LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ನಕಲಿ ಔಷಧಿ ದಂಧೆ ಪ್ರಕರಣ: ತನಿಖೆಯಲ್ಲಿ ವಿದೇಶಿ ಜಾಲ ಪತ್ತೆ, ಆರೋಪಿ ಪ್ರಶಾಂತ್‌ನಿಂದ ಸ್ಪೋಟಕ ಮಾಹಿತಿ ಬಹಿರಂಗ!

ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ನಕಲಿ ಔಷಧಿ ಜಾಲದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡಕ್ಕೆ (SIT) ಮತ್ತೊಂದು ಅಂತಾರಾಷ್ಟ್ರೀಯ ಜಾಲದ ಸುಳಿವು ಲಭ್ಯವಾಗಿದೆ. ನಿನ್ನೆಯಷ್ಟೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ದಂಧೆಯ ಪ್ರಮುಖ ಕಿಂಗ್‌ಪಿನ್ ಪ್ರಶಾಂತ್‌ನನ್ನು ಬಂಧಿಸಲಾಗಿತ್ತು. ಆತನನ್ನು ವಶಕ್ಕೆ ಪಡೆದು ಸತತ ವಿಚಾರಣೆಗೆ ಒಳಪಡಿಸಿದಾಗ ನಕಲಿ ಔಷಧಿ ದಂಧೆಯ ಹಿಂದೆ ವಿದೇಶಿ ಲಿಂಕ್‌ಗಳಿರುವ ಸತ್ಯ ಸ್ಪೋಟಕವಾಗಿ ಹೊರಬಿದ್ದಿದೆ.

ವಿಚಾರಣೆ ವೇಳೆ ಆರೋಪಿ ಪ್ರಶಾಂತ್‌ನ ವಿದೇಶಿ ಸಂಪರ್ಕಗಳ ಬಗ್ಗೆ ಹಲವು ಮಹತ್ವದ ಮಾಹಿತಿಗಳು ಲಭ್ಯವಾಗಿವೆ. ಈ ಹಿಂದೆ ಅಜರ್‌ಬೈಜಾನ್ ದೇಶದಲ್ಲಿದ್ದಾಗ ಪ್ರಶಾಂತ್‌ಗೆ ಅಲ್ಲಿನ ಸರ್ಕಾರ ದಂಡ ವಿಧಿಸಿ ಗಡಿಪಾರು (ಡಿಪೋರ್ಟ್) ಮಾಡಿತ್ತು. ಗಡಿಪಾರಾಗಿ ಭಾರತಕ್ಕೆ ಆಗಮಿಸುತ್ತಿದ್ದಂತೆಯೇ ಅಲರ್ಟ್ ಆಗಿದ್ದ ಎಸ್ಐಟಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲೇ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ತನಿಖೆ ಮುಂದುವರಿದಂತೆ, ಆರೋಪಿಯು ಟರ್ಕಿ ಮೂಲದ ಪ್ರಜೆಗಳೊಂದಿಗೆ ನೇರ ಸಂಪರ್ಕ ಹೊಂದಿರುವುದು ಬೆಳಕಿಗೆ ಬಂದಿದೆ.

ಆರೋಪಿ ಪ್ರಶಾಂತ್ ವಿದೇಶಗಳಿಂದ ನಕಲಿ ಔಷಧಿಗಳಿಗೆ ಅಗತ್ಯವಿರುವ ಬಾಟಲಿಗಳು, ಮುದ್ರಿತ ಸ್ಟಿಕ್ಕರ್‌ಗಳು ಹಾಗೂ ಪ್ಯಾಕಿಂಗ್ ಸಾಮಗ್ರಿಗಳನ್ನು ಸ್ಮಗ್ಲಿಂಗ್ ಮಾಡಲು ಸಂಚು ರೂಪಿಸಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿದೇಶಿ ಜಾಲದಿಂದಲೇ ಭಾರತಕ್ಕೆ ಈ ನಕಲಿ ಸಾಮಗ್ರಿಗಳನ್ನು ಸರಬರಾಜು ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಈ ಅಕ್ರಮ ಜಾಲದ ಬೇರುಗಳನ್ನು ಸೀಜ್ ಮಾಡಲು ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್