LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗರ್ಭಕೋಶ ಶಸ್ತ್ರಚಿಕಿತ್ಸೆ ಯಡವಟ್ಟು ಆರೋಪ: ನಾಳೆ ಸಾಗರದಲ್ಲಿ ತಜ್ಞ ವೈದ್ಯರ ತಂಡದಿಂದ ಡಾ.ನಾಗೇಂದ್ರಪ್ಪ, ಸಂತ್ರಸ್ತೆ ವಿಚಾರಣೆ

ಶಿವಮೊಗ್ಗ: ಸಾಗರ ಮೂಲದ ಮಹಿಳೆಯೊಬ್ಬರಿಗೆ ನಡೆಸಲಾದ ಫೈಬ್ರಾಯ್ಡ್ ಗರ್ಭಾಶಯದ (Fibroid Uterus) ಶಸ್ತ್ರಚಿಕಿತ್ಸೆಯಿಂದ ಸಮಸ್ಯೆ ಉಂಟಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನಿಖೆಗೆ ಆದೇಶಿಸಿದೆ. ಪ್ರಕರಣದ ಸತ್ಯಾಸತ್ಯತೆ ತಿಳಿಯಲು ನಾಲ್ವರು ತಜ್ಞ ವೈದ್ಯರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ನಾಳೆ ಈ ತಂಡವು ಸಾಗರಕ್ಕೆ ಭೇಟಿ ನೀಡಲಿದೆ. ಜೊತೆಗೆ ವೈದ್ಯ ಡಾ.ನಾಗೇಂದ್ರಪ್ಪ, ಸಂತ್ರಸ್ತೆಯನ್ನು ವಿಚಾರಣೆ ನಡೆಸಲಿದೆ.

ಸಾಗರದ ಶ್ರೀಧರ ನಗರ ನಿವಾಸಿ ಮಹಿಳೆಯೊಬ್ಬರಿಗೆ ಗರ್ಭಕೋಶದ ಶಸ್ತ್ರಚಿಕಿತ್ಸೆಯ ವೇಳೆ ತೊಂದರೆಯಾಗಿದೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ದೂರು ಸಲ್ಲಿಕೆಯಾಗಿತ್ತು. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಆರೋಗ್ಯ ಇಲಾಖೆಯು ವಾಸ್ತವಾಂಶಗಳನ್ನು ಪರಿಶೀಲಿಸಲು ಮುಂದಾಗಿದೆ.

ತಜ್ಞ ವೈದ್ಯರ ಸಮಿತಿ ರಚನೆ

ಪ್ರಕರಣದ ತನಿಖೆಗಾಗಿ ಶಿವಮೊಗ್ಗ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಕಿರಣ್ ಎಸ್.ಕೆ. ಅವರ ಅಧ್ಯಕ್ಷತೆಯಲ್ಲಿ ನುರಿತ ವೈದ್ಯರನ್ನೊಳಗೊಂಡ ತಂಡವನ್ನು ನಿಯೋಜಿಸಲಾಗಿದೆ. ಈ ಸಮಿತಿಯಲ್ಲಿ:

  • ಡಾ. ಕಿರಣ್ ಎಸ್.ಕೆ. – ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು, ಶಿವಮೊಗ್ಗ

  • ಡಾ. ಪ್ರಕಾಶ್ – ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು, ಎಂ.ಸಿ.ಹೆಚ್ ಆಸ್ಪತ್ರೆ, ಶಿಕಾರಿಪುರ

  • ಡಾ. ನವೀನ್ ಜಿ.ಎಸ್. – ಶಸ್ತ್ರಚಿಕಿತ್ಸಾ ತಜ್ಞರು, ಸಾರ್ವಜನಿಕ ಆಸ್ಪತ್ರೆ, ಶಿಕಾರಿಪುರ

  • ಡಾ. ವಿನಯ್ ಬಿ.ಆರ್. – ಅರಿವಳಿಕೆ ತಜ್ಞರು, ಸಾರ್ವಜನಿಕ ಆಸ್ಪತ್ರೆ, ಶಿಕಾರಿಪುರ

ನಾಳೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ವಿಚಾರಣೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 29, 2026ರಂದು ಬೆಳಗ್ಗೆ 10:30ಕ್ಕೆ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮುಖಾಮುಖಿ ವಿಚಾರಣೆ ನಿಗದಿಯಾಗಿದೆ.

ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ಚಿಕಿತ್ಸಾ ದಾಖಲೆಗಳು, ವೈದ್ಯಕೀಯ ವರದಿಗಳು ಹಾಗೂ ಇತರ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯ ಮತ್ತು ಸ್ಥಳದಲ್ಲಿ ತಪ್ಪದೇ ಹಾಜರಾಗುವಂತೆ ಸಂತ್ರಸ್ತೆಗೆ ನೋಟಿಸ್ ಮೂಲಕ ಸೂಚಿಸಲಾಗಿದೆ. ಅಲ್ಲದೇ ಶಸ್ತ್ರಚಿಕಿತ್ಸೆ ವೇಳೆಯಲ್ಲಿ ಯಡವಟ್ಟು ಮಾಡಿದಂತ ವೈದ್ಯ ಡಾ.ನಾಗೇಂದ್ರಪ್ಪ ಅವರಿಗೂ ನೋಟಿಸ್ ನೀಡಲಾಗಿದ್ದು ಅವರನ್ನು ನಾಳೆ ತಜ್ಞರ ತಂಡವು ವಿಚಾರಣೆಗೆ ಒಳಪಡಿಸಲಿದೆ. ವಿಚಾರಣೆ ವೇಳೆ ಎಲ್ಲಾ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಮುಂದಿನ ಕ್ರಮಕ್ಕಾಗಿ ವರದಿ ಸಿದ್ಧಪಡಿಸಿ ಉನ್ನತ ಮಟ್ಟದ ಅಧಿಕಾರಿಗಳಿಗೆ ತಂಡ ಸಲ್ಲಿಸಲಿದೆ. ಆ ವರದಿ ಆಧರಿಸಿ ಯಾವ ಕ್ರಮ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

news_1790592378_0_341.webp

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ