LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ: ನಾಳೆ ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅಭಿನಂದನಾ ಸಮಾರಂಭ

ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ರಾಜಾಜಿನಗರ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಕೆಟಿಎಸ್‌ವಿ ಪ್ರಾಂಶುಪಾಲರಾದ ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರ ಅಭಿನಂದನಾ ಸಮಾರಂಭವನ್ನು ಅಕ್ಟೋಬರ್ 4ರಂದು ನಗರದ ಶ್ರೀ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ (ಟೌನ್ ಹಾಲ್) ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಪ್ರಾಚಾರ್ಯ ರತ್ನ ಶ್ರೀಕಂಠಯ್ಯ ಅಭಿನಂದನಾ ಸಮಿತಿ ವತಿಯಿಂದ ಈ ಸಮಾರಂಭ ಆಯೋಜನೆಗೊಂಡಿದೆ.

​ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರಿಂದ ಉದ್ಘಾಟನೆ

​ಈ ಮಹತ್ವದ ಅಭಿನಂದನಾ ಕಾರ್ಯಕ್ರಮವನ್ನು ನಾಡೋಜ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಘನ ಉಪಸ್ಥಿತಿ ವಹಿಸಲಿದ್ದು, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷರು ಹಾಗೂ ಕೆಎಕೆಟಿಎಸ್ ಅಧ್ಯಕ್ಷರಾದ ಶ್ರೀಕಾಂತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

​ಗಣ್ಯರ ಉಪಸ್ಥಿತಿ ಹಾಗೂ ಸಮ್ಮುಖ

​ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉದ್ಯಮಿ ಎಂ.ಕೆ. ಚಂದ್ರಕುಮಾರ್, ಕೆಎಕೆಟಿಎಸ್ ಕಾರ್ಯಾಧ್ಯಕ್ಷ ಅರ್ಜುನ್, ಬಿಡಿಎ ಸದಸ್ಯ ಪಿ. ಗಾಂಧಿ ಹಾಗೂ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಜಂಟಿ ನಿರ್ದೇಶಕ ಎಲ್. ಮುತ್ತುರಾಜು ಅವರು ಪಾಲ್ಗೊಳ್ಳಲಿದ್ದಾರೆ.

​ವಿವಿಧ ಸಂಘಟನೆಗಳ ಪದಾಧಿಕಾರಿಗಳ ಭಾಗಿ

​ಸಮಾರಂಭದಲ್ಲಿ ಕರ್ನಾಟಕ ಅಗ್ನಿವಂಶ ಕ್ಷತ್ರಿಯ ತಿಗಳರ ಸಂಘ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಕರ್ನಾಟಕ ಅನುದಾನರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ, ಕರ್ನಾಟಕ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ, ಬೆಂಗಳೂರು ಉತ್ತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ, ಅನುದಾನಿತ ನೌಕರರ ಸಂಘ, ರಾಜ್ಯ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಸದಸ್ಯರು ಉಪಸ್ಥಿತರಿರಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!