LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಬೆಳ್ಳಿಪರೆದೆಗೆ ಶಿವಣ್ಣನ ‘ಬೇಲ್’ ಅಬ್ಬರ: ಕರುನಾಡ ಚಕ್ರವರ್ತಿಯ ಪವರ್‌ಫುಲ್ ಅವತಾರ ನೋಡಲು ಅಭಿಮಾನಿಗಳು ಕಾತರ!

ಕನ್ನಡ ಚಿತ್ರರಂಗದ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರ ವಿಭಿನ್ನ ಹಾಗೂ ಪವರ್‌ಫುಲ್ ಅವತಾರದ ಬಹುನಿರೀಕ್ಷಿತ ‘ಬೇಲ್’ ಸಿನಿಮಾ ನಾಳೆ ಜಗತ್ತಿನಾದ್ಯಂತ ಬೆಳ್ಳಿಪರದೆಯ ಮೇಲೆ ಅದ್ಧೂರಿಯಾಗಿ ತೆರೆಕಾಣಲು ಸಜ್ಜಾಗಿದೆ. ಹ್ಯಾಟ್ರಿಕ್ ಹೀರೋ ಶಿವಣ್ಣ ಅವರ ಹೊಸ ಲುಕ್ ಮತ್ತು ಮಾಸ್ ಮ್ಯಾನರಿಸಂ ಈಗಾಗಲೇ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹೆಚ್ಚಿಸಿದ್ದು, ಸಿನಿಮಾ ವೀಕ್ಷಿಸಲು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಈ ಚಿತ್ರವನ್ನು ಯಶಸ್ವಿ ನಿರ್ದೇಶಕ ಪವನ್ ಒಡೆಯರ್ ನಿರ್ದೇಶಿಸಿದ್ದು, ಪ್ರಸಿದ್ಧ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ ಅವರು ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಸ್ಟಾರ್ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಅವರ ಹಿನ್ನೆಲೆ ಸಂಗೀತ ಮತ್ತು ಹಾಡುಗಳಿದ್ದು, ಧ್ವನಿಪಥವು ಈಗಾಗಲೇ ಚಾರ್ಟ್‌ಬಸ್ಟರ್ ಆಗಿ ಸದ್ದು ಮಾಡುತ್ತಿದೆ.

ಚಿತ್ರದಲ್ಲಿ ಶಿವಣ್ಣ ಅವರ ಜೊತೆಗೆ ದೀಕ್ಷಿತ್ ಶೆಟ್ಟಿ, ಸಂಜನಾ ಆನಂದ್, ಲೂಸ್ ಮಾದ ಯೋಗಿ, ಸಂಗೀತಾ, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಹಾಗೂ ಕಿರಣ್ ಶ್ರೀನಿವಾಸ್ ಸೇರಿದಂತೆ ದೊಡ್ಡ ತಾರಾಗಣವೇ ಅಭಿನಯಿಸಿದೆ. ಪ್ರತಿಯೊಂದು ಪಾತ್ರವೂ ಕಥೆಗೆ ಪ್ರಮುಖ ತಿರುವು ನೀಡಲಿದ್ದು, ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ನೀಡುವ ಭರವಸೆಯನ್ನು ಚಿತ್ರತಂಡ ನೀಡಿದೆ.

ತಾಂತ್ರಿಕವಾಗಿ ಅತ್ಯಂತ ಶ್ರೀಮಂತವಾಗಿ ಮೂಡಿಬಂದಿರುವ ಈ ಚಿತ್ರಕ್ಕೆ ವೈದ್ಯ ಎಸ್ ಅವರ ಛಾಯಾಗ್ರಹಣ ಹಾಗೂ ಶಶಾಂಕ್ ನಾರಾಯಣ ಅವರ ಸಂಕಲನವಿದೆ. ಕಲಾ ನಿರ್ದೇಶನವನ್ನು ಗುಣ ಹಾಗೂ ನೃತ್ಯ ನಿರ್ದೇಶನವನ್ನು ಮುರಳಿ ಮಾಸ್ಟರ್ ನಿಭಾಯಿಸಿದ್ದಾರೆ. ನಾಳೆ ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಲಿದ್ದು, ಶಿವಣ್ಣನ ಅಬ್ಬರ ನೋಡಲು ಅಭಿಮಾನಿಗಳು ಸಿದ್ಧರಾಗಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!