LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ, ಸೂಕ್ತ ಯೋಜನೆ ರೂಪಿಸಿ: ಡಿ.ಕೆ. ಶಿವಕುಮಾರ್‌ಗೆ ಭಾವುಕ ಮನವಿ ಸಲ್ಲಿಕೆ ಮಾಡಿದ ರೈತ!

ರಾಜ್ಯದಲ್ಲಿ 35 ರಿಂದ 40 ವರ್ಷ ವಯಸ್ಸಾದರೂ ಮದುವೆಯಾಗದೆ ನೊಂದಿರುವ ರೈತರು ಹಾಗೂ ಯುವಕರಿಗೆ ನೆರವಾಗಲು ವಿಶೇಷ ಯೋಜನೆಯೊಂದನ್ನು ರೂಪಿಸುವಂತೆ ಹಿರಿಯ ರೈತರೊಬ್ಬರು ಶನಿವಾರ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಪ್ರಿಯಾಪಟ್ಟಣದಲ್ಲಿ ನಡೆದ 'ಪ್ರಜಾ ಸೇವೆ' ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿಯವರನ್ನು ನೇರವಾಗಿ ಭೇಟಿಯಾದ ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಬಳಿ ತಮ್ಮ ಸಮಸ್ಯೆ ಹಂಚಿಕೊಂಡ ರೈತ, "ಸರ್, ದಯವಿಟ್ಟು ಏನಾದರೂ ಮಾಡಿ. ಬಡ ಯುವಕರು ಮದುವೆಯಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 35 ರಿಂದ 40 ವರ್ಷ ವಯಸ್ಸಿನ ಎಷ್ಟೋ ಪುರುಷರು ಇನ್ನೂ ಮದುವೆಯಾಗದೆ ಒಂಟಿಯಾಗಿದ್ದಾರೆ. ಬಡ ಜೀವಗಳು ಜೀವನದಲ್ಲಿ ತೀವ್ರ ನಿರಾಶೆಗೊಂಡು ಆತ್ಮಹತ್ಯೆಯ ಹಾದಿ ಹಿಡಿಯುತ್ತಿವೆ. ಅವರಿಗೆ ಮದುವೆಯಾಗಲು ಹೆಣ್ಣಿನ ಅವಶ್ಯಕತೆಯಿದೆ" ಎಂದು ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, "ಏನು? ಏನಾಗಿದೆ?" ಎಂದು ಆಶ್ಚರ್ಯದಿಂದ ವಿಚಾರಿಸಿದ್ದಾರೆ.

ಈ ಸಮಸ್ಯೆ ಕೇವಲ ನನ್ನೊಬ್ಬನದಲ್ಲ, ಇಡೀ ಕರ್ನಾಟಕದಾದ್ಯಂತ ಲಕ್ಷಾಂತರ ಯುವಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಯಾಗಿದೆ ಎಂದು ವಿವರಿಸಿದ ರೈತ, ಸರ್ಕಾರವೇ ಇದರ ನಿವಾರಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. "ಆ ಯುವಕರ ಬಳಿ ಹಣವಿದೆ, ಸುಂದರವಾದ ಮನೆಗಳಿವೆ ಮತ್ತು ಸ್ವಂತ ಜಮೀನು ಕೂಡ ಇದೆ. ಆದರೆ ರೈತರಿಗೆ ತಮ್ಮ ಹೆಣ್ಣುಮಕ್ಕಳನ್ನು ಕೊಡಲು ಯೂ ಮುಂದಾಗುತ್ತಿಲ್ಲ" ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ಅನ್ನ ನೀಡುವ ರೈತರಿಗೆ ಹೆಣ್ಣು ಕೊಡಲು ಯಾರೊಬ್ಬರೂ ಮುಂದೆ ಬಾರದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಅವರು, ಈ ಲಕ್ಷಾಂತರ ಯುವಕರ ಬದುಕನ್ನು ಉಳಿಸಲು ಸರ್ಕಾರವೇ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ವಿನಂತಿಸಿಕೊಂಡಿದ್ದಾರೆ. ರೈತರ ಈ ವಿಶಿಷ್ಟ ಹಾಗೂ ಗಂಭೀರ ಮನವಿಯನ್ನು ಆಲಿಸಿದ ಮುಖ್ಯಮಂತ್ರಿಗಳು ಈ ವೇಳೆ ನಕ್ಕು ಸುಮ್ಮನಾಗಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ