LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕರ ಪಿಎಫ್ ನಿಯಮ ಬದಲಾವಣೆ: ಮದ್ದೂರಿನ ಶಾಯಿ ಗಾರ್ಮೆಂಟ್ಸ್ ಕಾರ್ಮಿಕರ ಬೃಹತ್ ಪ್ರತಿಭಟನೆ

ಮಂಡ್ಯ :   ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭವಿಷ್ಯ ನಿಧಿ ಯೋಜನೆಯ ಹಣ ಹಿಂಪಡೆಯುವ ನಿಯಮಗಳ ಪರಿಷ್ಕರಣೆ ವಿರೋಧಿಸಿ ಮದ್ದೂರು ತಾಲೂಕಿನ ಗೆಜ್ಜಲಗೆರೆ ಶಾಹಿ ಗಾರ್ಮೆಂಟ್ಸ್‌ನ ಕಾರ್ಮಿಕರು ಮಂಗಳವಾರ ಕೆಲಸ ಸ್ಥಗಿತಗೊಳಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಶಾಯಿ ಗಾರ್ಮೆಂಟ್ಸ್ ಮುಂಭಾಗ ಬೆಳಿಗ್ಗೆ 8.30 ರ ವೇಳೆಗೆ ಜಮಾಯಿಸಿದ ಸಾವಿರಾರು ಕಾರ್ಮಿಕರು ರೊಚ್ಚಿಗೆದ್ದು ಬೆಂಗಳೂರು - ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆ ತಡೆಯಲು ಮುಂದಾದರು ಈ ವೇಳೆ ಕಾರ್ಮಿಕ ಸಂಘಟನೆಯ ಉಮೇಶ್ ಹಾಗೂ ಪೋಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿ ರಸ್ತೆ ತಡೆ ನಡೆಸದಂತೆ ಮನವಿ ಮಾಡಿದರು‌. ಆನಂತರ ಕೈಗಾರಿಕಾ ಪ್ರದೇಶದ ಮುಖ್ಯರಸ್ತೆಯಲ್ಲಿಯೇ ಪ್ರತಿಭಟನೆ ಪ್ರಾರಂಭಿಸಿ ಸತತ 5 ಗಂಟೆಗೂ ಹೆಚ್ಚು ಕಾಲ ಬಿರುಬಿಸಿಲಿನಲ್ಲಿ ರಸ್ತೆಯಲ್ಲಿ ಕುಳಿತು ಕೇಂದ್ರ ಸರ್ಕಾರ, ಕೇಂದ್ರ ಸಚಿವರುಗಳ ವಿರುದ್ಧ ಧಿಕ್ಕಾರಗಳನ್ನು ಕೂಗುತ್ತ ತಮ್ಮ ಆಕ್ರೋಶ ಹೊರಹಾಕಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮವನ್ನು ಶೀಘ್ರವೇ ರದ್ದುಪಡಿಸಬೇಕು. ಹೊಸ ನಿಯಮಗಳಿಂದ ಕಾರ್ಮಿಕರಿಗೆ ಸಂಕಷ್ಟ ಎದುರಾಗಲಿದೆ. ಕಾರ್ಮಿಕರು ಕೆಲಸ ತೊರೆದ ಎರಡು ತಿಂಗಳ ಬಳಿಕ ಪಿಎಫ್‌ನ ಸಂಪೂರ್ಣ ಮೊತ್ತವನ್ನು ಹಿಂಪಡೆಯಲು ಸಾಧ್ಯವಾಗುತ್ತಿದ್ದ ವ್ಯವಸ್ಥೆಯೇ ಕಾರ್ಮಿಕರಿಗೆ ಹೆಚ್ಚು ಅನುಕೂಲಕರವಾಗಿತ್ತು ಹೀಗಾಗಿ ಹಳೆಯ ನಿಯಮಗಳನ್ನೆ ಮುಂದುವರೆಸಬೇಕೆಂದು ಆಗ್ರಹಿಸಿದರು.

ನಮ್ಮ ಪಿಎಫ್ ಖಾತೆಯಲ್ಲಿರುವ ಮೊತ್ತವನ್ನು ಕಡ್ಡಾಯವಾಗಿ ಉಳಿಸಬೇಕು ನಮಗೆ ಆರೋಗ್ಯ, ಶಿಕ್ಷಣ, ವಿವಾಹ, ಮನೆ ನಿರ್ಮಾಣ ಸೇರಿದಂತೆ ವಿವಿಧ ಅಗತ್ಯ ಸಂದರ್ಭಗಳಲ್ಲಿ ಹಣದ ಅವಶ್ಯಕತೆ ಉಂಟಾಗುವ ಸಂದರ್ಭದಲ್ಲಿ ಹಳೆಯ ವ್ಯವಸ್ಥೆಯಲ್ಲಿದ್ದ ಹೆಚ್ಚಿನ ಹಣ ಹಿಂಪಡೆಯುವ ಅವಕಾಶ ಕಾರ್ಮಿಕರಿಗೆ ಹೆಚ್ಚಿನ ಉಪಯೋಗವಾಗುತ್ತಿತ್ತು. ಆದರೆ, ಹೊಸ ನಿಯಮಗಳಿಂದ ತಮ್ಮದೇ ಉಳಿತಾಯದ ಹಣವನ್ನು ತೆಗೆದುಕೊಳ್ಳಲು ವರ್ಷಗಳು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

news_1790677282_0_273.webp

ಪ್ರತಿಭಟನಾ ಸ್ಥಳಕ್ಕೆ ಆಯುಕ್ತರ ಭೇಟಿ

ಇನ್ನು ಮಧ್ಯಾಹ್ನ 12 ಗಂಟೆ ವೇಳೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮೈಸೂರು ವಲಯದ ಭವಿಷ್ಯ ನಿಧಿ ಆಯುಕ್ತ ಹಂಸರಾಜ್ ಪ್ರತಿಭಟನಾಕಾರರ ಜೊತೆಗೆ ಮಾತನಾಡಿ, ಪಿಎಫ್ ನಿಯಮಗಳು ಕೇಂದ್ರ ಕಾಯ್ದೆಯ ವ್ಯಾಪ್ತಿಗೆ ಒಳಪಟ್ಟಿದ್ದು, ತಾಲ್ಲೂಕು ಅಥವಾ ಜಿಲ್ಲಾ ಮಟ್ಟದಲ್ಲಿ ನಿಯಮ ಬದಲಾಯಿಸಲು ಸಾಧ್ಯವಿಲ್ಲ. ಈಗಾಗಲೇ 2017 ರಲ್ಲಿ ಇದೇ ರೀತಿ ನಿಯಮಗಳನ್ನು ತರಲಾಗಿತ್ತು. ಆದರೆ, ಕಾರ್ಮಿಕ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆ ನಿಯಮಗಳನ್ನು ಕೈ ಬಿಟ್ಟಿತ್ತು.  ಆದರೆ, ಈಗ ಮತ್ತೋಮ್ಮೆ ಈ ಕಾಯ್ದೆಯನ್ನು ಜಾರಿಗೆ ತಂದಿದೆ.

ಹೀಗಾಗಿ ಎಲ್ಲಾ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಂಸದರಾದ ತೇಜಸ್ವಿ ಸೂರ್ಯ ಅವರ ನಿಯೋಗವೊಂದು ದೆಹಲಿಗೆ ತೆರಳಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ಕೈಗೊಂಡಿದ್ದು, ಎರಡು ಮೂರು ದಿನಗಳಲ್ಲಿ ಸಭೆಯಲ್ಲಿ ನಡೆಯುವ ಚರ್ಚೆಗಳ ಬಗ್ಗೆ ತಿಳಿಯಲಿದೆ. ಹೀಗಾಗಿ ಕಾರ್ಮಿಕರು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ಆಯುಕ್ತರು ಸಾಕಷ್ಟು ಮನವೊಲಿಕೆಯ ಮೇರೆಗೆ ಪ್ರತಿಭಟನೆ ಹಿಂಪಡೆದ ಕಾರ್ಮಿಕರು ಸಭೆಯ ಅಂತಿಮ ತೀರ್ಮಾನ ಬಂದ ಮೇಲೆ ಕಾರ್ಮಿಕರ ಬೇಡಿಕೆ ಈಡೇರದಿದ್ದರೆ ಉಗ್ರ ಚಳುವಳಿಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಮಧ್ಯಾಹ್ನ 1.30 ನಂತರ ಪ್ರತಿಭಟನೆ ಕೈ ಬಿಟ್ಟು ತಮ್ಮ ತಮ್ಮ ಕೆಲಸಗಳಿಗೆ ಹಿಂತಿರುಗಿದರು.

ಇನ್ನು ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮಳವಳ್ಳಿ ಡಿವೈಎಸ್ಪಿ ಯಶವಂತ್ ಕುಮಾರ್ ನೇತೃತ್ವದಲ್ಲಿ 4 ಮಂದಿ ಸಿಪಿಐ ಸೇರಿದಂತೆ 100 ಕ್ಕೂ ಹೆಚ್ಚು ಮಂದಿ ಪೋಲೀಸರನ್ನು ನಿಯೋಜನೆ ಮಾಡಿಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಇದೇ ವೇಳೆ ಮೈಸೂರು ವಲಯದ ಭವಿಷ್ಯ ನಿಧಿ ಆಯುಕ್ತ ಮುರುಳಿಧರನ್, ಅಧಿಕಾರಿಗಳಾದ ಸೀಮಾ, ಪ್ರಕಾಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸವಿತಾ, ಶಾಯಿ ಗಾರ್ಮೆಂಟ್ಸ್ ಜನರಲ್ ಮ್ಯಾನೇಜರ್ ರಮೇಶ್ ಬಂಡಿ, ಉಪಾಧ್ಯಕ್ಷ ಹರಿದಾಸ್, ಕಾರ್ಮಿಕ ಸಂಘಟನೆಯ ಅಧ್ಯಕ್ಷೆ ನಿಧಿ ಭಟ್ಟಾಚಾರ್ಯ, ಉಪಾಧ್ಯಕ್ಷೆ ವಿ.ಎಸ್.ಶೃತಿ, ಜಂಟಿ ಕಾರ್ಯದರ್ಶಿ ಸಿ.ಸಿದ್ದು, ಪ್ರಧಾನ ಕಾರ್ಯದರ್ಶಿ ಉಮೇಶ್ ಸೇರಿದಂತೆ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!