LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋರ್ಟ್ ಆವರಣದಲ್ಲೇ ಸಿನಿಮಾ ಶೈಲಿಯಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ರೌಡಿ ಶೀಟರ್ ಎಸ್ಕೇಪ್!

ಧಾರವಾಡ: ನ್ಯಾಯಾಲಯದ ಕಲಾಪಕ್ಕೆಂದು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿದ್ದ ಕುಖ್ಯಾತ ರೌಡಿಶೀಟರ್ ಅರಬಾಝ್ ದೊಡಮನಿ, ಭದ್ರತಾ ಸಿಬ್ಬಂದಿಯನ್ನೇ ಯಾಮಾರಿಸಿ ಕ್ಷಣಾರ್ಧದಲ್ಲಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ವಿಚಾರಣೆಯ ಹಿನ್ನೆಲೆಯಲ್ಲಿ ಈತನನ್ನು ಕೋರ್ಟ್‌ ಆವರಣಕ್ಕೆ ಕರೆತಂದ ಸಂದರ್ಭದಲ್ಲಿ ಈ ನಾಟಕೀಯ ಬೆಳವಣಿಗೆ ನಡೆದಿದೆ.

ಟೀ ಕುಡಿಯುವ ನೆಪವೊಡ್ಡಿ ಬೇಡಿ ಕಳಚಿಸಿಕೊಂಡ ಆರೋಪಿ

ನ್ಯಾಯಾಲಯದ ಆವರಣ ತಲುಪುತ್ತಿದ್ದಂತೆ ತನಗೆ ಚಹಾ ಕುಡಿಯಬೇಕೆಂಬ ಆಸೆ ವ್ಯಕ್ತಪಡಿಸಿದ ಆರೋಪಿಯನ್ನು ಪೊಲೀಸರು ಸಮೀಪದ ಟೀ ಅಂಗಡಿಗೆ ಕರೆದೊಯ್ದಿದ್ದಾರೆ. ಅಲ್ಲಿ ಚಹಾ ಸೇವಿಸಲು ಕೈಕೋಳ ಅಡ್ಡಿಯಾಗುತ್ತಿದೆ ಎಂದು ನಂಬಿಸಿದ ಆತ, ಪೊಲೀಸರಿಂದ ಬೇಡಿ ಬಿಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಕೈಗಳು ಮುಕ್ತವಾಗುತ್ತಿದ್ದಂತೆ, ಮೊದಲೇ ಸಂಚು ರೂಪಿಸಿ ಸಜ್ಜುಗೊಳಿಸಲಾಗಿದ್ದ ದ್ವಿಚಕ್ರ ವಾಹನವನ್ನು ಏರಿ ಸ್ಥಳದಿಂದ ಕ್ಷಣಮಾತ್ರದಲ್ಲಿ ಧೂಳೆಬ್ಬಿಸಿ ಪರಾರಿಯಾಗಿದ್ದಾನೆ.

ಆರೋಪಿಯ ಪತ್ತೆಗೆ ಪೊಲೀಸರ ಬಲೆ

ಹಲ್ಲೆ, ಗಲಾಟೆ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಕಾರಣಕ್ಕಾಗಿ ಈತನನ್ನು ಪೊಲೀಸರು ಈ ಹಿಂದೆ ಬಂಧಿಸಿ ಜೈಲಿಗಟ್ಟಿದ್ದರು. ಇದೀಗ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಥದ್ದೊಂದು ಭದ್ರತಾ ಲೋಪದ ಘಟನೆ ಸಂಭವಿಸಿದ್ದು, ಪರಾರಿಯಾಗಿರುವ ರೌಡಿಶೀಟರ್ ಬಂಧನಕ್ಕಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ