LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ನಿಧಿ ತಿವಾರಿ ಆತ್ಮಹತ್ಯೆ: ಕೊನೆಯ ಫೇಸ್‌ಬುಕ್ ಪೋಸ್ಟ್ ವೈರಲ್!

ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ 30 ವರ್ಷದ ಪ್ರಸಿದ್ಧ ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಹಾಗೂ ಮಾಡೆಲ್ ನಿಧಿ ತಿವಾರಿ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದ್ದು, ಪ್ರಾಣತ್ಯಾಗಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಅವರು 2024ರಲ್ಲಿ ‘ಮಿಸ್ ಪ್ರಿಟಿ ಇಂಡಿಯಾ’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು ಹಾಗೂ ಚಿತ್ರರಂಗಕ್ಕೆ ಪ್ರವೇಶಿಸುವ ಕನಸು ಹೊಂದಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಕೊನೆಯ ಪೋಸ್ಟ್ ವೈರಲ್: ನಿಧಿ ಅವರ ನಿಧನದ ನಂತರ ಸ್ವಯಂ ಪ್ರೀತಿಯ (Self-love) ಕುರಿತು ಅವರು ಮಾಡಿದ್ದ ಕೊನೆಯ ಫೇಸ್‌ಬುಕ್ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ತಮ್ಮ ಕೊನೆಯ ಪೋಸ್ಟ್‌ನಲ್ಲಿ ಅವರು, “ಈ ಅಪೂರ್ಣ ಹೃದಯವನ್ನು ಯಾರೂ ಪೂರ್ಣಗೊಳಿಸಲಿಲ್ಲ, ನಾನೇ ಸ್ವತಃ ಪೂರ್ಣಗೊಳಿಸಿದೆ. इसीलिए (ಅದಕ್ಕಾಗಿಯೇ) ಹೇಳುವುದು ಬೇರಾರನ್ನೋ ಪ್ರೀತಿಸುವ ಬದಲು ನಿಮ್ಮನ್ನು ನೀವೇ ಪ್ರೀತಿಸಿಕೊಳ್ಳಿ. ಕೊನೆಗೆ ಎಷ್ಟು ದಿನ ಅಂತ ಬೇರೆಯವರಲ್ಲಿ ನಿಮ್ಮನ್ನು ಹುಡುಕುತ್ತೀರಿ, ನಿಮ್ಮಲ್ಲೇ ನಿಮ್ಮನ್ನು ಹುಡುಕಿಕೊಳ್ಳಿ” ಎಂದು ಬರೆದುಕೊಂಡಿದ್ದರು.

ನಿಧಿ ಮಾಡೆಲಿಂಗ್, ಈವೆಂಟ್ ನಿರ್ವಹಣೆ ಹಾಗೂ ವಿಡಿಯೋ ಕಂಟೆಂಟ್ ಕ್ರಿಯೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್‌ಸ್ಟಾಗ್ರಾಮ್‌ನಲ್ಲಿ 712 ಅನುಯಾಯಿಗಳನ್ನು ಹಾಗೂ ಫೇಸ್‌ಬುಕ್‌ನಲ್ಲಿ ಸುಮಾರು 9 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಅವರು ಹೊಂದಿದ್ದರು.

ಕುಟುಂಬಸ್ಥರ ಆರೋಪವೇನು? ಕುಟುಂಬದ ಮೂಲಗಳ ಪ್ರಕಾರ, ಶನಿವಾರ ಸಂಜೆ ದೆಹಲಿ ಮೂಲದ ವ್ಯಕ್ತಿಯೊಬ್ಬರ ಜೊತೆ ನಿಧಿ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಈ ಸಂಭಾಷಣೆಯ ವೇಳೆ ಗಲಾಟೆಯಾಗಿದ್ದು, ತಕ್ಷಣವೇ ನಿಧಿ ತಮ್ಮ ಕೊಠಡಿಯನ್ನು ಲಾಕ್ ಮಾಡಿಕೊಂಡರು. ರಾತ್ರಿಯ ಊಟವನ್ನೂ ಮಾಡದೆ, ತಾಯಿಯ ಬಳಿ ತಮ್ಮನ್ನು ಒಂಟಿಯಾಗಿ ಬಿಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ.

ಬೆಳಿಗ್ಗೆ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆ ಸಂಬಂಧ ಮೊರ್ವಾ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಿಧಿ ಅವರು ತಾಯಿ ಮತ್ತು ತಂಗಿಯೊಂದಿಗೆ ಸಿಂಗ್ರೌಲಿಯಲ್ಲಿ ವಾಸಿಸುತ್ತಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ