LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೋಡಿಯಂ ಪ್ರಯೋಗ: ‘ಡ್ರೋನ್’ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಹಾಗೂ ‘ಡ್ರೋನ್ ಪ್ರತಾಪ್’ ಎಂದೇ ಪ್ರಸಿದ್ಧರಾಗಿರುವ ಎನ್.ಎಂ. ಪ್ರತಾಪ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ತನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪ್ರತಾಪ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಈ ಮಹತ್ವದ ಆದೇಶ ನೀಡಿದೆ.

ಪ್ರತಾಪ್ ನಡೆಸಿದ ಪ್ರಯೋಗವು 10ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಕ್ರಮದಲ್ಲಿರುವ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ್ದು, ಇದರ ಹಿಂದಿನ ಉದ್ದೇಶ ಶೈಕ್ಷಣಿಕವಾಗಿತ್ತೇ ವಿನಃ ಯಾವುದೇ ದುರುದ್ದೇಶ ಕಂಡುಬಂದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಎಲೆಕ್ಟ್ರಾನಿಕ್ ತ್ಯಾಜ್ಯದಿಂದ ಸುಮಾರು 600 ಡ್ರೋನ್‌ಗಳನ್ನು ನಿರ್ಮಿಸಿರುವ ಪ್ರತಾಪ್, ಶೈಕ್ಷಣಿಕ ವಿಷಯಗಳ ಪ್ರಯೋಗಗಳನ್ನು ಸಾರ್ವಜನಿಕರಿಗೆ ವಿವರಿಸುವ ಉದ್ದೇಶದಿಂದ ಈ ವಿಡಿಯೋ ಮಾಡಿದ್ದಾರೆ. ಆದರೆ, ಪ್ರಯೋಗ ನಡೆಸಿದ ವಿಧಾನವನ್ನು ನ್ಯಾಯಾಲಯವು ಸಮರ್ಥಿಸುವುದಿಲ್ಲ ಅಥವಾ ಶ್ಲಾಘಿಸುವುದಿಲ್ಲ ಎಂದೂ ಪೀಠ ಹೇಳಿದೆ.

ಕ್ರಿಮಿನಲ್ ವಿಚಾರಣೆ ಮುಂದುವರಿಸಲು ಅಗತ್ಯವಿರುವ ದುರುದ್ದೇಶ ಸಾಬೀತಾಗದ ಹಿನ್ನೆಲೆಯಲ್ಲಿ ಎಫ್‌ಐಆರ್ ಹಾಗೂ ಸಂಬಂಧಿತ ಪ್ರಕರಣವನ್ನು ರದ್ದುಗೊಳಿಸಲಾಗಿದ್ದರೂ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಕೋರ್ಟ್ ಎಚ್ಚರಿಸಿದೆ. ಪ್ರತಾಪ್ ಅವರು ತಮ್ಮ ಸ್ನೇಹಿತನ ಖಾಸಗಿ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ 100 ಗ್ರಾಂ ಸೋಡಿಯಂ ಬಳಸಿ ನಡೆಸಿದ್ದ ಪ್ರಯೋಗದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ 2024ರ ಡಿಸೆಂಬರ್‌ನಲ್ಲಿ ಅವರನ್ನು ಬಂಧಿಸಿ, ಸ್ಫೋಟಕ ವಸ್ತುಗಳ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?