LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಮಗಳೂರಲ್ಲಿ ಬರ್ಬರ ಕೊಲೆ : ತೆಂಗಿನ ಮರ ಕಡದಿದಕ್ಕೆ ಮಚ್ಚಿನಿಂದ ಕೊಚ್ಚಿ ಅಳಿಯನನ್ನ ಹತ್ಯೆಗೈದ ಮಾವ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕಡಿದು ಹಾಕಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಮಾವನೊಬ್ಬ ತನ್ನ ಸ್ವಂತ ಅಳಿಯನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ನಡೆದಿದೆ. ಆಲದಹಳ್ಳಿ ತಾಂಡ್ಯ ನಿವಾಸಿ ದೇವರಾಜ್ ನಾಯ್ಕ್ (35) ಕೊಲೆಯಾದ ದುರ್ದೈವಿಯಾಗಿದ್ದು, ಈತನ ಮಾವ ರಾಜಾನಾಯ್ಕ್‌ ಕೊಲೆಗೈದ ಆರೋಪಿಯಾಗಿದ್ದಾನೆ. ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕುಟುಂಬದಲ್ಲಿದ್ದ ಭಿನ್ನಾಭಿಪ್ರಾಯದಿಂದಾಗಿ ದೇವರಾಜ್ ಅವರ ಪತ್ನಿ (ರಾಜಾನಾಯ್ಕ್‌ನ ಮಗಳು) ಗಂಡನನ್ನು ತೊರೆದು ಬೆಂಗಳೂರಿನಲ್ಲಿ ವಾಸವಾಗಿದ್ದರು. ಇದೇ ವಿಚಾರವಾಗಿ ಮಾವ ಮತ್ತು ಅಳಿಯನ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಘಟನೆಯ ದಿನವೂ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಆಕ್ರೋಶಗೊಂಡ ದೇವರಾಜ್ ಮಾವನ ಹೊಲದಲ್ಲಿದ್ದ ಎರಡು ತೆಂಗಿನ ಗಿಡಗಳನ್ನು ಕತ್ತರಿಸಿ ಹಾಕಿದ್ದ. ಇದರಿಂದ ರೊಚ್ಚಿಗೆದ್ದ ರಾಜಾನಾಯ್ಕ್, ತಕ್ಷಣವೇ ಮಚ್ಚಿನಿಂದ ದೇವರಾಜ್‌ನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?