LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಪತ್ರಕರ್ತರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ 'ಗ್ರಾಮೀಣ ಪತ್ರಕರ್ತರ ಪಾಸ್' ವಿತರಣೆ

ಬೆಂಗಳೂರು : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಿಸುವ ಪ್ರಕ್ರಿಯೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮುಂದಾಗಿದ್ದು, ಅನುಮೋದನೆಗೊಂಡಿರುವ ಪಾಸ್‌ಗಳನ್ನು ಈ ವಾರದಲ್ಲೇ ಜಿಲ್ಲಾ ಮಟ್ಟದಲ್ಲಿ ವಿತರಿಸಲು ಸಿದ್ಧತೆ ನಡೆಸಿದೆ.

ಈ ಕುರಿತು ವಾರ್ತಾ ಇಲಾಖೆ ಆಯುಕ್ತರಾದ ಎಂ.ಎನ್. ಅನುಚೇತ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಭೇಟಿ ಮಾಡಿ ಚರ್ಚಿಸಿದರು. 

ಈ ಸಂದರ್ಭದಲ್ಲಿ ಅನುಮೋದನೆಗೊಂಡಿರುವ ಗ್ರಾಮೀಣ ಪತ್ರಕರ್ತರ ಬಸ್ ಪಾಸ್‌ಗಳು ಬಂದಿದ್ದು,  ಈ ವಾರದಲ್ಲೇ ಜಿಲ್ಲಾಮಟ್ಟದಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಯುಕ್ತರು ಖಚಿತಪಡಿಸಿದರು. ಈ ಬಗ್ಗೆ ಕೂಡಲೇ ಇಲಾಖೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲಾಗಿದ್ದ ಸುಮಾರು 400 ಅರ್ಜಿಗಳಿಗೆ ಆಗಸ್ಟ್ 7ರಂದು ವಾರ್ತಾ ಇಲಾಖೆ ಅನುಮೋದನೆ ನೀಡಿತ್ತು. ಆಯುಕ್ತ ಎಂ.ಎನ್. ಅನುಚೇತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿತ್ತು.

ಗ್ರಾಮೀಣ ಪತ್ರಕರ್ತರ ಬಹುದಿನಗಳ ಬೇಡಿಕೆಯಾಗಿದ್ದ ಬಸ್ ಪಾಸ್ ಯೋಜನೆ ಜಾರಿಗೆ ಕೆಯುಡಬ್ಲ್ಯೂಜೆ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದ್ದು, ಇದೀಗ ಅನುಮೋದನೆಗೊಂಡಿರುವ ಪಾಸ್‌ಗಳ ವಿತರಣೆಗೆ ಇಲಾಖೆ ಮುಂದಾಗಿರುವುದನ್ನು ಕೆಯುಡಬ್ಲ್ಯೂಜೆ ಸ್ವಾಗತಿಸಿದೆ.

ದಾಖಲೆಗಳ ಪರಿಶೀಲನೆ ನಡೆಸಿ ಬಸ್ ಪಾಸ್‌ಗಳಿಗೆ ಅನುಮೋದನೆ ನೀಡಿರುವ ವಾರ್ತಾ ಇಲಾಖೆಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ. ಇನ್ನೂ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ನಿಯಮಾನುಸಾರ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಸಂಘ ಮನವಿ ಮಾಡಿದೆ.

ಭೇಟಿ ಸಂದರ್ಭದಲ್ಲಿ ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದಗಳನ್ನು ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?