LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುಟ್ಟುಹಬ್ಬದ ಸಂಭ್ರಮದ ವೇಳೆ ನಟ ದರ್ಶನ್ ಸ್ಮರಿಸಿದ ಡಿಂಪಲ್ ಕ್ವೀನ್ ರಚಿತಾ ರಾಮ್

ಬೆಂಗಳೂರು: ನಟಿ ರಚಿತಾರಾಮ್ ಅವರು ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಗೆ ಹುಟ್ಟು ಹಬ್ಬದ ಸಂಭ್ರಮ ಹಿನ್ನೆಲೆ ಅಭಿಮಾನಿಗಳೊಂದಿಗೆ ಆರ್.ಆರ್. ನಗರದ ನಿವಾಸದಲ್ಲಿ 34ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಅವರಿಗೆ ಶುಭಾಶಯ ಹೇಳಲು ಅಭಿಮಾನಿಗಳ ಸಾಗರವೇ ಹರಿದು ಬಂದಿದೆ. ಬರ್ತಡೇ ಸಂಭ್ರಮದ ವೇಳೆ ನಟ ದರ್ಶನ್ ಅವರನ್ನು ನೆನಪಿಸಿಕೊಂಡ ರಚಿತಾ ರಾಮ್, ದರ್ಶನ್ ಅವರ ಆಶೀರ್ವಾದ ಯಾವಾಗಲೂ ನನ್ನ ಮೇಲೆ ಇರುತ್ತದೆ ಎಂದು ಹೇಳಿದ್ದಾರೆ.

ಇಷ್ಟೊಂದು ಅಭಿಮಾನಿಗಳು ಬಂದಿದ್ದೀರಾ, ನಿಮಗೆಲ್ಲರಿಗೂ ಥ್ಯಾಂಕ್ಸ್. ಎಲ್ಲರೂ ಒಳ್ಳೆಯದನ್ನೇ ಮಾಡಿ, ಯಾರಿಗೂ ಕೆಟ್ಟದ್ದು ಮಾಡಬೇಡಿ, ಇರುವುದು ಒಂದೇ ಜೀವನ ಎಂಜಾಯ್ ಮಾಡಿ ಬೆಂಗಳೂರಿನಲ್ಲಿ ಹುಟ್ಟುಹಬ್ಬ ಆಚರಣೆಯ ವೇಳೆ ನಟಿ ರಚಿತಾ ಹೇಳಿದ್ದಾರೆ.

ದರ್ಶನ್ ಅವರನ್ನು ನೆನಪಿಸಿಕೊಂಡ ಅವರು, ದರ್ಶನ್ ಆಶೀರ್ವಾದ ಪಡೆಯಲು ಜೈಲಿನ ಬಳಿ ಹೋಗಿದ್ದೆ. ಆದರೆ ವಾರದಲ್ಲಿ ಎರಡು ಬಾರಿ ಮಾತ್ರ ಭೇಟಿಗೆ ಅವಕಾಶ ಇರುವುದು. ಅದಕ್ಕಾಗಿ ನಾನು ಭೇಟಿಯಾಗಿ ಆಶೀರ್ವಾದ ಪಡೆಯಲು ಆಗಲಿಲ್ಲ. ಎರಡೂವರೆ ಗಂಟೆ ಕಾದು ವಾಪಸ್ ಬಂದೆ ಎಂದು ತಿಳಿಸಿದ್ದಾರೆ. ದರ್ಶನ್ ಅವರನ್ನು ಮತ್ತೆ ಭೇಟಿಯಾಗಿ ಆಶೀರ್ವಾದ ಪಡೆದುಕೊಳ್ಳುತ್ತೇನೆ. ಇಷ್ಟೊಂದು ಅಭಿಮಾನಿಗಳು ಬಂದಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

65 ಕೋಟಿ ಅವ್ಯವಹಾರ ಪ್ರಕರಣ: ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

ಮುಂಬೈ: 65.54 ಕೋಟಿ ರೂಪಾಯಿ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್​ ​ನ ಜನಪ್ರಿಯ ನಟ ಡಿನೊ ಮೊರಿಯಾ ಅವರನ್ನು ಮುಂಬೈನ ಆರ್ಥಿಕ ಅಪರಾಧ ಇಲಖೆ ಅಧಿಕಾರಿಗಳು ಬಂಧಿಸಿದ್ದಾರೆ.

65.54 ಕೋಟಿ ರೂಪಾಯಿ ಹಗರಣದ ತನಿಖೆಯ ಸಂಬಂಧ ನಟನನ್ನು ಅವರ ಸ್ವಗೃಹದಿಂದಲೇ ಮುಂಬೈ ಪೊಲೀಸ್​​ನ ಆರ್ಥಿಕ ಅಪರಾಧ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮುಂಬೈನ ಮಿಥಿ ನದಿಯ ಹೂಳು ತೆಗೆಯುವ ಮತ್ತು ನವೀಕರಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಹಾಗೂ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಡಿನೊ ಮೊರಿಯಾ ನಿವಾಸದಲ್ಲಿ ಮುಂಬೈ ಪೊಲೀಸರು ಸುಮಾರು ಎಂಟು ಗಂಟೆಗಳಿಗೂ ಹೆಚ್ಚು ಕಾಲ ತೀವ್ರ ವಿಚಾರಣೆ ನಡೆಸಿದ್ದು, ವಿಚಾರಣೆ ಬಳಿಕ ನಟನನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಬಿಎಂಸಿ (BMC) ಕಚೇರಿಗೆ ಸುಮಾರು 65.54 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎನ್ನಲಾಗಿದೆ.

ಮಿಥಿ ನದಿ ಹೂಳು ತೆಗೆಯುವ ಗುತ್ತಿಗೆಗೆ ಸಂಬಂಧಿಸಿದಂತೆ ನಡೆದ ಆರ್ಥಿಕ ಅನಿಯಮಿತತೆಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಹಗರಣದಲ್ಲಿ ಗುತ್ತಿಗೆದಾರರು, ಮಧ್ಯವರ್ತಿಗಳು ಮತ್ತು ನಾಗರಿಕ ಸಂಸ್ಥೆಯ ಅಧಿಕಾರಿಗಳ ಕೈವಾಡವಿರುವ ಬಗ್ಗೆ ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಡಿನೊ ಮೊರಿಯಾ ಅವರನ್ನು ಈ ಹಿಂದೆ ಮೇ 2025ರಲ್ಲೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗಿತ್ತು. ತನಿಖೆಯ ವೇಳೆ ಪೊಲೀಸರಿಗೆ ದೊರೆತ ಫೋನ್ ದಾಖಲೆಗಳು ಮತ್ತು ನಟನ ಸಹೋದರ ಸ್ಯಾಂಟಿನೋ ಮೊರಿಯಾ ಅವರ ‘ಯುಬಿಒ ರೈಡ್ಜ್’ ಕಂಪನಿಯ ಆರ್ಥಿಕ ವ್ಯವಹಾರಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ಹಗರಣದಲ್ಲಿ ಈಗಾಗಲೇ 2025ರಲ್ಲಿ ಬಂಧನಕ್ಕೊಳಗಾಗಿರುವ ಕೇತನ್ ಕದಮ್ ಎಂಬಾತನ ಮೇಲೆಯೂ ತನಿಖೆ ನಡೆಸಲಾಗಿದೆ. ನದಿ ಸ್ವಚ್ಛತಾ ಕಾರ್ಯದ ಗುತ್ತಿಗೆಗಳ ಹಂಚಿಕೆ ಮತ್ತು ಅದಕ್ಕೆ ಸಂಬಂಧಿಸಿದ ಹಣಕಾಸಿನ ಪಾವತಿಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಮುಂಬೈ ಪೊಲೀಸರು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!