LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಇಸಿ ಜ್ಞಾನೇಶ್ ಕುಮಾರ್ ವಜಾಗೊಳಿಸಿ ದೇಶದ್ರೋಹ ಕೇಸ್ ದಾಖಲಿಸಲು 'ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ' ಒತ್ತಾಯ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಗಂಭೀರ ಸ್ವರೂಪದ ಅಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವ ವಿರೋಧಿ ಕೃತ್ಯಗಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ (ಕೆಆರ್‌ಎಂಒ) ತೀವ್ರವಾಗಿ ಒತ್ತಾಯಿಸಿದೆ.

ಇತ್ತೀಚೆಗೆ 'ಇಂಡಿಯನ್ ಎಕ್ಸ್‌ಪ್ರೆಸ್' ದಿನಪತ್ರಿಕೆ ಹೊರತಂದ ತನಿಖಾ ವರದಿಯ ಆಘಾತಕಾರಿ ವಿವರಗಳನ್ನು ಮುಂದಿಟ್ಟುಕೊಂಡು ಒಕ್ಕೂಟ ಈ ಆಗ್ರಹ ಮಾಡಿದೆ.

ತನಿಖಾ ವರದಿಯಿಂದ ಬಯಲಾದ ಅಕ್ರಮಗಳು

ಪತ್ರಿಕಾ ವರದಿಯ ಪ್ರಕಾರ, ಮೂವರು ಸದಸ್ಯರ ಚುನಾವಣಾ ಆಯೋಗದಲ್ಲಿ ಸಹ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರ ಗಮನಕ್ಕೆ ತರದೆ, ಅವರ ಅನುಪಸ್ಥಿತಿಯಲ್ಲೇ ಕನಿಷ್ಠ 14 ಬಾರಿ ಆಯೋಗದ ಹೆಸರಿನಲ್ಲಿ ಮಹತ್ವದ ತೀರ್ಮಾನಗಳನ್ನು ಪ್ರಕಟಿಸಲಾಗಿದೆ. ಈ ಕ್ರಮವನ್ನು ಚುನಾವಣಾ ಆಯುಕ್ತ ಸಂಧು ಅವರು 'ಅನಧಿಕೃತ ಮತ್ತು ಕಾನೂನುಬಾಹಿರ' ಎಂದು ಕಟುವಾಗಿ ಆಕ್ಷೇಪಿಸಿದ್ದರು. ಹೊಸ ಮತದಾರರ ನೋಂದಣಿ, ಹೆಸರುಗಳ ಅಳಿಸುವಿಕೆ, ನ್ಯಾಯಾಂಗ ಅಧಿಕಾರಿಗಳು ಮರುಸ್ಥಾಪಿಸಿದ ಹೆಸರುಗಳ ವಿರುದ್ಧ ಮೇಲ್ಮನವಿ ಸಲ್ಲಿಕೆ ಹಾಗೂ ಮತದಾರರ ಪಟ್ಟಿ ನಿರ್ವಹಣೆಯಂತಹ ಸೂಕ್ಷ್ಮ ವಿಷಯಗಳಲ್ಲಿ ಸಹ ಆಯುಕ್ತರನ್ನು ಕತ್ತಲಲ್ಲಿಟ್ಟು ಆದೇಶಗಳನ್ನು ಹೊರಡಿಸಲಾಗಿದೆ.

ನಿಯಮಬಾಹಿರ ತಿದ್ದುಪಡಿ ಹಾಗೂ ದತ್ತಾಂಶ ಕೇಂದ್ರೀಕರಣ

ಅಧಿಕೃತ ನಿಯಮಗಳಿಗೆ ತಿದ್ದುಪಡಿ ತರದೆ 'ಫಾರ್ಮ್ 6' ನಲ್ಲಿ ಯಾವುದೇ ಬದಲಾವಣೆ ಮಾಡಲು ಬರುವುದಿಲ್ಲ ಎಂದು ಆಯುಕ್ತ ಜೋಶಿ ಅವರು ಸ್ಪಷ್ಟವಾಗಿ ದಾಖಲಿಸಿ, ಅದಕ್ಕೆ ಆಯುಕ್ತ ಸಂಧು ಸಹಮತ ವ್ಯಕ್ತಪಡಿಸಿದ್ದರೂ ಸಹ, ಅಕ್ರಮವಾಗಿ ಆ ಬದಲಾವಣೆಯನ್ನು ಜಾರಿಗೆ ತರಲಾಗಿದ್ದು ಅದು ಇಂದಿಗೂ ಮುಂದುವರಿದಿದೆ. ಮತ್ತೊಂದೆಡೆ, ಶಾಸನಬದ್ಧ ಅಧಿಕಾರಿಗಳ ಹಿಡಿತದಲ್ಲಿದ್ದ ಮತದಾರರ ಪಟ್ಟಿಯ ಅಧಿಕೃತ ದತ್ತಾಂಶವನ್ನು ಕಿತ್ತುಕೊಂಡು ಕೇಂದ್ರ ಮಟ್ಟದಲ್ಲೇ ನಿಯಂತ್ರಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಆಕ್ಷೇಪಣೆಯೂ ಅಧಿಕೃತ ದಾಖಲೆಗಳಿಂದ ದೃಢಪಟ್ಟಿದೆ. ಇಬ್ಬರು ಸಹ ಆಯುಕ್ತರ ವಿರೋಧದ ನಡುವೆಯೂ ಮುಖ್ಯ ಚುನಾವಣಾ ಆಯುಕ್ತರು ಇಂತಹ ಸಂವಿಧಾನ ವಿರೋಧಿ ತೀರ್ಮಾನಗಳನ್ನು ಯಾರ ಅಣತಿಯ ಮೇರೆಗೆ ಕೈಗೊಂಡಿದ್ದಾರೆ ಎಂಬುದು ಉನ್ನತ ಮಟ್ಟದ ನಿಷ್ಪಕ್ಷ ತನಿಖೆಯಿಂದಷ್ಟೇ ಬಯಲಾಗಬೇಕಿದೆ ಎಂದು ಒಕ್ಕೂಟ ಹೇಳಿದೆ.

ಎಸ್‌ಐಆರ್ ರದ್ದತಿ ಹಾಗೂ ಮಹಾಭಿಯೋಗದ ಎಚ್ಚರಿಕೆ

ಮತದಾರರ ಹಕ್ಕನ್ನು ಕಸಿದುಕೊಳ್ಳುವ ದುರುದ್ದೇಶದಿಂದ ಅಸಾಂವಿಧಾನಿಕವಾಗಿ ರೂಪಿಸಲಾಗಿರುವ ಎಸ್‌ಐಆರ್ (SIR) ಅನ್ನು ಕೂಡಲೇ ರದ್ದುಪಡಿಸಿ, ಈ ಹಿಂದೆ ಚಾಲ್ತಿಯಲ್ಲಿದ್ದ ಮತದಾರರ ಪಟ್ಟಿಯನ್ನೇ ಪುನಃ ಮರುಸ್ಥಾಪಿಸಬೇಕು ಎಂದು ಒಕ್ಕೂಟ ಪಟ್ಟುಹಿಡಿದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲವಾದಲ್ಲಿ ಸಂಸತ್ತಿನಲ್ಲಿ ಅವರ ವಿರುದ್ಧ ತಕ್ಷಣವೇ ಮಹಾಭಿಯೋಗ ಪ್ರಕ್ರಿಯೆ ಆರಂಭಿಸಬೇಕು. ಇದರೊಂದಿಗೆ ಕೇಂದ್ರ ಸರ್ಕಾರವೇ ಆಯುಕ್ತರನ್ನು ನೇಮಿಸಿಕೊಳ್ಳಲು ಹಾಗೂ ಅವರಿಗೆ ಜೀವಿತಾವಧಿ ಕಾನೂನು ರಕ್ಷಣೆ ನೀಡಲು ಜಾರಿಗೆ ತಂದಿರುವ '2023ರ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯ್ದೆ'ಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿಯ ಎಲ್ಲಾ ನಿರ್ಧಾರಗಳ ಕುರಿತು ಸ್ವತಂತ್ರ ತನಿಖೆ ನಡೆದು, ಚುನಾವಣಾ ವ್ಯವಸ್ಥೆ ಪ್ರಜಾಸತ್ತಾತ್ಮಕವಾಗಿ ಉಳಿಯಲು ಎಲ್ಲಾ ಪ್ರಮುಖ ವಿಪಕ್ಷಗಳು ಒಗ್ಗಟ್ಟಿನಿಂದ ಬೀದಿಗಿಳಿಯಬೇಕು ಎಂದು ಒಕ್ಕೂಟ ಕರೆ ನೀಡಿದೆ.

ರಾಜ್ಯದ ಮುಸ್ಲಿಂ ಮತದಾರರ ಹೆಸರು ಕೈಬಿಡುವ ಷಡ್ಯಂತ್ರ

ಇದೇ ವೇಳೆ ಕರ್ನಾಟಕದ ಬೆಳಗಾವಿ ಹಾಗೂ ಬೀದರ್ ಜಿಲ್ಲೆಯ ಭಾಲ್ಕಿ ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮತದಾರರ ಹೆಸರುಗಳನ್ನು ಯೋಜಿತವಾಗಿ ಹಾಗೂ ಕಾನೂನುಬಾಹಿರವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ಆಪಾದಿಸಲಾಗಿದೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಬಗೆಯುವ ಘೋರ ದ್ರೋಹವಾಗಿದ್ದು, ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಮುಂದಾಗಿರುವ ಕಿಡಿಗೇಡಿಗಳು ಹಾಗೂ ಅಧಿಕಾರಿಗಳ ವಿರುದ್ಧ ಸರ್ಕಾರ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಗಂಭೀರ ಎಚ್ಚರಿಕೆ ನೀಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!