LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವದಂತಿ: ವಿದ್ಯಾರ್ಥಿಗಳ ಆಕ್ರೋಶ: ಕಾಲೇಜು ಕ್ಯಾಂಪಸ್ ಧ್ವಂಸಗೊಳಿಸಿ ಆಕ್ರೋಶ

ಅಮೃತಸರ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಂಬ ವದಂತಿ ಬೆನ್ನಲ್ಲೇ ಆಕ್ರೋಶಗೊಂಡ ವಿದ್ಯಾರ್ಥಿಗಳು ಪಂಜಾಬ್‌ನ ಫಾಗ್ವಾರಾದಲ್ಲಿರುವ ಪ್ರಸಿದ್ಧ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ (LPU) ಕ್ಯಾಂಪಸ್‌ನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಅಪರಿಚಿತ ಹೊರಗಿನ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಸುದ್ದಿ ಕಾಲೇಜು ಕ್ಯಾಂಪಸ್ ನಲ್ಲಿ ಹಬ್ಬಿದೆ. ಸುದ್ದಿ ತಿಳಿಯುತ್ತಿದ್ದಂತೆ ಕಾಅಲೇಜಿನ ಹಾಸ್ಟೆಲ್ ಬಳಿ ಬೆಳಗಿನ ಜಾವ ಜಮಾವಣೆಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಆಡಳಿತ ಮಂಡಳಿಯ ಭದ್ರತಾ ಲೋಪದ ವಿರುದ್ಧ ಆಕ್ರೋಶ ಹೊರಹಾಕಿದರು. ನೋಡನೋಡುತ್ತಿದ್ದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಗೆ ಸೇರ್ಪಡೆಗೊಂಡು ಕ್ಯಾಂಪಸ್‌ನಲ್ಲಿ ವಿಧ್ವಂಸಕ ಕೃತ್ಯ ನಡೆಸಿದರು.

ಕಿಟಕಿ ಗಾಜುಗಳು, ಹೂವಿನ ಕುಂಡಗಳು ಮತ್ತು ಪೀಠೋಪಕರಣಗಳನ್ನು ಪುಡಿ ಪುಡಿ ಮಾಡಿ ಘೋಷಣೆ ಕೂಗಿದರು. ಆವರಣದಲ್ಲಿದ್ದ ಕೆಲವು ಕಟ್ಟಡಗಳ ವಸ್ತುಗಳು ಮತ್ತು ಆಸ್ತಿಗೆ ಬೆಂಕಿ ಹಚ್ಚಲಾಯಿತು. ಪರಿಸ್ಥಿತಿ ಕೈಮೀರುತ್ತಿದ್ದಂತೆ ವಿಶ್ವವಿದ್ಯಾಲಯದ ಖಾಸಗಿ ಭದ್ರತಾ ಸಿಬ್ಬಂದಿ ಅಸಹಾಯಕರಾದರು.

ಬೆಳಗಿನ ಜಾವ 4 ಗಂಟೆ ಸುಮಾರಿಗೆ ವಿಶ್ವವಿದ್ಯಾಲಯದ ಮುಖ್ಯ ದ್ವಾರವನ್ನು ಮುರಿದು ಹೊರಬಂದ ಪ್ರತಿಭಟನಾಕಾರರು, ಜಲಂಧರ್-ಫಾಗ್ವಾರಾ (ಚಂಡೀಗಢ-ಅಮೃತಸರ) ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ಕುಳಿತರು. ರಸ್ತೆಯ ಮಧ್ಯೆ ಕುಳಿತು ಘೋಷಣೆ ಕೂಗಿದ್ದರಿಂದ ಹೆದ್ದಾರಿಯುದ್ದಕ್ಕೂ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ಘಟನಾ ಸ್ಥಳಕ್ಕೆ ಭಾರಿ ಪೊಲೀಸ್ ಪಡೆಯೊಂದಿಗೆ ಧಾವಿಸಿದ ಕಪುರ್ತಲಾ ಎಸ್‌ಎಸ್‌ಪಿ ಗೌರವ್ ತೂರ್ ವಿದ್ಯಾರ್ಥಿಗಳೊಂದಿಗೆ ಸಂಧಾನ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

“ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ದೃಢೀಕರಿಸದ ಸುಳ್ಳು ಸಂದೇಶದಿಂದ ವಿದ್ಯಾರ್ಥಿಗಳು ಪ್ರಚೋದನೆಗೊಂಡಿದ್ದಾರೆ. ಇದುವರೆಗಿನ ತನಿಖೆಯಲ್ಲಿ ಯಾವುದೇ ಅತ್ಯಾಚಾರ ಘಟನೆ ನಡೆದಿರುವುದಕ್ಕೆ ಸಾಕ್ಷ್ಯಗಳಿಲ್ಲ, ಅಥವಾ ಅಂತಹ ಯಾವುದೇ ದೂರಾಗಲಿ ನಮಗೆ ಬಂದಿಲ್ಲ. ವದಂತಿಗಳನ್ನು ನಂಬಿ ಕ್ಯಾಂಪಸ್ ಆಸ್ತಿ ನಾಶಪಡಿಸಿ ಹೆದ್ದಾರಿ ತಡೆ ನಡೆಸಿರುವುದು ಸರಿಯಲ್ಲ. ವದಂತಿ ಹಬ್ಬಿಸಿದ ಕಿಡಿಗೇಡಿಗಳ ಮೂಲವನ್ನು ಸೈಬರ್ ಸೆಲ್ ಪತ್ತೆಹಚ್ಚುತ್ತಿದೆ” ಎಂದು ಎಸ್‌ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

ವಾಟ್ಸಾಪ್ ಗ್ರೂಪ್‌ಗಳು, ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್ (ಟ್ವಿಟರ್) ಪ್ಲಾಟ್‌ಫಾರ್ಮ್‌ಗಳಲ್ಲಿ ನಕಲಿ ಆಡಿಯೋ ಮತ್ತು ಮೆಸೇಜ್‌ಗಳನ್ನು ಹರಿಬಿಟ್ಟು ವಿದ್ಯಾರ್ಥಿಗಳನ್ನು ಹಿಂಸಾಚಾರಕ್ಕೆ ಪ್ರಚೋದಿಸಿದ ಕಿಡಿಗೇಡಿಗಳ ವಿರುದ್ಧ ಐಟಿ ಕಾಯ್ದೆಯಡಿ ಕಠಿಣ ಪ್ರಕರಣ ದಾಖಲಿಸಲು ಸೈಬರ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಪೊಲೀಸರು ವಿದ್ಯಾರ್ಥಿಗಳನ್ನು ಮನವೊಲಿಸಿ ಕ್ಯಾಂಪಸ್‌ಗೆ ಕಳುಹಿಸಿದ ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!