LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಟೀಕೆಗೆ ಬಾಲಿವುಡ್ ನಟ ಗೋವಿಂದ ಖಡಕ್ ತಿರುಗೇಟು: ಕೋಮಲ್ ರಾಣಿ ಜೊತೆ ದೇವಸ್ಥಾನ ಭೇಟಿ ನೀಡಿದ್ದಕ್ಕೆ ನೀಡಿದರು ಸ್ಪಷ್ಟನೆ

ಬಾಲಿವುಡ್ ಹಿರಿಯ ನಟ ಗೋವಿಂದ ತಮ್ಮ ವೈಯಕ್ತಿಕ ಬದುಕು ಹಾಗೂ ವೃತ್ತಿಜೀವನದ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ನಟಿ ಕೋಮಲ್ ರಾಣಿ ಜೊತೆಗೆ ಮುಂಬೈನ ಪ್ರಸಿದ್ಧ ಲಾಲ್‌ಬಾಗ್ ಚಾ ರಾಜ ಗಣಪತಿ ಮಂಟಪಕ್ಕೆ ಭೇಟಿ ನೀಡಿದ್ದ ಗೋವಿಂದ, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಒಳಗಾಗಿದ್ದರು. ಇದೀಗ ಈ ಎಲ್ಲಾ ಆರೋಪ ಹಾಗೂ ವದಂತಿಗಳಿಗೆ ಸ್ವತಃ ಗೋವಿಂದ ಅವರೇ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಮುಂಬರುವ ‘ರೂಪ’ ಸಿನಿಮಾದ ಯಶಸ್ಸಿಗಾಗಿ ಪ್ರಾರ್ಥಿಸಲು ದೇವಾಲಯಕ್ಕೆ ತೆರಳಿದ್ದಾಗಿ ಹೇಳಿರುವ ಅವರು, ಈ ಹಿಂದೆ ತಾವು ರವೀನಾ ಟಂಡನ್ ಮತ್ತು ಕರಿಷ್ಮಾ ಕಪೂರ್ ಜೊತೆಗೂ ದೇವಸ್ಥಾನಗಳಿಗೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡಿದ್ದಾರೆ. ಆ ಸಮಯದಲ್ಲಿ ಆ ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು. ಅದೇ ರೀತಿ ಈಗ ಕೋಮಲ್ ರಾಣಿ ಜೊತೆ ತೆರಳಿ ಪೂಜೆ ಸಲ್ಲಿಸಿದ್ದು, ಇದರಲ್ಲಿ ಬೇರೆ ಯಾವುದೇ ದುರುದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿನಿಮಾದ ಪ್ರಚಾರ ಹಾಗೂ ಜನರ ಟೀಕೆಗಳ ಬಗ್ಗೆ ಮಾತನಾಡಿದ ಅವರು, ತಮಗೆ ಜನ ಹೀಗೆ ಏಕೆ ಪ್ರತಿಕ್ರಿಯಿಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿನಿಮಾ ಮತ್ತು ನಟರು ಪ್ರಸಿದ್ಧಿ ಪಡೆಯುತ್ತಿದ್ದರೆ ಇತರರಿಗೆ ಇದರಿಂದ ಏನು ತೊಂದರೆ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ತಮ್ಮ ಕುಟುಂಬದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳ ಕುರಿತು ಮಾತನಾಡಿದ ನಟ, ತಮ್ಮ ಪ್ರತಿಷ್ಠೆಗೆ ಧಕ್ಕೆ ತರಲು ಮತ್ತು ಕುಟುಂಬದಿಂದ ತಮ್ಮನ್ನು ದೂರ ಮಾಡಲು ಕೆಲವರು ವ್ಯವಸ್ಥಿತವಾಗಿ ಇಂತಹ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಮಲ್ ರಾಣಿ ಅವರೊಂದಿಗಿನ ಬಾಂಧವ್ಯವು ಸಂಪೂರ್ಣವಾಗಿ ವೃತ್ತಿಪರವಾಗಿದ್ದು, ಕೆಲಸದ ಜಾಗದಲ್ಲಿ ವೃತ್ತಿಪರತೆ ಕಾಯ್ದುಕೊಳ್ಳುವುದು ಮುಖ್ಯ ಎಂದಿದ್ದಾರೆ.

ಇನ್ನು ಗೋವಿಂದ ಅವರ ಮರುಮದುವೆಯ ಕುರಿತು ಕೇಳಿಬಂದಿದ್ದ ಮಾತುಗಳನ್ನು ಅವರ ಮ್ಯಾನೇಜರ್ ಸಂಪೂರ್ಣವಾಗಿ ನಿರಾಕರಿಸಿದ್ದು, ಇವೆಲ್ಲವೂ ಸತ್ಯಕ್ಕೆ ದೂರವಾದ ಸುದ್ದಿಗಳು ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!