LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಸೇವೆಗೆ ನನ್ನ ಅಧಿಕಾರ ಮುಡಿಪು, ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಸಚಿವ ಎನ್. ಚಲುವರಾಯಸ್ವಾಮಿ

ನಾಗಮಂಗಲ: "ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ," ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ತಾಲೂಕು ಆಡಳಿತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಬೆಳ್ಳೂರು ಸಮೀಪದ ಉಮರ್ ನಗರದಲ್ಲಿ ಶುಕ್ರವಾರ ನಡೆದ ಮೌಲಾನಾ ಆಜಾದ್ ಮಾದರಿ ಶಾಲೆಯ ಕಟ್ಟಡ ಮತ್ತು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡಿದರು.

"ಜನರು ನನ್ನ ಮೇಲೆ ನಂಬಿಕೆ ಇಟ್ಟು ಅಧಿಕಾರ ನೀಡಿದ್ದಾರೆ. ಅಂತಹ ಅಧಿಕಾರವನ್ನು ನಿಮ್ಮ ಸೇವೆಗೆ ಮುಡಿಪಾಗಿಟ್ಟಿದ್ದೇನೆ. ನಾನು ಬೇರೆಯವರ ರೀತಿ ಇಲ್ಲಸಲ್ಲದ ಮಾತುಗಳನ್ನು ಹೇಳಿಕೊಂಡು ಓಡಾಡುವುದಿಲ್ಲ. ನನಗೆ ಜನರ ಕೆಲಸ ಆಗಬೇಕು," ಎಂದರು.

"ಬೆಳ್ಳೂರು ಜನರು ನನ್ನ ಕೈ ಹಿಡಿದು ವಿಧಾನಸೌಧದ ಮೆಟ್ಟಿಲು ಹತ್ತಿಸಿದ್ದೀರಿ. ನಿಮ್ಮ ಋಣ ನನ್ನ ಮೇಲಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಗಳೊಂದಿಗೆ ನಿಮಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಲಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ," ಎಂದು ಭರವಸೆ ನೀಡಿದರು.

"ಈ ಗ್ರಾಮದಲ್ಲಿ 10 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ. ನನ್ನ ಕೈಲಾದಷ್ಟು ಇನ್ನಷ್ಟು ಯೋಜನೆಗಳನ್ನು ತರಲಾಗುವುದು. ಈ ಭಾಗದ ಬಹುದಿನಗಳ ಬೇಡಿಕೆಯಾದ ಪಡಿತರ ಕೇಂದ್ರವನ್ನು (ನ್ಯಾಯಬೆಲೆ ಅಂಗಡಿ) ಶೀಘ್ರದಲ್ಲೇ ಪ್ರಾರಂಭಿಸಲಾಗುವುದು," ಎಂದರು.

ಕೆಲಸ ಮಾಡಲು ಮನಸ್ಸಿದ್ದರೆ ಮಾಡಿ, ಇಲ್ಲ ಜಾಗ ಖಾಲಿ ಮಾಡಿ

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಕಾಮಗಾರಿ ಪ್ರಾರಂಭಿಸದ ಲ್ಯಾಂಡ್ ಆರ್ಮಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ‌ ಸಚಿವರು, "ಒಂದು ವರ್ಷದಿಂದ ಕಾಮಗಾರಿ ಏಕೆ ಪ್ರಾರಂಭಿಸಿಲ್ಲ? ಪ್ಲಾನ್ ಡಿಸೈನ್ ಬದಲಿಸಲು ಇಷ್ಟು ಸಮಯ ಬೇಕಾ? ನಿಮಗೆ ಕೆಲಸ ಮಾಡುವ ಮನಸ್ಸಿದ್ದರೆ ಮಾಡಿ, ಇಲ್ಲ ಜಾಗ ಖಾಲಿ ಮಾಡಿ. ಕೂಡಲೇ ಕಾಮಗಾರಿ ಪ್ರಾರಂಭಿಸಿ," ಎಂದು ಖಡಕ್ ಸೂಚನೆ ನೀಡಿದರು.

ಬಳಿಕ ದೇವಿಹಳ್ಳಿ ಗೇಟ್ ಸಮೀಪ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಯ ಕಟ್ಟಡ ನಿರ್ಮಾಣ ಮತ್ತು ಯರಗನಹಳ್ಳಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕ ದಿನೇಶ್, ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಮೂಡಲಪ್ಪ, ದಲಿತ ಮುಖಂಡ ಶಿವಣ್ಣ, ಜಾಮಿಯಾ ಮಸೀದಿ ಅಧ್ಯಕ್ಷ ಸುಲೇಮಾನ್, ಮುಖಂಡರಾದ ಯಾಸೀನ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಧುಶ್ರೀ ಮುಂತಾದವರು ಇದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!