LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಕೊರತೆ ಹಿನ್ನೆಲೆ: ಗ್ರಾಮೀಣ ಅಂತರ್ಜಲ ಮಟ್ಟದ ವಿವರ ಸಂಗ್ರಹಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ  ಸಮಸ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ 5927 ಪಂಚಾಯತಿಗಳ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟದ ವಿವರವನ್ನು ಸಮರೋಪಾದಿಯಲ್ಲಿ ಸಂಗ್ರಹಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿದೆ. ಬೇಸಿಗೆಯಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸುತ್ತದೆ. ಹೀಗಾಗಿ ಮುಂದಿನ ಮುಂಗಾರಿನವರೆಗೆ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಅಂದಾಜಿಸಿ, ಸಮರ್ಪಕ ಯೋಜನೆ ರೂಪಿಸಿ ಎಂದು ನಿರ್ದೇಶನ ನೀಡಿದರು.

ಪ್ರಸ್ತುತ ಎಷ್ಟು ಗ್ರಾಮಗಳಿಗೆ ಕೊಳವೆ ಬಾವಿ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಬೇಸಿಗೆಯಲ್ಲಿ ಎಷ್ಟು ಕೊಳವೆ ಬಾವಿಗಳು ಬತ್ತಿಹೋಗುವ ಸಾಧ್ಯತೆ ಇದೆ. ಇಲ್ಲಿ ಪರ್ಯಾಯ ಜಲ ಮೂಲವೇನು. ಮೇಲ್ಮೈ ನೀರಿನ ಲಭ್ಯತೆ ಇದ್ದಲ್ಲಿ ಅಥವಾ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದರೆ ಜಲ ಪೂರೈಕೆಗೆ ಎಷ್ಟು ಟ್ಯಾಂಕರ್ ಗಳನ್ನು ಬಾಡಿಗೆಗೆ ಪಡೆಯಬೇಕಾಗುತ್ತದೆ ಎಂಬ ಸಂಪೂರ್ಣ ಯೋಜನೆ ರೂಪಿಸುವಂತೆ ತಿಳಿಸಿದರು.

ಅಂತರ್ಜಲ ಹಾಗೂ ಮೇಲ್ಮೈ ಜಲ ಎರಡೂ ಲಭ್ಯವಿಲ್ಲದಂತಹ ಸೂಕ್ಷ್ಮ ಪ್ರದೇಶಗಳಿಗೆ ಸಮೀಪದಲ್ಲಿ ಎಲ್ಲಿ ನೀರಿನ ಲಭ್ಯತೆ ಇದೆ. ಅದನ್ನು ಗ್ರಾಮಗಳಿಗೆ ಪೂರೈಸಲು ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಈಗಿನಿಂದಲೇ ಯೋಜನೆ ರೂಪಿಸುವಂತೆ ತಿಳಿಸಿದರು.

ಹಿತಮಿತವಾಗಿ ನೀರು ಬಳಸಲು ಜಾಗೃತಿ ಮೂಡಿಸಿ:

ರಾಜ್ಯದ ಬಹುತೇಕ ಕಡೆ ಮಳೆಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, ಗ್ರಾಮೀಣ ಜನರಿಗೆ, ಕೈಗಾರಿಕೆ, ಶಾಲೆ, ಕಾಲೇಜು, ವಿವಿಧ ಸಂಸ್ಥೆಗಳಿಗೆ ಹಿತಮಿತವಾಗಿ ನೀರು ಬಳಸುವಂತೆ ಜಾಗೃತಿ ಮೂಡಿಸಲು ಈಶ್ವರ ಖಂಡ್ರೆ ಸೂಚಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?