LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು-ರಾಮೇಶ್ವರಂ ನಡುವೆ ವಿಶೇಷ ರೈಲುಗಳ ಸಂಚಾರ

ಮೈಸೂರು: ದಸರಾ, ದೀಪಾವಳಿ ಹಾಗೂ ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈರುತ್ಯ ರೈಲ್ವೆಯು ಮೈಸೂರು ಮತ್ತು ರಾಮೇಶ್ವರಂ ನಡುವೆ ಪ್ರತಿ ದಿಕ್ಕಿನಲ್ಲಿ ಒಟ್ಟು 9 ಪ್ರಯಾಣಗಳ (ಟ್ರಿಪ್) ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲಿದೆ.

ರೈಲು ಸಂಖ್ಯೆ 06263 ಮೈಸೂರು-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್, 05.10.2026 ರಿಂದ 30.11.2026 ರವರೆಗೆ ಪ್ರತಿ ಸೋಮವಾರ 18:35 ಗಂಟೆಗೆ ಮೈಸೂರಿನಿಂದ ಹೊರಟು, ಮರುದಿನ (ಮಂಗಳವಾರ) 11:00 ಗಂಟೆಗೆ ರಾಮೇಶ್ವರಂ ತಲುಪಲಿದೆ. ಮರುಮಾರ್ಗದಲ್ಲಿ, ರೈಲು ಸಂಖ್ಯೆ 06264 ರಾಮೇಶ್ವರಂ-ಮೈಸೂರು ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್, 06.10.2026 ರಿಂದ 01.12.2026 ರವರೆಗೆ ಪ್ರತಿ ಮಂಗಳವಾರ 15:30 ಗಂಟೆಗೆ ರಾಮೇಶ್ವರಂನಿಂದ ಹೊರಟು, ಮರುದಿನ (ಬುಧವಾರ) 07:45 ಗಂಟೆಗೆ ಮೈಸೂರಿಗೆ ಆಗಮಿಸಲಿದೆ.

ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ರಾಮನಗರಂ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಹೊಸೂರು, ಧರ್ಮಪುರಿ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗಲ್, ಮಧುರೈ, ಮಾನಾಮಧುರೈ, ಪರಮಕ್ಕುಡಿ ಮತ್ತು ರಾಮನಾಥಪುರಂ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ವಿಶೇಷ ರೈಲು 21 ಬೋಗಿಗಳನ್ನು ಒಳಗೊಂಡಿರುತ್ತದೆ, ಇದರಲ್ಲಿ 2 ಎಸಿ-2 ಟೈರ್, 5 ಎಸಿ-3 ಟೈರ್, 8 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ, 1 ಬ್ರೇಕ್, ಲಗೇಜ್ ಮತ್ತು ಜನರೇಟರ್ ಕಾರ್ ಹಾಗೂ 1 ದ್ವಿತೀಯ ದರ್ಜೆ ಲಗೇಜ್ ಮತ್ತು ದಿವ್ಯಾಂಗಜನ ಬೋಗಿಗಳು ಸೇರಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ