LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಣಿಪಾಲ ಕೆಎಂಸಿ ಆಸ್ಪತ್ರೆ ಕಟ್ಟಡದಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಯತ್ನ: ಐಸಿಯುನಲ್ಲಿ ಚಿಕಿತ್ಸೆ, ಸ್ಥಿತಿ ಗಂಭೀರ!

ಉಡುಪಿ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆಸ್ಪತ್ರೆಯ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಮಣಿಪಾಲದ ಖ್ಯಾತ ಕೆಎಂಸಿ ಆಸ್ಪತ್ರೆಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಎಂದು ಗುರುತಿಸಲಾಗಿದೆ. ಅನಾರೋಗ್ಯದ ಕಾರಣದಿಂದಾಗಿ ರಾಜೇಶ್ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಏಕಾಏಕಿ ಆಸ್ಪತ್ರೆಯ ಮೇಲಿನ ಮಹಡಿಯಿಂದ ಕೆಳಗೆ ಜಿಗಿದು ಪ್ರಾಣ ಕಳೆದುಕೊಳ್ಳಲು ಯತ್ನಿಸಿದ್ದಾರೆ.

ರೋಗಿ ಮಹಡಿಯಿಂದ ಕೆಳಗೆ ಜಿಗಿಯುತ್ತಿದ್ದ ಬೆಚ್ಚಿಬೀಳಿಸುವ ದೃಶ್ಯಗಳು ಸ್ಥಳದಲ್ಲಿದ್ದ ಸಾರ್ವಜನಿಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಮೇಲಿನಿಂದ ಬಿದ್ದ ರಭಸಕ್ಕೆ ರಾಜೇಶ್ ಅವರ ದೇಹದ ವಿವಿಧ ಭಾಗಗಳಿಗೆ ತೀವ್ರ ಸ್ವರೂಪದ ಪೆಟ್ಟಾಗಿದ್ದು, ಸ್ಥಿತಿ ಗಂಭೀರವಾಗಿದೆ. ತಕ್ಷಣವೇ ಎಚ್ಚೆತ್ತ ಆಸ್ಪತ್ರೆಯ ಸಿಬ್ಬಂದಿ ಅವರನ್ನು ರಕ್ಷಿಸಿ ತುರ್ತು ನಿಗಾ ಘಟಕಕ್ಕೆ (ICU) ದಾಖಲಿಸಿದ್ದು, ತೀವ್ರ ನಿಗಾದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ.

ರಾಜೇಶ್ ಅವರು ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಹಿತಿ ಕಲೆಹಾಕಲಾಗುತ್ತಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!