LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಕಚೇರಿ ಮಧ್ಯಪ್ರವೇಶದಿಂದ ಗ್ರಾಮಗಳಿಗೆ ತ್ವರಿತ ಪರಿಹಾರ!

ರಾಮನಗರ/ಮಾಗಡಿ: ಬೆಂಗಳೂರು ಗ್ರಾಮಾಂತರ/ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಸೀಗೇಕುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ತಲೆದೋರಿದ್ದ ತೀವ್ರ ಕುಡಿಯುವ ನೀರಿನ ಅಭಾವಕ್ಕೆ ಮುಖ್ಯಮಂತ್ರಿಗಳ ಕಚೇರಿಯ (CMO) ನೇರ ಮಧ್ಯಪ್ರವೇಶದೊಂದಿಗೆ ತ್ವರಿತ ಪರಿಹಾರ ದೊರೆತಿದೆ.

ಸೀಗೇಕುಪ್ಪೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರಿನ ಹಾಹಾಕಾರ ಉಂಟಾಗಿ ಜನರು ಹಾಗೂ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿರುವ ಕುರಿತು ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಕಚೇರಿಯ ಸಾರ್ವಜನಿಕ ಕುಂದುಕೊರತೆಗಳ ವಿಭಾಗವು ತಕ್ಷಣವೇ ಸ್ಪಂದಿಸಿ ಕ್ರಮಕ್ಕೆ ಮುಂದಾಗಿದೆ.

ಸಿಎಂ ಕಚೇರಿ ನಿರ್ದೇಶನ; ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತ

ವರದಿ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ (OSD) ಕಚೇರಿಯಿಂದ ಸ್ಥಳೀಯ ತಾಲೂಕು ಹಾಗೂ ಪಂಚಾಯತಿ ಅಧಿಕಾರಿಗಳಿಗೆ ತುರ್ತು ನಿರ್ದೇಶನ ರವಾನಿಸಲಾಯಿತು. ಈ ಸೂಚನೆ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸ್ಥಳೀಯ ಅಧಿಕಾರಿಗಳು ಸಮಸ್ಯೆ ಎದುರಿಸುತ್ತಿದ್ದ ಗ್ರಾಮಗಳಿಗೆ ಅಗತ್ಯ ನೀರಿನ ಪೂರೈಕೆಯನ್ನು ಖಾತರಿಪಡಿಸಿದ್ದಾರೆ.

ಖಾಸಗಿ ಬೋರ್‌ವೆಲ್ ಒಪ್ಪಂದ, ಟ್ಯಾಂಕರ್ ಮೂಲಕ ನೀರು ಪೂರೈಕೆ

ನೀರಿನ ಕೊರತೆಯಿಂದ ಕಂಗಾಲಾಗಿದ್ದ ಕೋರೆಮಂಗಲ, ಚಕ್ರಬಾವಿ, ಸಾದಮಾರನಹಳ್ಳಿ ಮತ್ತು ಎಸ್. ಬ್ಯಾಡರಹಳ್ಳಿ ಗ್ರಾಮಗಳಿಗೆ ತುರ್ತು ಪರಿಹಾರವಾಗಿ ಖಾಸಗಿ ಬೋರ್‌ವೆಲ್‌ಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಜತೆಗೆ ದಿನಂಪ್ರತಿ ಟ್ಯಾಂಕರ್‌ಗಳ ಮೂಲಕ ಗ್ರಾಮಸ್ಥರಿಗೆ ಯಾವುದೇ ಅಡಚಣೆಯಾಗದಂತೆ ಕುಡಿಯುವ ನೀರು ಪೂರೈಕೆ ಆರಂಭಿಸಲಾಗಿದೆ.

ಶಾಶ್ವತ ಪರಿಹಾರಕ್ಕೆ ನೂತನ ಕೊಳವೆಬಾವಿ

ಕೇವಲ ತುರ್ತು ಪರಿಹಾರಕ್ಕೆ ಸೀಮಿತವಾಗದೆ, ಈ ಗ್ರಾಮಗಳಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹೊಸದಾಗಿ ಕೊಳವೆಬಾವಿ (ಬೋರ್‌ವೆಲ್) ಕೊರೆಯಿಸಲು ಅಗತ್ಯ ಅನುದಾನ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಸ್ಥಳೀಯ ಆಡಳಿತದ ತ್ವರಿತ ಸ್ಪಂದನೆಗೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!