LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ ಚಂದಾಪುರ ಕೆರೆಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಕೈಗಾರಿಕಾ ಮಾಲಿನ್ಯದ ವಿರುದ್ಧ ಕಠಿಣ ಕ್ರಮಕ್ಕೆ ಖಡಕ್ ಸೂಚನೆ

ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ ಸೇರಿದಂತೆ ಸುತ್ತಮುತ್ತಲಿನ ಕೆರೆಗಳಿಗೆ ಸಂಸ್ಕರಿಸದ ಕೈಗಾರಿಕಾ ಹಾಗೂ ಒಳಚರಂಡಿ ತ್ಯಾಜ್ಯ ನೀರು ಸೇರುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ, ಪರಿಸರ ನಿಯಮಗಳನ್ನು ಉಲ್ಲಂಘಿಸುವ ಕೈಗಾರಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ಆದೇಶ ನೀಡಿದ್ದಾರೆ.

​ಕೆರೆಗಳ ಮಾಲಿನ್ಯ ಪರಿಸ್ಥಿತಿ ಪರಿಶೀಲನೆ

​ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾದ ಶ್ರೀ ಶಿವಣ್ಣ ಅವರೊಂದಿಗೆ ಸಚಿವರು ಚಂದಾಪುರ, ರಾಮಕೃಷ್ಣಾಪುರ, ಹೆನ್ನಾಗರ, ಹೀಲಲಿಗೆ ಹಾಗೂ ಮುತ್ತಾನಲ್ಲೂರು ಕೆರೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಲೆಕ್ಟ್ರಾನಿಕ್ ಸಿಟಿ, ಜಿಗಣಿ ಮತ್ತು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಗಳಿಂದ ಸಂಸ್ಕರಿಸದ ರಾಸಾಯನಿಕ ತ್ಯಾಜ್ಯ ನೀರು ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಿಂದ ಒಳಚರಂಡಿ ನೀರು ನೇರವಾಗಿ ಕೆರೆಗಳಿಗೆ ಹರಿಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಸ್ಥಳ ಪರಿಶೀಲನೆ ನಡೆಸಿದ ಸಚಿವರು, ಯಾವುದೇ ಕಾರಣಕ್ಕೂ ಸಂಸ್ಕರಿಸದ ನೀರು ನೈಸರ್ಗಿಕ ಜಲಮೂಲಗಳನ್ನು ಸೇರಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

news_1790833553_1_790.webp

​ನಿಯಮ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

​ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (NGT) ನಿರ್ದೇಶನಗಳು ಹಾಗೂ ಪರಿಸರ ಸಂರಕ್ಷಣಾ ಕಾಯ್ದೆಗಳನ್ನು ಯಾವುದೇ ರಾಜಿ ಇಲ್ಲದೆ ಜಾರಿಗೊಳಿಸಬೇಕು ಎಂದು ಸಚಿವರು ಸೂಚಿಸಿದರು. ನಿಯಮಗಳನ್ನು ಗಾಳಿಗೆ ತೂರಿ ಸಂಸ್ಕರಿಸದ ತ್ಯಾಜ್ಯ ನೀರನ್ನು ನೈಸರ್ಗಿಕ ಹಳ್ಳ-ಕೆರೆಗಳಿಗೆ ಹರಿಸುವ ಕಾರ್ಖಾನೆಗಳು ಹಾಗೂ ಇವುಗಳ ನಿಯಂತ್ರಣದಲ್ಲಿ ನಿರ್ಲಕ್ಷ್ಯ ತೋರುವ ಸ್ಥಳೀಯ ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

​ಸಂಸ್ಕರಣಾ ಘಟಕಗಳ ಕಾಮಗಾರಿಗೆ ಗಡುವು

​ತ್ಯಾಜ್ಯ ನೀರನ್ನು ಶುದ್ಧೀಕರಿಸಲು ಕೈಗೆತ್ತಿಕೊಳ್ಳಲಾಗಿರುವ ನಾಲ್ಕು ಪ್ರಮುಖ ನೀರು ಸಂಸ್ಕರಣಾ ಘಟಕಗಳ (STP/ETP) ಪ್ರಗತಿಯನ್ನು ಸಚಿವರು ಪರಿಶೀಲಿಸಿದರು. ಈ ಘಟಕಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ನಿಗದಿತ ಕಾಲಮಿತಿಯೊಳಗೆ ಕಾರ್ಯಾಚರಣೆಗೆ ತರಲು ಸ್ಪಷ್ಟವಾದ ಸಮಯಬದ್ಧ ಕಾರ್ಯಯೋಜನೆ ರೂಪಿಸಿ ಜಾರಿಗೆ ತರುವಂತೆ ನಗರಸಭೆ ಹಾಗೂ ಕೆಎಸ್‌ಪಿಸಿಬಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

news_1790833553_0_213.webp

​ನಿರಂತರ ನಿಗಾಕ್ಕೆ ವಿಶೇಷ ಮೇಲ್ವಿಚಾರಣಾ ತಂಡಗಳು

​ಕೈಗಾರಿಕಾ ತ್ಯಾಜ್ಯ ನೀರು ಅಕ್ರಮವಾಗಿ ಜಲಮೂಲಗಳಿಗೆ ಸೇರುವುದನ್ನು ತಡೆಯಲು ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ, ಜಿಗಣಿ ಹಾಗೂ ಅತ್ತಿಬೆಲೆ ಕೈಗಾರಿಕಾ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಲು ಸೂಚಿಸಲಾಗಿದೆ. ಇದಕ್ಕಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ವಿಶೇಷ ಮೇಲ್ವಿಚಾರಣಾ ತಂಡಗಳನ್ನು ನಿಯೋಜಿಸಲಾಗುತ್ತಿದ್ದು, ನಿಯಮಿತವಾಗಿ ತಪಾಸಣೆ ನಡೆಸಿ ನಿಯಮಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದರು.

​ಜಲಮೂಲಗಳ ಪುನರುಜ್ಜೀವನಕ್ಕೆ ಸರ್ಕಾರದ ಬದ್ಧತೆ

​ಪರಿಶೀಲನೆ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸಿದ ಸಚಿವರು, ಕಲುಷಿತಗೊಂಡ ಕೆರೆಗಳನ್ನು ಹಂತ-ಹಂತವಾಗಿ ಪುನರುಜ್ಜೀವನಗೊಳಿಸಲು ಸರ್ಕಾರ ಮೊದಲ ಆದ್ಯತೆ ನೀಡಲಿದೆ ಎಂದು ಭರವಸೆ ನೀಡಿದರು. ಕೆರೆಗಳು ಪರಿಸರ ಸಮತೋಲನಕ್ಕೆ ಮಾತ್ರವಲ್ಲದೆ ಜನರ ಆರೋಗ್ಯ ಮತ್ತು ಅಂತರ್ಜಲ ರಕ್ಷಣೆಗೆ ಅತ್ಯಂತ ಮುಖ್ಯವಾಗಿದ್ದು, ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುವವರನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

​ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳಾದ ಆರ್. ಕೆ. ರಮೇಶ್, ಆರ್. ಗೋಕೂಲ್ (IFS), ಶ್ರೀನಿವಾಸುಲು (IFS), ಕ್ಯಾಪ್ಟನ್ ಸಂತೋಷ್ (KAS), ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?