LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಕನಸಿನ ‘ಫುಡ್ ಕೋರ್ಟ್’ ನಿರ್ಮಾಣಕ್ಕೆ ಶಿಲಾನ್ಯಾಸ

ಶಿವಮೊಗ್ಗ: ನಾಳೆ ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಕನಸಿನ ‘ಫುಡ್ ಕೋರ್ಟ್’ ನಿರ್ಮಾಣಕ್ಕೆ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಶಿಲಾನ್ಯಾಸ ನೆರವೇರಲಿದೆ.

ಮಲೆನಾಡಿನ ಪ್ರಮುಖ ವಾಣಿಜ್ಯ ಹಾಗೂ ಪ್ರವಾಸಿ ಕೇಂದ್ರವಾದ ಸಾಗರ ನಗರವನ್ನು ಅತ್ಯಾಧುನಿಕ ಹಾಗೂ ಮಾದರಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರ ಕನಸಿನ ಮಹತ್ವಾಕಾಂಕ್ಷಿ ಯೋಜನೆಯಾದ ‘ಫುಡ್ ಕೋರ್ಟ್’ ನಿರ್ಮಾಣ ಕಾಮಗಾರಿಗೆ ಅಧಿಕೃತ ಚಾಲನೆ ದೊರೆಯುತ್ತಿದೆ.

ಸಾಗರ ನಗರದ ಹಳೆ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ನೂತನವಾಗಿ ತಲೆಎತ್ತಲಿರುವ ಈ ಸುಸಜ್ಜಿತ ಫುಡ್ ಕೋರ್ಟ್ ಕಾಮಗಾರಿಯ ಶಂಕುಸ್ಥಾಪನೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸೋಮವಾರ, ದಿನಾಂಕ 28.09.2026ರಂದು ಸಂಜೆ 5.00 ಗಂಟೆಗೆ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಶಾಸಕರ ಕನಸಿನ ಯೋಜನೆಗೆ ಗರಿಗೆದರಿದ ನಿರೀಕ್ಷೆ

ಸಾಗರ ನಗರದ ಹೃದಯಭಾಗದಲ್ಲಿ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಹಾಗೂ ಆಹಾರ ಪ್ರಿಯರಿಗೆ ಒಂದೇ ಸೂರಿನಡಿ ಸ್ವಚ್ಛ, ಶುಚಿ-ರುಚಿಯಾದ ಆಹಾರ ದೊರೆಯುವಂತಾಗಬೇಕು ಮತ್ತು ರಸ್ತೆಬದಿಯ ವ್ಯಾಪಾರಿಗಳಿಗೆ ಸುಸಜ್ಜಿತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಬಹುದಿನಗಳ ಕನಸಾಗಿತ್ತು.

ಹಳೆ ಖಾಸಗಿ ಬಸ್ ನಿಲ್ದಾಣದ ಜಾಗವನ್ನು ಸಮರ್ಪಕವಾಗಿ ಬಳಸಿಕೊಂಡು, ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಫುಡ್ ಕೋರ್ಟ್ ನಿರ್ಮಿಸುವ ಮೂಲಕ ನಗರದ ಸೌಂದರ್ಯ ಹೆಚ್ಚಿಸುವುದರ ಜೊತೆಗೆ ಸ್ಥಳೀಯ ಸಣ್ಣ ವ್ಯಾಪಾರಿಗಳ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಈ ಯೋಜನೆಯನ್ನು ರೂಪಿಸಲಾಗಿದೆ. ನಗರಸಭೆಯ ‘ಸ್ವಚ್ಛ ಸಾಗರ-ಸುಂದರ ಸಾಗರ’ ಪರಿಕಲ್ಪನೆಗೆ ಈ ಯೋಜನೆ ಮತ್ತಷ್ಟು ಬಲ ತುಂಬಲಿದೆ.

ಸಾರ್ವಜನಿಕರಿಗೆ ಮುಕ್ತ ಆಹ್ವಾನ

ಸಾಗರ ನಗರಸಭೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಮಹತ್ವದ ಶಂಕುಸ್ಥಾಪನಾ ಸಮಾರಂಭದಲ್ಲಿ ಸಾಗರ ನಗರದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ನಗರಸಭೆ ಪೌರಾಯುಕ್ತರಾದ ಹೆಚ್. ಕೆ. ನಾಗಪ್ಪ ಅವರು ಕೋರಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು...

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!