LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೋಗ ಜಲಪಾತವನ್ನು ಸರ್ವಋತು ಪ್ರವಾಸಿ ತಾಣವಾಗಿಸುವ ಕಾಮಗಾರಿ ಚುರುಕುಗೊಳಿಸಿ: ಸಚಿವ ಕೆ.ಜೆ.ಜಾರ್ಜ್ ಸೂಚನೆ

ಬೆಂಗಳೂರು: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಮಳೆಗಾಲಕ್ಕೆ ಮಾತ್ರ ಸೀಮಿತವಾಗದಂತೆ ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸುವ ಸರ್ವಋತು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೈಗೊಂಡಿರುವಂತಹ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್  ಅಧಿಕಾರಿಗಳಿಗೆ ನಿರ್ದೇಶನ ನೀಡಿದರು .

ಇಂದು ಇಂಧನ ಭವನದ ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ, ಜೋಗ ಜಲಪಾತ ಪ್ರದೇಶದಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ವರ್ಷವಿಡೀ ನಿಗದಿತ ಅವಧಿಯಲ್ಲಿ ಜಲಪಾತಕ್ಕೆ ನೀರು ಹರಿಸುವ ಉದ್ದೇಶಿತ ಯೋಜನೆಯ ಕುರಿತು ಬುಧವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಯೋಜನೆಗೆ ಸಂಬಂಧಿಸಿದ ತಾಂತ್ರಿಕ ಪರಿಶೀಲನೆ ಮತ್ತು ವಿವಿಧ ಇಲಾಖೆಗಳ ಅನುಮೋದನೆ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಸೂಚಿಸಿದರು.

ಜೋಗ ಜಲಪಾತದ ಮೇಲ್ಭಾಗಕ್ಕೆ ನೀರನ್ನು ಪಂಪ್ ಮಾಡಿ, ವರ್ಷವಿಡೀ ನಿಗದಿತ ಅವಧಿಯಲ್ಲಿ ಜಲಪಾತದ ದೃಶ್ಯ ವೈಭವವನ್ನು ಪ್ರವಾಸಿಗರಿಗೆ ಅನುಭವಿಸುವಂತೆ ಮಾಡುವ ಪ್ರಸ್ತಾವನೆಯ ಕುರಿತು ಚರ್ಚಿಸಿದ ಸಚಿವರು, ಇದಕ್ಕೆ ಅಗತ್ಯವಿರುವ ನೀರಿನ ಪ್ರಮಾಣ, ಪಂಪಿಂಗ್ ಸಾಮರ್ಥ್ಯ, ವಿದ್ಯುತ್ ಬಳಕೆ ಹಾಗೂ ನಿರ್ವಹಣಾ ವೆಚ್ಚವನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ತಾಂತ್ರಿಕ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಹಾಗೂ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಮಟ್ಟದ ಸಂಬಂಧಿತ ಅನುಮೋದನೆಗಳನ್ನು ತ್ವರಿತವಾಗಿ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾತ್ರಿ ವೇಳೆ ವಿದ್ಯುತ್ ಲಭ್ಯತೆಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ಸೌರಶಕ್ತಿ ಅಥವಾ ಪಂಪ್ಡ್ ಸ್ಟೋರೇಜ್ ಮಾದರಿಯಂತಹ ಪರ್ಯಾಯ ವ್ಯವಸ್ಥೆಗಳ ಕಾರ್ಯಸಾಧ್ಯತೆ ಮತ್ತು ಆರ್ಥಿಕ ಪರಿಣಾಮಗಳನ್ನೂ ಪರಿಶೀಲಿಸುವಂತೆ ಸೂಚಿಸಿದರು.

“ಜೋಗ ಜಲಪಾತವು ಕರ್ನಾಟಕದ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾಗಿದೆ. ಅದರ ಪ್ರವಾಸೋದ್ಯಮ ಸಾಮರ್ಥ್ಯವನ್ನು ಮಳೆಗಾಲಕ್ಕೆ ಮಾತ್ರ ಸೀಮಿತಗೊಳಿಸದೆ, ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸುವ ತಾಣವನ್ನಾಗಿ ರೂಪಿಸುವುದು ನಮ್ಮ ಉದ್ದೇಶ. ನಿಗದಿತ ಅವಧಿಯಲ್ಲಿ ನೀರು ಹರಿಸುವ ಪ್ರಸ್ತಾವನೆಯನ್ನು ತಾಂತ್ರಿಕ ಕಾರ್ಯಸಾಧ್ಯತೆ, ವಿದ್ಯುತ್ ವೆಚ್ಚ ಮತ್ತು ಸುರಕ್ಷತೆಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮುಂದುವರಿಸಬೇಕು. ಅಗತ್ಯ ಅನುಮೋದನೆಗಳನ್ನು ಪಡೆಯುವಲ್ಲಿ ಅನಗತ್ಯ ವಿಳಂಬವಾಗಬಾರದು. ಸದ್ಯದಲ್ಲೇ ಸನ್ಮಾನ್ಯ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು,” ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದರು.

ಪ್ರವಾಸಿಗರ ಸುರಕ್ಷತೆಗೆ ಆದ್ಯತೆ

ಪ್ರವಾಸಿಗರಿಗೆ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ನಿಗದಿತ ಅವಧಿಯಲ್ಲಿ ಜಲಪಾತದ ವೀಕ್ಷಣೆಗೆ ಅವಕಾಶ ಕಲ್ಪಿಸುವ ಕುರಿತು ಸೂಕ್ತ ವ್ಯವಸ್ಥೆ ರೂಪಿಸಬೇಕು. ಸಂಜೆ 5 ಅಥವಾ 6 ಗಂಟೆಯ ನಂತರದ ಪ್ರವಾಸಿಗರ ಪ್ರವೇಶ ಮತ್ತು ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಚಿವರು ಸೂಚಿಸಿದರು.

ಅಲ್ಲದೆ, ಪುರಾತತ್ವ ಇಲಾಖೆ ಸೇರಿದಂತೆ ಸಂಬಂಧಿತ ಸಂಸ್ಥೆಗಳಿಂದ ಅಗತ್ಯ ನಿರಾಕ್ಷೇಪಣಾ ಪತ್ರಗಳು ಮತ್ತು ಅನುಮೋದನೆಗಳನ್ನು ಪಡೆದು, ಜೋಗ್ ಮ್ಯಾನೇಜ್‌ಮೆಂಟ್ ಅಥಾರಿಟಿ ಹಾಗೂ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ (JLR) ಅಧಿಕಾರಿಗಳ ಸಮನ್ವಯದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

“ಜೋಗ ಜಲಪಾತವನ್ನು ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸುವ ತಾಣವನ್ನಾಗಿ ರೂಪಿಸಲು ಅಭಿವೃದ್ಧಿ ಕಾಮಗಾರಿಗಳು, ನೀರು ಹರಿಸುವ ವ್ಯವಸ್ಥೆ ಹಾಗೂ ಪ್ರವಾಸಿಗರ ಸುರಕ್ಷತೆಯನ್ನು ಸಮಗ್ರವಾಗಿ ಪರಿಗಣಿಸಬೇಕಿದೆ. ಯೋಜನೆಯ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತೆಯನ್ನು ಆಧರಿಸಿ KPCL, ಜೋಗ್ ಮ್ಯಾನೇಜ್‌ಮೆಂಟ್ ಅಥಾರಿಟಿ, JLR ಹಾಗೂ ಸಂಬಂಧಿತ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲಾಗುವುದು. ಅಗತ್ಯ ಅನುಮೋದನೆಗಳನ್ನು ಪಡೆದು, ಪ್ರವಾಸಿಗರಿಗೆ ಉತ್ತಮ ಮತ್ತು ಸುರಕ್ಷಿತ ಅನುಭವ ಒದಗಿಸುವ ನಿಟ್ಟಿನಲ್ಲಿ ಯೋಜನೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು,” ಎಂದು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ಸಭೆಯಲ್ಲಿ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ (KPCL) ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (KSTDC) ವ್ಯವಸ್ಥಾಪಕ ನಿರ್ದೇಶಕ ಶಿವಪ್ರಸಾದ್ ಪಿ.ಆರ್. ಸೇರಿದಂತೆ ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!