LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನವೆಂಬರ್ ಒಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಕಮಿಷನ್ ದಂಧೆಯ ದಾಖಲೆ ಬಹಿರಂಗ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ವಾರ್ನಿಂಗ್!

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ನಿಂತುಹೋಗಿರುವ ಬಾಕಿ ಬಿಲ್‌ಗಳ ಹಣವನ್ನು ನವೆಂಬರ್ ಒಳಗಾಗಿ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ರಾಜ್ಯ ಸರ್ಕಾರಕ್ಕೆ ಖಡಕ್ ಡೆಡ್‌ಲೈನ್ ನೀಡಿದೆ. ನಿಗದಿತ ಸಮಯದೊಳಗೆ ಹಣ ಬಿಡುಗಡೆಯಾಗದಿದ್ದರೆ, ಸರ್ಕಾರದಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯ ಸ್ಫೋಟಕ ದಾಖಲೆಗಳನ್ನು ಬಹಿರಂಗಪಡಿಸುವುದಾಗಿ ಗುತ್ತಿಗೆದಾರರ ಸಂಘವು ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ನಾಯಕರು ಈ ಕುರಿತು ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್, ಕಳೆದ 4 ರಿಂದ 5 ವರ್ಷಗಳಿಂದ ಹಣ ಸಿಗದೆ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಾಕಿ ಹಣ ಬಿಡುಗಡೆಯಾಗದೆ ಅನೇಕ ಕುಟುಂಬಗಳು ಪರದಾಡುವಂತಾಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಯಾವುದೇ ಸೂಕ್ತ ಸ್ಪಂದನೆ ಅಥವಾ ಸಹಾಯ ಸಿಕ್ಕಿಲ್ಲ. ರಾಜ್ಯದ ಎಂಟು ಪ್ರಮುಖ ಇಲಾಖೆಗಳಲ್ಲಿ ಸರಿಸುಮಾರು 38,000 ಕೋಟಿ ರೂಪಾಯಿಗಳಷ್ಟು ಬಿಲ್ ಬಾಕಿ ಉಳಿದುಕೊಂಡಿದ್ದು, ಸ್ವತಃ ಮುಖ್ಯಮಂತ್ರಿಗಳೇ 40,000 ಕೋಟಿ ರೂ. ಬಾಕಿ ಇದೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಗಂಭೀರವಾದ ಕಮಿಷನ್ ಆರೋಪ ಮಾಡಿದ ಆರ್. ಮಂಜುನಾಥ್, ಕಳೆದ ಬಿಜೆಪಿ ಸರ್ಕಾರಕ್ಕಿಂತಲೂ ಪ್ರಸ್ತುತ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ಹೆಚ್ಚಾಗಿದೆ ಎಂದು ದೂರಿದ್ದಾರೆ. ಕಮಿಷನ್ ನೀಡಿದವರಿಗೆ ಮಾತ್ರವೇ ಬಿಲ್ ಪಾವತಿಯಾಗುತ್ತಿದ್ದು, ಪ್ರಾಮಾಣಿಕವಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಗುತ್ತಿಗೆದಾರರಿಗೆ ತಲುಪಬೇಕಾದ ಹಕ್ಕಿನ ಹಣವನ್ನು ಸರ್ಕಾರವು ತನ್ನ ಗ್ಯಾರಂಟಿ ಯೋಜನೆಗಳಿಗೆ ಅಕ್ರಮವಾಗಿ ಬಳಸಿಕೊಳ್ಳುತ್ತಿದೆ ಎಂದು ಅವರು ನೇರವಾಗಿ ಆರೋಪಿಸಿದರು.

ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ನವೆಂಬರ್ ಒಳಗಾಗಿ ಬಾಕಿ ಇರುವ ಬಿಲ್ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸರ್ಕಾರದ ಕಮಿಷನ್ ದಂಧೆಯ ವಿರುದ್ಧ ಸಮಗ್ರ ದಾಖಲೆಗಳನ್ನು ಮಾಧ್ಯಮಗಳು ಹಾಗೂ ಸಾರ್ವಜನಿಕರ ಮುಂದೆ ಬಿಡುಗಡೆ ಮಾಡಿ, ಉಗ್ರ ಹೋರಾಟ ರೂಪಿಸುವುದಾಗಿ ಗುತ್ತಿಗೆದಾರರ ಸಂಘವು ಸರ್ಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!