LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ಮೇಕಪ್ ಆರ್ಟಿಸ್ಟ್ ಮದ್ ಸಂಧು ಗುಂಡಿಕ್ಕಿ ಹತ್ಯೆ

ಚಂಡೀಗಢ: LGBTQ ಸಮುದಾಯದ ಸಾಮಾಜಿಕ ಜಾಲತಾಣದ ಪ್ರಭಾವಿ ಮೇಕಪ್ ಆರ್ಟಿಸ್ಟ್ ಮದ್ ಸಂಧು ಅವರನ್ನು ದುಷ್ಕರ್ಮಿಗಳು ಅಮೃತಸರದಲ್ಲಿ ಗುಂಡಿಕ್ಕಿ ಹತ್ಯೆಮಾಡಿರುವ ಘಟನೆ ನಡೆದಿದೆ.

ರಸ್ತೆಯಲ್ಲಿ ಹೋಗುತ್ತಿದ್ದ ಮದ್ ಸಂಧು ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ ಸಂಧು ಅವರನ್ನು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸಂಧು ತಮ್ಮ LGBTQ ಗುರುತಿನ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ನಿಂದನೆಯನ್ನು ಎದುರಿಸುತ್ತಿದ್ದರು. ಟ್ರೋಲ್ ಹೊರತಾಗಿಯೂ, ಅವರು ಆನ್‌ಲೈನ್‌ನಲ್ಲಿ ಸಕ್ರಿಯರಾಗಿದ್ದರು. ಇನ್ಸ್ಟಾದಲ್ಲಿ 2.26 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಅವರು ಹೊಂದಿದ್ದರು. ಅವರು ಪಂಜಾಬಿ ಚಲನಚಿತ್ರ ಓಯೆ ಭೋಲೆ ಓಯೆಯಲ್ಲಿಯೂ ನಟಿಸಿದ್ದರು.

ಪಾಡ್‌ಕ್ಯಾಸ್ಟ್‌ಗಳು ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮೇಕಪ್ ಆರ್ಟ್, ಸ್ವಯಂ ಅಭಿವ್ಯಕ್ತಿ ಮತ್ತು ಲಿಂಗ-ಸಂಬಂಧಿತ ವಿಷಯಗಳ ಬಗ್ಗೆ ಸಂಧು ಆಗಾಗ ಚರ್ಚಿಸುತ್ತಿದ್ದರು. ಅವರ ಫ್ಯಾಷನ್ ಆಯ್ಕೆಗಳು ಮತ್ತು ಚರ್ಚಿಸುವ ವಿಚಾರಗಳು ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಟೀಕೆಗೆ ಗುರಿಯಾಗುತ್ತಿತ್ತು.

ಗೋಲ್ಡಿ ಧಿಲ್ಲನ್ ಮತ್ತು ಜಗ್ಗಾ ಟ್ಯಾರಂಟರ್ನ್ ಈ ದಾಳಿಯ ಹೊಣೆ ಹೊತ್ತಿದ್ದಾರೆ ಎಂದು ಹೇಳಲಾದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಪೋಸ್ಟ್‌ ಬಗ್ಗೆ ಇನ್ನೂ ಪರಿಶೀಲಿಸಲಾಗಿಲ್ಲ. ಗುಂಡಿನ ದಾಳಿಗೆ ಕಾರಣವಾದ ಸಂದರ್ಭ, ದಾಳಿಕೋರರ ಗುರುತು ಮತ್ತು ಉದ್ದೇಶ ಸ್ಪಷ್ಟವಾಗಿಲ್ಲ.

ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ವೈರಲ್‌ ಪೋಸ್ಟ್‌ನಲ್ಲಿ ಹತ್ಯೆ ಹೊಣೆ ಹೊತ್ತಿದ್ದಾರೆ ಎನ್ನಲಾದ ಗೋಲ್ಡಿ ಧಿಲ್ಲೋನ್ ಇನ್ನೂ ತಲೆಮರೆಸಿಕೊಂಡಿದ್ದಾನೆ. ಗೋಲ್ಡಿ ಬ್ರಾರ್‌ನ ಆಪ್ತ ಸಹಾಯಕನಾದ ಗುರುಪ್ರೀತ್ ಸಿಂಗ್ ಅಲಿಯಾಸ್ ಗೋಲ್ಡಿ ಧಿಲ್ಲೋನ್ ಜರ್ಮನಿಯಲ್ಲಿ ಕೆಲವು ತಿಂಗಳು ಕಳೆದ ನಂತರ ಯುಕೆ ನಲ್ಲಿ ಅಡಗಿರಬಹುದು ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ.

ವಿದೇಶದಿಂದಲೇ ‘ಹಿಟ್ ಸ್ಕ್ವಾಡ್‌’ಗಳ (ಹಂತಕರ ತಂಡಗಳ) ಮೂಲಕ ಚಂಡೀಗಢದ ಸೆಕ್ಟರ್ 11 ರಲ್ಲಿ ಕೆಮಿಸ್ಟ್ ಅಂಗಡಿಯ ಕ್ಯಾಷಿಯರ್ ಜಾನಕಿ ದಾಸ್ ಅವರ ಹತ್ಯೆಯ ಹಿಂದೆ (ಜೂನ್ 2026) ಈತನ ಕೈವಾಡ ಇದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಇನ್ನೂ, ಚಂಡೀಗಢದ ಸೆಕ್ಟರ್ 5 ರಲ್ಲಿ ನಡೆದ 2024ರ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ಸಲ್ಲಿಸಿದ ಆರೋಪಪಟ್ಟಿಯಲ್ಲಿ ಗೋಲ್ಡಿ ಬ್ರಾರ್ ಹೆಸರು ಸಹ ಇದೆ.

ಗೋಲ್ಡಿ ಧಿಲ್ಲನ್ ಮತ್ತು ಜಗ್ಗಾ ಟ್ಯಾರಂಟರ್ನ್ ಈ ದಾಳಿಯ ಹೊಣೆ ಹೊತ್ತಿದ್ದಾರೆ ಎಂದು ಹೇಳಲಾದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಪೋಸ್ಟ್‌ ಬಗ್ಗೆ ಇನ್ನೂ ಪರಿಶೀಲಿಸಲಾಗಿಲ್ಲ. ಗುಂಡಿನ ದಾಳಿಗೆ ಕಾರಣವಾದ ಸಂದರ್ಭ, ದಾಳಿಕೋರರ ಗುರುತು ಮತ್ತು ಉದ್ದೇಶ ಸ್ಪಷ್ಟವಾಗಿಲ್ಲ. ಪೊಲೀಸರು ಈ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!