LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಘೋರ ದುರಂತ : ಕೆರೆಯಲ್ಲಿ ಮುಳುಗಿ ಯುವಕ ಸಾವು!

ಬೆಳಗಾವಿ: ಗಣೇಶ ವಿಸರ್ಜನೆಗೆ ತೆರಳಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ನಡೆದಿದೆ. ಮಚ್ಛೆ ಗ್ರಾಮದ ನಿವಾಸಿ ವಿಶ್ವೇಶ್ ನಾಯಕ್ (20) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಹಬ್ಬದ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಈ ಘಟನೆಯಿಂದಾಗಿ ಶೋಕದ ಛಾಯೆ ಆವರಿಸಿದೆ.

ವಿಶ್ವೇಶ್ ತಮ್ಮ ಸ್ನೇಹಿತರೊಂದಿಗೆ ಗಣಪತಿ ವಿಸರ್ಜನೆ ಮಾಡಲು ಗ್ರಾಮದ ಕೆರೆಗೆ ತೆರಳಿದ್ದನು. ಗಣೇಶ ಮೂರ್ತಿಯನ್ನು ನೀರಿಗಿಳಿಸಿ ವಾಪಸ್ ದಡಕ್ಕೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಸ್ನೇಹಿತರ ಕಣ್ಣೆದುರಲ್ಲೇ ಯುವಕ ನೀರಿನಲ್ಲಿ ಮುಳುಗಿದ್ದು, ಆತ ಕೆರೆಯಲ್ಲಿ ಮುಳುಗುತ್ತಿರುವ ದೃಶ್ಯ ಅಲ್ಲಿಯೇ ಇದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ನೇಹಿತರು ಆತನನ್ನು ರಕ್ಷಿಸಲು ಯತ್ನಿಸಿದರೂ ಫಲಪ್ರದವಾಗಲಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದರು. ಕೆರೆಯಲ್ಲಿ ಸುದೀರ್ಘ ಶೋಧ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಬೆಳೆಯುವ ವಯಸ್ಸಿನ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!