LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌: ಕೇಂದ್ರಕ್ಕೆ  ಪ್ರಸ್ತಾವನೆ ಸಲ್ಲಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಸೊರಬ ;  ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸೊರಬದ ಪ್ರವಾಸಿ ಮಂದಿರದಲ್ಲಿ ಇಂದು ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆ ಕುರಿತು ಅಧಿಕಾರಿಗಳೊಂದಿಗೆ ಅಂತಿಮ ಹಂತದ ಸಭೆ ನಡೆಸಿ ಸಚಿವರು ಮಾತನಾಡಿದರು.

ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಪ್ರಸ್ತಾವನೆಗೆ ಅಗತ್ಯವಿರುವ ಎಲ್ಲ ದಾಖಲೆಗಳು ಹಾಗೂ ಮಾಹಿತಿಯನ್ನು ಸಮಗ್ರವಾಗಿ ಸಿದ್ಧಪಡಿಸಿ, ನಿಯಮಾನುಸಾರ ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವ ಪ್ರಕ್ರಿಯೆ, ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಬೇಕಾದ ಅಂಶಗಳು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಯಲ್ಲಿ ಒಳಗೊಂಡಿರಬೇಕಾದ ಅಗತ್ಯ ದಾಖಲೆಗಳು ಹಾಗೂ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು.

ಸಂತ್ರಸ್ತರ ಬಹುದಿನಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಸ್ತಾವನೆ ಸಿದ್ಧಪಡಿಸುವಾಗ ಯಾವುದೇ ಪ್ರಮುಖ ಅಂಶಗಳು ಅಥವಾ ದಾಖಲೆಗಳು ಬಾಕಿ ಉಳಿಯದಂತೆ ಎಚ್ಚರಿಕೆ ವಹಿಸುವಂತೆ ಸಚಿವರು ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಸಿಸಿಎಫ್ ಹನುಮಂತಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ,  ಡಿಎಫ್‌ಒ ಅಜ್ಜಯ್ಯ, ಎಡಿಸಿ ಅಭಿಷೇಕ್, ವಕೀಲ ರಮೇಶ್ ಹೆಗ್ಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?