LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಷೇಧಿತ ಸ್ಥಳದಲ್ಲಿ ಪ್ರತಿಭಟಿಸಿದ ಸಿಎಂ, ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ನಾಯಕರು ಚುನಾವಣಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದ್ದನ್ನು ಖಂಡಿಸಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಬಿಜೆಪಿ ಮುಖಂಡರು ಪೊಲೀಸ್‌ ಆಯುಕ್ತರನ್ನು ಭೇಟಿ ಮಾಡಿ ಕಾಂಗ್ರೆಸ್‌ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಮನವಿ ಸಲ್ಲಿಸಿದ್ದಾರೆ. 

ಮನವಿ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಬೆಂಗಳೂರು ಪೊಲೀಸ್‌ ಆಯುಕ್ತರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ರಾಜ್ಯದಲ್ಲಿ ಬರಗಾಲ ಬಂದಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ರೈತರ ಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಯಬೇಕಿತ್ತು. ಆದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವರು ಬಾಂಗ್ಲಾ ಹಾಗೂ ಪಾಕಿಸ್ತಾನಿಗಳ ಮತಗಳನ್ನು ಉಳಿಸಿಕೊಳ್ಳಲು ಸಂಪುಟ ಸಭೆಯನ್ನು ರದ್ದುಗೊಳಿಸಿ ಚುನಾವಣಾ ಆಯೋಗಕ್ಕೆ ಓಡಿ ಬಂದಿದ್ದರು. ನಂತರ ಆಚೆ ಬಂದು ಎಕ್ಸ್‌ನಲ್ಲಿ ಧರಣಿ ಮಾಡುತ್ತೇವೆಂದು ಘೋಷಣೆ ಮಾಡಿದ್ದರು.

ಯಾವ ಕಾನೂನಿನಡಿ ಇಂತಹ ಧರಣಿ ಮಾಡಲಾಗಿದೆ? ಆ ರಸ್ತೆಯಲ್ಲಿ ಯಾವುದೇ ಧರಣಿ ಮಾಡುವಂತಿಲ್ಲ ಎಂದು ಹೈಕೋರ್ಟ್‌ ಆದೇಶವಿದೆ. ಮುಖ್ಯ ನ್ಯಾಯಮೂರ್ತಿಗಳ ಮನೆ ಅಲ್ಲೇ ಇದೆ. ಕಾನೂನು ಪಾಲಿಸಬೇಕಾದ ಮುಖ್ಯಮಂತ್ರಿಯೇ ಯಾವುದೇ ಭಯವಿಲ್ಲದೆ ಕಾನೂನು ಉಲ್ಲಂಘಿಸಿದ್ದಾರೆ. ಇವರೇ ಕಾನೂನು ಉಲ್ಲಂಘಿಸಿದರೆ ಬೇರೆಯವರಿಗೆ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗುವುದಿಲ್ಲ ಎಂದರು. 

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಅಲ್ಲೇ ಇದ್ದರು. ಇವರೇ ಅಲ್ಲಿ ಪ್ರತಿಭಟನೆ ಮಾಡಿದರೆ ಯಾರು ಬೇಕಾದರೂ ಎಲ್ಲಿಯಾದರೂ ಪ್ರತಿಭಟನೆ ಮಾಡಬಹುದು. ಇವರೇನೂ ವಿಶೇಷ ವ್ಯಕ್ತಿಗಳಲ್ಲ. ಇವರು ಕೂಡ ಕಾನೂನು ಪಾಲಿಸಬೇಕು. ಇದು ಗೂಂಡಾ ಸರ್ಕಾರವಾಗಿದ್ದು, ಆ ದಿನಗಳ ಆಡಳಿತ ನಡೆಸುತ್ತಿದೆ. ಸಂವಿಧಾನಕ್ಕೆ ಅಪಚಾರವೆಸಗಿದ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್‌ ಆಯುಕ್ತರಿಗೆ ಆಗ್ರಹಿಸಲಾಗಿದೆ ಎಂದರು. 

ಒಂದು ಎಫ್‌ಐಆರ್‌ ಅನ್ನು ಪೊಲೀಸರು ದಾಖಲಿಸಿದ್ದಾರೆ. ಕೋರ್ಟ್‌ ಆದೇಶದ ಪ್ರಕಾರ ರಸ್ತೆ ಬದಿಯಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಸಿಎಂ ಹಾಗೂ ಸಚಿವರು ಕೂಡ ಇಲ್ಲಿ ಧರಣಿ ಮಾಡಿದ್ದಾರೆ. ಇದು ಕಾನೂನು ಕೈಗೆ ತೆಗೆದುಕೊಂಡ ಘಟನೆಯಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರೆಂಬ ಕಾರಣಕ್ಕೆ ಇವರು ಚುನಾವಣಾ ಆಯೋಗದ ಮುಂಭಾಗ ನಾಟಕ ಮಾಡಿದ್ದಾರೆ. ಸಾಮಾನ್ಯ ಜನರು ಇದನ್ನೇ ಮಾಡಿದರೆ ಪೊಲೀಸರು ಸುಮ್ಮನೆ ಬಿಡುವುದಿಲ್ಲ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ ಎಂದರು. 

ಫಾರ್ಮ್‌ 7 ಕಾನೂನುಬದ್ಧ

ಯಾರು ಬೇಕಾದರೂ ಫಾರ್ಮ್‌ 7 ಸಲ್ಲಿಸಬಹುದು. ಆದರೆ ಕಾಂಗ್ರೆಸ್‌ ನಾಯಕರು ಇದನ್ನೇ ತಪ್ಪು ಎಂದಿದ್ದಾರೆ. ಚುನಾವಣಾ ಆಯೋಗ ಎಷ್ಟು ಫಾರ್ಮ್‌ 7 ಸಲ್ಲಿಕೆಯಾಗಿದೆ ಎಂದು ತಿಳಿಸಲಿ. ಇಲ್ಲಿ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು. ಅದರ ಬಗ್ಗೆ ಚುನಾವಣಾ ಆಯೋಗ ತೀರ್ಮಾನ ಕೈಗೊಳ್ಳುತ್ತದೆ. ಅದರಲ್ಲಿ ತಪ್ಪಿದ್ದರೆ ಕಾಂಗ್ರೆಸ್‌ನವರು ಕೋರ್ಟ್‌ ಮೊರೆ ಹೋಗಬಹುದೇ ಹೊರತು, ಚುನಾವಣಾಧಿಕಾರಿಗಳ ಮೇಲೆ ಒತ್ತಡ ಹೇರುವಂತಿಲ್ಲ. ಆದಾಯ ತೆರಿಗೆ ಇಲಾಖೆ, ಇ.ಡಿ., ಸಿಬಿಐ ಮೊದಲಾದ ಸಂಸ್ಥೆಗಳನ್ನು ಪ್ರಶ್ನೆ ಮಾಡುತ್ತಾರೆ.

ಈಗ ಹೈಕೋರ್ಟ್‌ ಕೆಪಿಎಸ್‌ಸಿ ಅಕ್ರಮದ ತನಿಖೆಗೆ ರಚಿಸಿದ ಎಸ್‌ಐಟಿಯನ್ನು ಕೂಡ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್‌ ನಾಯಕರು ಯಾವುದೇ ಸಾಂವಿಧಾನಿಕ ಸಂಸ್ಥೆಗಳನ್ನು ಬಿಟ್ಟಿಲ್ಲ. ರಾಹುಲ್‌ ಗಾಂಧಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇವರ ಪಕ್ಷ ದೇಶದಿಂದಲೇ ಕಾಣೆಯಾಗುತ್ತಿದೆ. ಅದಕ್ಕಾಗಿ ಜಿರಳೆ ಪಾರ್ಟಿಯನ್ನು ಹಿಡಿದುಕೊಂಡು ಮುಂದೆ ಬರುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾಡುವ ಹೋರಾಟವನ್ನೇ ತಮ್ಮ ಹೋರಾಟ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಫಾರ್ಮ್‌ 7 ಆನ್‌ಲೈನ್‌ನಲ್ಲಿ ಸಿಗುತ್ತದೆ. ಅದನ್ನು ಸಲ್ಲಿಸಿದ ನಂತರ ತಪ್ಪಿದ್ದರೆ ಅದರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತದೆ. ಕುಕ್ಕರ್‌ ಬಾಂಬ್‌ ಸ್ಪೋಟ ಮಾಡಿದ ಬ್ರದರ್‌ಗಳ ಪರವಾಗಿ ಇವರು ಹೋರಾಟ ಮಾಡುತ್ತಿದ್ದಾರೆ ಎಂದರು. 

ಮಹಾತ್ಮ ಗಾಂಧೀಜಿ ಜಯಂತಿಯಂದು ನಾವು ಶಾಂತಿಯುತವಾಗಿ ಮನವಿ ಸಲ್ಲಿಸಿದ್ದೇವೆ. ಆದರೆ ಕಾಂಗ್ರೆಸ್‌ಗೆ ಗೂಂಡಾ ಸಂಸ್ಕೃತಿ ಇದ್ದು, ಅದನ್ನೇ ಪ್ರದರ್ಶನ ಮಾಡಿದ್ದಾರೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!