LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೂಕ ಇಳಿಕೆಗೆ ಮಾತ್ರವಲ್ಲ ಹೃದಯದ ಆರೋಗ್ಯಕ್ಕೂ ಸಹಕಾರಿ: ಸಸ್ಯಾಹಾರಿಗಳ ಸೌಭಾಗ್ಯ ಈ ಅಣಬೆ

ಇತ್ತೀಚಿನ ದಿನಗಳಲ್ಲಿ ಸಸ್ಯಾಹಾರಿಗಳ ನೆಚ್ಚಿನ ಆಹಾರ ಪದಾರ್ಥಗಳಲ್ಲಿ ಮಶ್ರೂಮ್ ಅಥವಾ ಅಣಬೆ ಪ್ರಮುಖ ಸ್ಥಾನ ಪಡೆದುಕೊಂಡಿದೆ. ರುಚಿಯಲ್ಲಿ ಮಾತ್ರವಲ್ಲದೆ ಪೌಷ್ಟಿಕಾಂಶಗಳ ವಿಷಯದಲ್ಲೂ ಅಣಬೆ ಅತ್ಯಂತ ಶ್ರೇಷ್ಠ ಆಹಾರವಾಗಿದೆ. ದೇಹಕ್ಕೆ ಅಗತ್ಯವಿರುವ ಅನೇಕ ಜೀವಸತ್ವಗಳು ಮತ್ತು ಖನಿಜಾಂಶಗಳನ್ನು ಹೊಂದಿರುವ ಮಶ್ರೂಮ್ ಅನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಪ್ರತಿರಕ್ಷಣಾ ವ್ಯವಸ್ಥೆ ಬಲವರ್ಧನೆ:

ಮಶ್ರೂಮ್‌ನಲ್ಲಿ ವಿಟಮಿನ್ ಡಿ, ಆಂಟಿಆಕ್ಸಿಡೆಂಟ್‌ಗಳು ಮತ್ತು ಸೆಲೆನಿಯಂ ಹೇರಳವಾಗಿವೆ. ಇವು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ. ನಿಯಮಿತವಾಗಿ ಅಣಬೆ ಸೇವಿಸುವುದರಿಂದ ಕಾಲೋಚಿತ ರೋಗಗಳು ಹಾಗೂ ಸೋಂಕುಗಳಿಂದ ದೇಹವನ್ನು ರಕ್ಷಿಸಿಕೊಳ್ಳಬಹುದು.

ಹೃದಯದ ಆರೋಗ್ಯ ಮತ್ತು ತೂಕ ನಿಯಂತ್ರಣ:

ಅಣಬೆಯಲ್ಲಿ ಕ್ಯಾಲೋರಿ ಮತ್ತು ಕೊಬ್ಬಿನಂಶ ಅತ್ಯಂತ ಕಡಿಮೆ ಇರುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಸೂಕ್ತ ಆಹಾರ. ಇದರಲ್ಲಿರುವ ಪೊಟ್ಯಾಶಿಯಂ ಮತ್ತು ನಾರಿನಂಶವು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಮತ್ತು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದರಿಂದ ಹೃದಯದ ಆರೋಗ್ಯ ವೃದ್ಧಿಸುತ್ತದೆ.

ಮಧುಮೇಹ ಮತ್ತು ಮೂಳೆಗಳ ಆರೋಗ್ಯ:

ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವ ಮಶ್ರೂಮ್ ಮಧುಮೇಹಿಗಳಿಗೆ ಅತ್ಯಂತ ಹಿತಕರ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಡನ್ನಾಗಿ ಹೆಚ್ಚಿಸುವುದಿಲ್ಲ. ಜೊತೆಗೆ ವಿಟಮಿನ್ ಡಿ ಸಮೃದ್ಧವಾಗಿರುವುದರಿಂದ ಮೂಳೆಗಳು ಮತ್ತು ಹಲ್ಲುಗಳ ಬಲವರ್ಧನೆಗೆ ನೆರವಾಗುತ್ತದೆ.

ಉತ್ತಮ ಪೋಷಕಾಂಶಗಳ ಗಣಿಯಾಗಿರುವ ಮಶ್ರೂಮ್ ಅನ್ನು ಸೂಪ್, ಪಲ್ಯ ಅಥವಾ ಸಾಂಬಾರ್ ರೂಪದಲ್ಲಿ ಆಹಾರದಲ್ಲಿ ಬಳಸುವುದರಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!