LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಪಂಗಡದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸುವುದೇ ನನ್ನ ಗುರಿ: ಸಚಿವ ಟಿ.ರಘುಮೂರ್ತಿ

ಬೆಂಗಳೂರು : ವಾಲ್ಮೀಕಿ/ನಾಯಕ ಸಮುದಾಯ ಒಳಗೊಂಡಂತೆ ಪರಿಶಿಷ್ಟ ಪಂಗಡದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು. ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ತಿಳಿಸಿದ್ದಾರೆ.

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಗುರುವಾರ ನಡೆದ ವಾಲ್ಮೀಕಿ/ನಾಯಕ ಸಮುದಾಯದ ಕುಂದುಕೊರತೆಗಳ ಸಭೆಯಲ್ಲಿ ಸಚಿವರು ಈ ಭರವಸೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ನೂರಾರು ಬಾಂಧವರು, ಸರ್ಕಾರವು ಸಮುದಾಯಕ್ಕಾಗಿ ಕಾಯ್ದಿರಿಸಲಾದ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳನ್ನು ತ್ವರಿತವಾಗಿ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮವನಿ ಮಾಡಿದರು ಮತ್ತು ಈ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಇದನ್ನು ಆಲಿಸಿದ ನಂತರ ಉತ್ತರ ನೀಡಿದ ಸಚಿವ ರಘುಮೂರ್ತಿ, ಪರಿಶಿಷ್ಟ ಪಂಗಡದ ವ್ಯಾಪ್ತಿಗೆ ಬರುವ ವಾಲ್ಮೀಕಿ/ನಾಯಕ ಸಮುದಾಯದ ಕೊನೆಯ ವ್ಯಕ್ತಿಗೂ ಸರ್ಕಾರದ ಎಲ್ಲಾ ಯೋಜನೆಗಳು, ಕಾರ್ಯಕ್ರಮಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸರ್ಕಾರ ಕೂಡ ಈ ವಿಷಯದಲ್ಲಿ ಬದ್ಧತೆ ತೋರುತ್ತದೆ ಎಂದು ಭರವಸೆ ನೀಡಿದರು.

ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಆಯೋಗ ರಚಿಸುವ ಕುರಿತು ಒತ್ತಾಯಗಳು ಕೇಳಿಬಂದಿವೆ. ಈ ನಿಟ್ಟಿನಲ್ಲಿ ಸೂಕ್ತ ವೇದಿಕೆಯಲ್ಲಿ ಚರ್ಚೆ ಮಾಡಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಇದಕ್ಕಾಗಿ ಎಲ್ಲ ರೀತಿಯ ಪ್ರತ್ನ ಮಾಡುತ್ತೇನೆ ಎಂದರು.

ಸಮುದಾಯದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ನಿಂತರೆ ನಮ್ಮ ಅಭಿವೃದ್ಧಿ, ಏಳಿಗೆ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸೋಣ ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಪರಿಶಿಷ್ಟ ಪಂಗಡ ಸಮುದಾಯದ ಯೋಜನೆಗಳು, ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕುರಿತು ಮನವಿ ಸಲ್ಲಿಸುತ್ತೇನೆ. ಯಾವುದೇ ಕಾರಣಕ್ಕೂ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಸಚಿವ ಟಿ. ರಘುಮೂರ್ತಿ ಸ್ಪಷ್ಟಪಡಿಸಿದರು. 

ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಜಗಳೂರು ಶಾಸಕ ದೇವೇಂದ್ರಪ್ಪ, ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಯೋಗೇಶ್ ಬಾಬು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎಂ. ಕನಗವಲ್ಲಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಗಂಟಿ ಕಲ್ಯಾಣ ಇಲಾಖೆಯ ನಿರ್ದೇಶಕ ಅಶೋಕ್ ಡಿ.ಆರ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?