನ್ನ ಬಳಿ ಇದೆ. ಅಂತಹ ಶಾಸಕರ ಸಂಖ್ಯೆ ಸುಮಾರು ಒಂದು ಡಜನ್ಷ್ಟಿದ್ದು, ಬೇಕಿದ್ದರೆ ಧಾರವಾಡ, ಕಾರವಾರ, ದಕ್ಷಿಣ ಕನ್ನಡ ಜಿಲ್ಲೆಯವರ ಪಟ್ಟಿಯನ್ನೇ ನೀಡಬಲ್ಲೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದರು. ಆದರೆ, ಆ ರೀತಿ ಪರಿಸ್ಥಿತಿ ತರುವುದು ಬೇಡ ಎಂದು ವಿಷಯವನ್ನು ಅಲ್ಲಿಗೆ ಬಿಟ್ಟಿದ್ದರು.

ಈ ಹೇಳಿಕೆಯ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ, ಬಿಜೆಪಿ ನಾಯಕ ಎಸ್. ಸುರೇಶ್ ಕುಮಾರ್, ವಿಧಾನಸಭೆಯಂತಹ ಪವಿತ್ರ ವೇದಿಕೆಯಲ್ಲಿ ನಾಯಕರು ಈ ರೀತಿ ಮಾತನಾಡುವುದು ಯಾರಿಗೂ ಘನತೆ ತರುವ ವಿಚಾರವಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು ಇಂತಹ ಲಘು ಹೇಳಿಕೆಗಳನ್ನು ನೀಡಬಾರದಿತ್ತು. ಇದು ಸದನದ ಗಾಂಭೀರ್ಯತೆ ಹಾಗೂ ಗೌರವಕ್ಕೆ ಧಕ್ಕೆ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾನು ಆ ಸಮಯದಲ್ಲಿ ಸದನದಲ್ಲಿ ಇದ್ದಿದ್ದರೆ ತಕ್ಷಣವೇ ಇದಕ್ಕೆ ಪ್ರತಿಕ್ರಿಯೆ ನೀಡುತ್ತಿದ್ದೆ ಎಂದಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಹೇಳಿಕೆ ಈಗ ಸಾರ್ವಜನಿಕರಲ್ಲಿ ಕೆಟ್ಟ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸುತ್ತದೋ ಇಲ್ಲವೋ ತಿಳಿಯದು, ಆದರೆ ಎರಡೆರಡು ಮದುವೆಯಾಗಿರುವ ಅಥವಾ ಎರಡೆರಡು ಮನೆ ಇಟ್ಟುಕೊಂಡಿರುವ ಆ ಶಾಸಕರ ಹೆಸರುಗಳ ಪಟ್ಟಿಯನ್ನು ದಯವಿಟ್ಟು ಸಾರ್ವಜನಿಕವಾಗಿ ಹೊರಹಾಕಿ. ಇಲ್ಲವಾದರೆ ರಾಜ್ಯದ ಜನತೆ ಜನಪ್ರತಿನಿಧಿಗಳನ್ನೆಲ್ಲ ಅಸಹ್ಯವಾಗಿ ನೋಡುವ ಹಾಗೂ ಅಪಹಾಸ್ಯ ಮಾಡುವ ವಾತಾವರಣ ನಿರ್ಮಾಣವಾಗುತ್ತದೆ ಎಂದು ನೇರ ಸವಾಲು ಹಾಕಿದ್ದಾರೆ.

ಒಟ್ಟಿನಲ್ಲಿ, ರಾಜಧಾನಿಯ ಜನಸಂಖ್ಯೆ ಹೆಚ್ಚಳ ಹಾಗೂ ಶಾಸಕರ ವಾಸಸ್ಥಳದ ಕುರಿತು ನಡೆದ ಚರ್ಚೆ ಈಗ ಶಾಸಕರ ವೈಯಕ್ತಿಕ ಜೀವನ ಹಾಗೂ ಎರಡನೇ ಮದುವೆಯ ವಿಚಾರದ ಸುತ್ತ ತಿರುಗಿದ್ದು, ಶಾಸಕರ ಹೆಸರು ಬಹಿರಂಗಪಡಿಸುವಂತೆ ವಿಪಕ್ಷಗಳು ಪಟ್ಟು ಹಿಡಿದಿರುವುದರಿಂದ ಈ ವಿಷಯ ಮುಂದಿನ ದಿನಗಳಲ್ಲಿ ಇನ್ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!