LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರಮನೆ ಗಜಪಡೆ ಕ್ಯಾಂಪ್‌ನಲ್ಲಿ ಹಬ್ಬದ ಕಳೆ: ಮಾವುತರು, ಕಾವಾಡಿಗಳ ಕುಟುಂಬಗಳಿಗೆ ಭರ್ಜರಿ ಗಿಫ್ಟ್!

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಗಜಪಡೆಯನ್ನು ಮುನ್ನಡೆಸುವ ಮಾವುತರು ಮತ್ತು ಕಾವಾಡಿಗಳ ಕುಟುಂಬಗಳಲ್ಲಿ ಇಂದು ಹಬ್ಬದ ಸಂಭ್ರಮ ಮನೆಮಾಡಿತ್ತು. ಮೈಸೂರು ಅರಮನೆ ಆವರಣದಲ್ಲಿರುವ ಗಜಪಡೆಗಳ ತಂಗುದಾಣದಲ್ಲಿ (ಕ್ಯಾಂಪ್) ಮಾವುತರು ಹಾಗೂ ಕಾವಾಡಿಗಳ ಕುಟುಂಬಸ್ಥರೊಂದಿಗೆ ಅಪರೂಪದ ಸ್ನೇಹ ಸಮ್ಮಿಲನ ಮತ್ತು ಉಡುಗೊರೆ ವಿತರಣಾ ಕಾರ್ಯಕ್ರಮ ನಡೆಯಿತು.

ಕಾಡಿನ ಮಕ್ಕಳ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಅವರಿಗೆ ಪ್ರೀತಿಯ ಗೌರವ ಸಲ್ಲಿಸುವ ಉದ್ದೇಶದಿಂದ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಅಧ್ಯಕ್ಷರು ಹಾಗೂ ಶಾಸಕರಾದ ಅನಿಲ್ ಚಿಕ್ಕಮಾದು ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರ ನೇತೃತ್ವದಲ್ಲಿ ಈ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಉಡುಗೊರೆಗಳ ವಿತರಣೆ: ಮಕ್ಕಳ ಮೊಗದಲ್ಲಿ ಮಂದಹಾಸ

ಅರಮನೆ ಆವರಣದಲ್ಲಿ ಗಜಪಡೆಯ ರಕ್ಷಕರಾದ ಮಾವುತರು ಹಾಗೂ ಕಾವಾಡಿಗಳನ್ನು ಒಂದೆಡೆ ಸೇರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾವುತರು ಮತ್ತು ಕಾವಾಡಿಗಳಿಗೆ ಟೀ ಶರ್ಟ್‌ಗಳು, ದಿನಬಳಕೆಯ ಅಗತ್ಯ ವಸ್ತುಗಳು, ಅವರ ಕುಟುಂಬದ ಮಹಿಳೆಯರಿಗೆ ನೂತನ ಸೀರೆಗಳು ಹಾಗೂ ಪುಟ್ಟ ಮಕ್ಕಳಿಗೆ ಆಟಿಕೆ ಸಾಮಗ್ರಿಗಳನ್ನು ವಿತರಿಸಿ ಸಂತಸ ಹಂಚಿಕೊಳ್ಳಲಾಯಿತು. ತಮ್ಮನ್ನು ಪ್ರೀತಿಯಿಂದ ಬರಮಾಡಿಕೊಂಡು ಉಡುಗೊರೆ ನೀಡಿದ್ದನ್ನು ಕಂಡು ಗಜಪಡೆ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದರು.

ಲಲಿತ್ ಮಹಲ್ ಅರಮನೆಯಲ್ಲಿ ರಾಜಾತಿಥ್ಯದ ಭೋಜನ

ಕಾರ್ಯಕ್ರಮದ ಮತ್ತೊಂದು ಪ್ರಮುಖ ವಿಶೇಷವೆಂದರೆ, ಗಜಪಡೆಗಳ ಮಾವುತರು, ಕಾವಾಡಿಗಳು ಹಾಗೂ ಅವರ ಕುಟುಂಬ ಸದಸ್ಯರೆಲ್ಲರಿಗೂ ಐತಿಹಾಸಿಕ ಲಲಿತ್ ಮಹಲ್ ಅರಮನೆಯಲ್ಲಿ (Lalitha Mahal Palace) ಅದ್ಧೂರಿ ಭೋಜನ ವ್ಯವಸ್ಥೆ ಮಾಡಿಸಲಾಗಿತ್ತು. ಅರಮನೆಯ ವೈಭವೋಪೇತ ಪರಿಸರದಲ್ಲಿ ಕಾಡಿನ ಮಕ್ಕಳು ರಾಜಾತಿಥ್ಯ ಸವಿದು ಸಂಭ್ರಮಿಸಿದರು.

ಶಾಸಕ ಅನಿಲ್ ಚಿಕ್ಕಮಾದು, ಕೆ.ವಿ. ಪ್ರಭಾಕರ್ ಮತ್ತು ಅವರ ಕುಟುಂಬದ ಸದಸ್ಯರು ಹಾಗೂ ಆಪ್ತ ಗೆಳೆಯರ ಬಳಗವು ಮಾವುತರ ಕುಟುಂಬಗಳ ಜೊತೆ ಯಾವುದೇ ಅಂತರವಿಲ್ಲದೆ ಬೆರೆತು, ಆತ್ಮೀಯತೆಯಿಂದ ಇಡೀ ದಿನವನ್ನು ಕಳೆದು ಗಮನ ಸೆಳೆದರು.

ಗಣ್ಯರ ಉಪಸ್ಥಿತಿ

ಈ ಅಪರೂಪದ ಮತ್ತು ಸಾರ್ಥಕ ಕಾರ್ಯಕ್ರಮದಲ್ಲಿ '9 ಡ್ರೀಮ್ಸ್' ಸಂಸ್ಥೆಯ ಮಂಜುನಾಥ್, ಆನಂದ್, ರಘು, ಬೈಪಾಸ್ ಮಂಜು, ಗಡಿ ಎಕ್ಸ್‌ಪ್ರೆಸ್‌ ನಾಗರಾಜ್ ಸೇರಿದಂತೆ ಹಲವು ಗಣ್ಯರು ಹಾಗೂ ಸ್ನೇಹ ಬಳಗದ ಸದಸ್ಯರು ಭಾಗವಹಿಸಿ, ಗಜಪಡೆ ಸಿಬ್ಬಂದಿಯೊಂದಿಗೆ ಸಂತಸದ ಕ್ಷಣಗಳನ್ನು ಹಂಚಿಕೊಂಡರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?