LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧೀಜಿ–ಶಾಸ್ತ್ರಿಯವರ ಆದರ್ಶಗಳು ಯುವಶಕ್ತಿಗೆ ದಾರಿದೀಪವಾಗಲಿ: ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ

ಬೆಂಗಳೂರು: ಕ್ರೀಡಾ ಮನೋಭಾವದೊಂದಿಗೆ ರಾಷ್ಟ್ರನಾಯಕರ ಆದರ್ಶಗಳನ್ನು ಯುವಜನತೆಯಲ್ಲಿ ಬಿತ್ತುವ ಆಶಯದೊಂದಿಗೆ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾಲಕ್ಷ್ಮೀ ಲೇಔಟ್‌ನ ಕೆ.ಜಿ. ಗ್ರೌಂಡ್‌ನಲ್ಲಿ ಆಯೋಜಿಸಿರುವ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿ ‘ಸಿಎಂ ಕಪ್’ನಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ, “ಗಾಂಧೀಜಿ ಅವರ ಸತ್ಯ, ಅಹಿಂಸೆ ಮತ್ತು ಸರಳತೆಯ ತತ್ವಗಳು ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮ ಇಂದಿನ ಯುವಜನತೆಗೆ ಸದಾ ಸ್ಫೂರ್ತಿಯಾಗಬೇಕು. ಈ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಯುವಕರು ಸಮಾಜದ ಬದಲಾವಣೆಯ ಶಕ್ತಿಯಾಗಬೇಕು” ಎಂದರು.

“ಯುವಕರು ಕೇವಲ ಕ್ರೀಡೆಯಲ್ಲಿ ಸಾಧನೆ ಮಾಡುವುದಷ್ಟೇ ಅಲ್ಲದೆ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ರಾಷ್ಟ್ರ ನಿರ್ಮಾಣದಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆ ದೈಹಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ನಾಯಕತ್ವ, ಪರಸ್ಪರ ಗೌರವ, ತಂಡದ ಮನೋಭಾವ ಮತ್ತು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣಗಳನ್ನು ಬೆಳೆಸುತ್ತದೆ. ಆರೋಗ್ಯವಂತ, ಶಿಸ್ತಿನ ಹಾಗೂ ಜವಾಬ್ದಾರಿಯುತ ಯುವಶಕ್ತಿಯೇ ಬಲಿಷ್ಠ ಸಮಾಜದ ಅಡಿಪಾಯ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ, ಅವರ ಆದರ್ಶಗಳನ್ನು ಪಾಲಿಸುವ ಸಂಕಲ್ಪ 
ಮಾಡಲಾಯಿತು.

ಈ ವೇಳೆ ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಅಭ್ಯರ್ಥಿಗಳಾದ ಎಸ್.ಕೇಶವಮೂರ್ತಿ, ಯುವ ಕಾಂಗ್ರೆಸ್ ಕಾನೂನು ಘಟಕದ ರಾಜ್ಯಾಧ್ಯಕ್ಷರಾದ ಶ್ರೀಧರ್ ಜಾಧವ್, ಸಾಂಸ್ಕೃತಿಕ ಮತ್ತು ಕ್ರೀಡಾ ಘಟಕದ ಅಧ್ಯಕ್ಷರಾದ ಭರತ್ ಯಾದವ್ ಜೆ., ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ರಾಹುಲ್ ಗೌಡ, ಕೆಪಿವೈಸಿಸಿ ರಾಜ್ಯ ಕಾರ್ಯದರ್ಶಿ ಅನಿಲ್ ಕುಮಾರ್, ಅಸೆಂಬ್ಲಿ ಅಧ್ಯಕ್ಷರಾದ ಸ್ಯಾಮ್ಯುಯೆಲ್ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!