LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ನಿರ್ಣಯ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದ ಪಾಲಿಕೆ!

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾಜನ ಆಯೋಗದ ವರದಿಯೇ ಅಂತಿಮವಾಗಿದ್ದು, 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಎಂಬ ರಾಜ್ಯ ಸರ್ಕಾರದ ಸ್ಪಷ್ಟ ನಿಲುವನ್ನು ಬೆಂಬಲಿಸುವ ಮಹತ್ವದ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆ ಪರಿಷತ್ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಮೇಯರ್ ಪ್ರೀತಿ ಕಾಮಕರ್ ಅವರು ನೀಡಿದ ರೂಲಿಂಗ್ ಮೂಲಕ ಬೆಳಗಾವಿಯಲ್ಲಿ ಕನ್ನಡವೇ ಸಾರ್ವಭೌಮ ಎಂಬುದನ್ನು ಮತ್ತೊಮ್ಮೆ ಗಟ್ಟಿಯಾಗಿ ಸಾರಿದ್ದು, ಕಳೆದ ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಕರ್ನಾಟಕ ಪರ ನಿರ್ಣಯಕ್ಕೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ.

21 ವರ್ಷಗಳ ಬಳಿಕ ಎಂಇಎಸ್ ನಿರ್ಣಯಕ್ಕೆ ತಕ್ಕ ತಿರುಗೇಟು 2005ರಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನೇತೃತ್ವದ ಅಂದಿನ ಪಾಲಿಕೆ ಆಡಳಿತವು ಅಂಗೀಕರಿಸಿದ್ದ ಮಹಾರಾಷ್ಟ್ರ ಪರ ನಿರ್ಣಯಕ್ಕೆ, ಸುದೀರ್ಘ 21 ವರ್ಷಗಳ ಬಳಿಕ ಈ ಐತಿಹಾಸಿಕ ನಿರ್ಣಯದ ಮೂಲಕ ತಕ್ಕ ತಿರುಗೇಟು ನೀಡಿದಂತಾಗಿದೆ. ಪಾಲಿಕೆ ಸಭೆಯಲ್ಲಿ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಅವರು 2026ರ ಅಕ್ಟೋಬರ್ 29ರಂದು ಕಳುಹಿಸಿದ್ದ ಪತ್ರವನ್ನು ಸಭೆಯ ಗಮನಕ್ಕೆ ತಂದರು. ಕರ್ನಾಟಕ ವಿಧಾನಸಭೆಯು ಈಗಾಗಲೇ ಮಹಾಜನ ಆಯೋಗದ ವರದಿಯನ್ನು ಅಂತಿಮವೆಂದು ಪರಿಗಣಿಸಿ ಅದನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಂತೆ ಎರಡು ಬಾರಿ ನಿರ್ಣಯ ಅಂಗೀಕರಿಸಿರುವುದನ್ನು ಈ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು.

ಸರ್ವಾನುಮತದ ಅಂಗೀಕಾರಕ್ಕೆ ಮೇಯರ್ ರೂಲಿಂಗ್ ಸರ್ಕಾರದ ನಿರ್ದೇಶನದಂತೆ ಬೆಳಗಾವಿ ಮಹಾನಗರ ಪಾಲಿಕೆಯೂ ಕರ್ನಾಟಕ ಪರ ತನ್ನ ಸ್ಪಷ್ಟ ನಿಲುವನ್ನು ನಿರ್ಣಯದ ಮೂಲಕ ವ್ಯಕ್ತಪಡಿಸಬೇಕೆಂದು ಉಪಮೇಯರ್ ಹಣಮಂತ ಕೊಂಗಾಲಿ ಅವರು ಮೇಯರ್ ಪ್ರೀತಿ ಕಾಮಕರ್ ಅವರಿಗೆ ಮನವಿ ಮಾಡಿದರು. ತಕ್ಷಣವೇ ಈ ವಿಷಯವನ್ನು ಸಭೆಯ ಮುಂದಿಟ್ಟ ಮೇಯರ್, ಪ್ರಸ್ತಾವನೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ರೂಲಿಂಗ್ ನೀಡಿದರು. ಈ ಮೂಲಕ ಗಡಿ ವಿಚಾರದಲ್ಲಿ ಬೆಳಗಾವಿ ಪಾಲಿಕೆಯ ಅಧಿಕೃತ ನಿಲುವು ಸ್ಪಷ್ಟವಾಗಿ ದಾಖಲಾದಂತಾಗಿದ್ದು, ಹಿಂದಿನ ಸಭೆಗಳಲ್ಲಿ ಉಂಟಾಗಿದ್ದ ಎಲ್ಲಾ ಗೊಂದಲಗಳಿಗೂ ಸಂಪೂರ್ಣ ತೆರೆ ಬಿದ್ದಿದೆ.

ಎಂಇಎಸ್ ಸದಸ್ಯರ ಸಭಾತ್ಯಾಗ ಹಾಗೂ ವಿರೋಧ ಇನ್ನೊಂದೆಡೆ, ಈ ಕರ್ನಾಟಕ ಪರ ನಿರ್ಣಯ ಅಂಗೀಕಾರವನ್ನು ತೀವ್ರವಾಗಿ ವಿರೋಧಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮೂವರು ಬೆಂಬಲಿತ ಸದಸ್ಯರು ಸಭೆಯಿಂದ ಹೊರನಡೆದರು. ಗಡಿ ವಿವಾದದ ಪ್ರಕರಣವು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇರುವಾಗ, ಬೆಳಗಾವಿ ಪಾಲಿಕೆಯಲ್ಲಿ ಈ ರೀತಿಯ ನಿರ್ಣಯ ಕೈಗೊಂಡಿರುವುದು ಸರಿಯಲ್ಲ ಎಂದು ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?