LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನಸಂದಣಿಯ ಮಧ್ಯೆ ಆಲಿಯಾಗೆ ಸಾಥ್ ಕೊಟ್ಟ ರಣ್‌ಬೀರ್! ಕ್ಯೂಟ್ ಜೋಡಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್!

ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಮುಂಬರುವ ಬಿಗ್ ಬಜೆಟ್ ಸಿನಿಮಾ ‘ಲವ್ ಅಂಡ್ ವಾರ್’ ತಂಡದ ಸದಸ್ಯರು ಮುಂಬೈನಲ್ಲಿ ವಿಶೇಷ ಭೋಜನಕೂಟಕ್ಕಾಗಿ (ಡಿನ್ನರ್) ಒಂದೆಡೆ ಸೇರಿದ್ದರು. ರಣ್‌ಬೀರ್ ಕಪೂರ್, ಆಲಿಯಾ ಭಟ್, ವಿಕ್ಕಿ ಕೌಶಲ್ ಹಾಗೂ ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಶನಿವಾರ ರಾತ್ರಿ ಹೋಟೆಲ್ ಒಂದಕ್ಕೆ ಆಗಮಿಸಿದ್ದು, ಕ್ಯಾಮೆರಾಗಳಿಗೆ ಪೋಸ್ ನೀಡಿದರು.

ಕಾರ್ಯಕ್ರಮ ಮುಗಿಸಿ ಹೊರಬರುವಾಗ ರಣ್‌ಬೀರ್ ಕಪೂರ್ ತಮ್ಮ ಪತ್ನಿ ಆಲಿಯಾ ಭಟ್ ಅವರನ್ನು ಜನಸಂದಣಿಯ ನಡುವೆ ಸುರಕ್ಷಿತವಾಗಿ ಕರೆದೊಯ್ದ ರೀತಿ ಎಲ್ಲರ ಗಮನ ಸೆಳೆದಿದೆ. ಮಾಧ್ಯಮದವರು ಹಾಗೂ ಪಾಪರಾಜಿಗಳ ನೂಕುನುಗ್ಗಲು ಹೆಚ್ಚಿದ್ದ ಕಾರಣ, ರಣ್‌ಬೀರ್ ಆಲಿಯಾ ಅವರ ಸೊಂಟದ ಮೇಲೆ ಪ್ರೀತಿಯಿಂದ ಕೈಯಿಟ್ಟು, ಜನರಿಂಂದ ಯಾವುದೇ ತೊಂದರೆಯಾಗದಂತೆ ರಕ್ಷಿಸುತ್ತಾ ಕಾರಿನತ್ತ ಕರೆದೊಯ್ದರು.

ರಣ್‌ಬೀರ್ ಅವರ ಈ ಕಾಳಜಿಗೆ ಆಲಿಯಾ ಭಟ್ ನಾಚಿ ನೀರಾದ ದೃಶ್ಯಗಳು ವೀಡಿಯೋದಲ್ಲಿ ಸೆರೆಯಾಗಿವೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ತುಣುಕು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಈ ಜೋಡಿಯ ಕೆಮಿಸ್ಟ್ರಿಗೆ ಹಾಗೂ ರಣ್‌ಬೀರ್ ಅವರ ರಕ್ಷಣಾತ್ಮಕ ನಡವಳಿಕೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ‘ಲವ್ ಅಂಡ್ ವಾರ್’ ಸಿನಿಮಾದ ಪೋಸ್ಟರ್‌ಗಳು ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿವೆ. ಈ ಬಹುನಿರೀಕ್ಷಿತ ಚಿತ್ರವು 2027ರ ಜನವರಿ 21 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!