LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಗರದ ಆನಂದಪುರಲ್ಲಿ ಸಾಲಬಾಧೆ ತಾಳಲಾರದೆ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಸಾಗರ : ಕೆಲಸವಿಲ್ಲದ ಕೊರಗು ಹಾಗೂ ಕೈಸಾಲ ತೀರಿಸಲಾಗದ ಮಾನಸಿಕ ಒತ್ತಡದಿಂದ ಮನನೊಂದ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

​ಮೃತರನ್ನು ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದ ಚಾಂದ್‌ಪಾಷಾ (46) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಡ್ರೈವರ್ ಆಗಿದ್ದ ಇವರು, ಜೀವನ ನಿರ್ವಹಣೆಗಾಗಿ ಹಲವೆಡೆ ಕೈಸಾಲ ಮಾಡಿಕೊಂಡಿದ್ದರು. ಆದರೆ ಇತ್ತೀಚೆಗೆ ಸೂಕ್ತ ಕೆಲಸವಿಲ್ಲದೆ ಆದಾಯವಿಲ್ಲದ ಕಾರಣ, ಸಾಲ ತೀರಿಸಲು ಸಾಧ್ಯವಾಗದೆ ತೀವ್ರವಾಗಿ ಕೊರಗುತ್ತಿದ್ದರು ಎಂದು ತಿಳಿದುಬಂದಿದೆ.

​ಘಟನೆಯ ವಿವರ:

ಸೆಪ್ಟೆಂಬರ್ 30ರ ಸಂಜೆ ಸುಮಾರು 6:30ರ ಸುಮಾರಿಗೆ ಮನೆಯಿಂದ ಹೊರಟ ಚಾಂದ್‌ಪಾಷಾ ಅವರು ರಾತ್ರಿ 10 ಗಂಟೆಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹಾಗೂ ಸಂಬಂಧಿಕರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದಾರೆ. ಅಕ್ಟೋಬರ್ 1ರ ಮುಂಜಾನೆ 7:30ರ ವೇಳೆಗೆ ಚಂಪಕಸರ ಕೆರೆ ಬಳಿ ಹುಡುಕಾಡಿದಾಗ, ಚಾಂದ್‌ಪಾಷಾ ಅವರ ಮೃತದೇಹ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ. ಬಳಿಕ ಶವವನ್ನು ಮೇಲಕ್ಕೆತ್ತಿ ಆನಂದಪುರ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

​ಕೈ ಸಾಲ ತೀರಿಸಲಾಗದೆ ಮತ್ತು ಕೆಲಸವಿಲ್ಲದೆ ಖಿನ್ನತೆಗೆ ಒಳಗಾಗಿ ಚಂಪಕಸರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಮ್ಮ ಶಹೀದ್ ಪಾಷಾ ಅವರು ನೀಡಿದ ದೂರಿನ ಮೇರೆಗೆ, ಆನಂದಪುರ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್.ಎಸ್ ಕಾಯ್ದೆಯಡಿ ಯುಡಿಆರ್ (UDR) ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ. 

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ