LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು- ಮುಂಬೈ ನಡುವೆ ವಿಶೇಷ ರೈಲು

ಬೆಂಗಳೂರು: ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಮುಂಬೈನ CSMT–ಬೆಂಗಳೂರು SMVT ನಡುವೆ ವಾರದ ವಿಶೇಷ ರೈಲುಗಳನ್ನು ಭಾರತೀಯ ರೈಲ್ವೆ ಘೋಷಿಸಿದೆ.

ರೈಲು ಸಂಖ್ಯೆ: 01013 — CSMT ಮುಂಬೈ–SMVT ಬೆಂಗಳೂರು ವಿಶೇಷ

ಸಂಚಾರ: ಅಕ್ಟೋಬರ್ 10ರಿಂದ ನವೆಂಬರ್ 21ರವರೆಗೆ ಪ್ರತಿ ಶನಿವಾರ

ಮುಂಬೈನಿಂದ: ರಾತ್ರಿ 12:35ಕ್ಕೆ ಹೊರಟು, ಅದೇ ದಿನ ರಾತ್ರಿ 11:55ಕ್ಕೆ ಬೆಂಗಳೂರಿಗೆ ಆಗಮನ.

ಹಿಂತಿರುಗುವ ರೈಲು: 01014 — SMVT ಬೆಂಗಳೂರು–CSMT ಮುಂಬೈ ವಿಶೇಷ

ಸಂಚಾರ: ಅಕ್ಟೋಬರ್ 11ರಿಂದ ನವೆಂಬರ್ 22ರವರೆಗೆ ಪ್ರತಿ ಭಾನುವಾರ

ಬೆಂಗಳೂರಿನಿಂದ: ಬೆಳಗಿನ 4:30ಕ್ಕೆ ಹೊರಟು, ಮರುದಿನ ಬೆಳಗಿನ 4:05ಕ್ಕೆ ಮುಂಬೈ ತಲುಪಲಿದೆ.

ಈ ರೈಲು ಪೂಣೆ, ಸಾತಾರಾ, ಕರಾಡ್, ಸಾಂಗ್ಲಿ, ಮಿರಜ್, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಒಟ್ಟು 7 ಸುತ್ತು ಪ್ರಯಾಣ ನಡೆಸಲಿದೆ.

ರೈಲಿನಲ್ಲಿ 2 AC 2-Tier ಹಾಗೂ 18 AC 3-Tier ಕೋಚ್‌ಗಳು ಸೇರಿದಂತೆ ಒಟ್ಟು 22 ಕೋಚ್‌ಗಳಿರಲಿವೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಅಪ್ರಾಪ್ತರಿಗೆ ತಂಬಾಕು ಮಾರಾಟ: ದಂಡ

ದಾವಣಗೆರೆ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಂತ್ರಣ ಹಾಗೂ ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳ ಮಾರಾಟ ತಡೆಯುವ ಉದ್ದೇಶದಿಂದ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದೆ.

ಈ ಕಾರ್ಯಚರಣೆಯಲ್ಲಿ COTPA – 2003 ಕಾಯ್ದೆಯ ಸೆಕ್ಷನ್ -4 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇದ ಅಡಿಯಲ್ಲಿ ಒಟ್ಟು 10ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮ ಉಲ್ಲಂಘಿಸಿದವರಿಂದ ₹2,000 ದಂಡ ವಸೂಲಿ ಮಾಡಲಾಗಿದೆ.  ಹಾಗೂ ಸೆಕ್ಷನ್ – 6A ರ ಅಡಿಯಲ್ಲಿ 21 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧದ ಕಾಯ್ದೆಯಡಿ 8 ಪ್ರಕರಣಗಳನ್ನು ದಾಖಲಿಸಿಕೊಂಡು , 1,000 ರೂ ದಂಡ ವಿಧಿಸಲಾಯಿತು. ಒಟ್ಟು 18 ಪ್ರಕರಣಗಳನ್ನು ದಾಖಲಿಸಿ 3000 ರೂ, ದಂಡ ವಿಧಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದವರು, ಜಿಲ್ಲಾ ಸಲಹೆಗಾರರಾದ ಸತೀಶ್ ಕಲಹಾಳ, ಜಿಲ್ಲಾ ಸಾಂಕ್ರಾಮಿಕ ರೋಗ ತಜ್ಞರಾದ ಮನೋಜ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹಾಂತೇಶ್ ಎ, ಶಿಕ್ಷಣ ಇಲಾಖೆಯ ಸಿ.ಆರ್.ಪಿ ಜಗದೀಶ್ ಹಾಗೂ ನಲ್ಲೂರು ಪೊಲೀಸ್ ಉಪ ಠಾಣೆಯ ಮುಖ್ಯಪೇದೆ ಸತೀಶ್ ಕುಮಾರ್ ಅವರು ಉಪಸ್ಥಿತರಿದ್ದರು.

ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆ ಆರಂಭ

ಬೆಂಗಳೂರು: UGNEET-26: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಂಕ್ ಮುಷ್ಕರ ಇರುವ ಕಾರಣ Caution Deposit ಕಟ್ಟಲು ಅಕ್ಟೋಬರ್ 1ರವರೆಗೆ ದಿನಾಂಕ ವಿಸ್ತರಿಸಲಾಗಿದೆ.

ಆಪ್ಷನ್ಸ್ ದಾಖಲಿಸುವ ದಿನಾಂಕವನ್ನೂ ಅ.1ರವರೆಗೆ ವಿಸ್ತರಿಸಲಾಗಿದೆ.

ಇದುವರೆಗೂ ಯಾವುದೇ ಸೀಟು ಹಂಚಿಕೆಯಾಗದಿರುವವರು, ಸೀಟು ಹಂಚಿಕೆ ನಂತರ ದಂಡ ಪಾವತಿಸಿ ರದ್ದು ಪಡಿಸಿಕೊಂಡವರು, ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಚಾಯ್ಸ್-4 ಆಯ್ಕೆ ಮಾಡಿ ಹೊರ ಹೋಗಿರುವವರು, ಎರಡನೇ ಸುತ್ತಿನ ಅಂತಿಮ ಫಲಿತಾಂಶಕ್ಕೂ ಮೊದಲು quit ಮಾಡಿಕೊಂಡ ಅಭ್ಯರ್ಥಿಗಳು 3ನೇ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟಿಗೆ ಈಗಾಗಲೇ ಪ್ರವೇಶ ಪಡೆದಿರುವ ಅಭ್ಯರ್ಥಿಗಳು Up-Gradation ಮಾಡಿಕೊಳ್ಳಲು ಆಸಕ್ತಿ ಇದ್ದಲ್ಲಿ ಅವರು ಕೂಡ ಭಾಗಬಹಿಸಬಹುದು.

ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಯಾವುದೇ ಚಾಯ್ಸ್ ದಾಖಲಿಸದಿರುವವರು ಈ ಸುತ್ತಿನಲ್ಲಿ ಭಾಗವಹಿಸಲು ಅರ್ಹರಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?