LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

​ನಕಲಿ ಮತ ಹಾಕಿಸುತ್ತಿದ್ದ  ಕಾಂಗ್ರೆಸ್‌ನವರಿಗೆ ಎಸ್ ಐಆರ್ ನಿಂದ ತೊಂದರೆಯಾಗಿದೆ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದವರು ನಕಲಿ ಮತಗಳನ್ನು ಹಾಕಿಸಿಕೊಂಡು, ಒಂದೇ ವ್ಯಕ್ತಿ ಎರಡು ಕಡೆ ಮತಗಳನ್ನು ಹಾಕಿಸುವುದು ಅಥವಾ ಸತ್ತವರ ಹೆಸರಿನಲ್ಲಿ ಮತಗಳನ್ನು ಹಾಕಿಸಿಕೊಂಡು ಆಯ್ಕೆಯಾಗುತ್ತಿದ್ದರು. ಈಗ ಅವರಿಗೆ ತೊಂದರೆಯಾಗಿದೆ. ಹೀಗಾಗಿ ಸಿಎಂ ಡಿ.ಕೆ. ಶಿವಕುಮಾರ್ ಫೇಕ್ ಮತಗಳ ರಕ್ಷಣೆಗಾಗಿ ಚುನಾವಣಾಧಿಕಾರಿ ಕಚೇರಿ ಎದುರು ಧರಣಿ ನಡೆಸುವ ನಾಟಕವಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. 

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್‌ಐಆರ್  ಪ್ರಕ್ರಿಯೆ ಆರಂಭದಿಂದಲೂ ಬಹಳ ಸರಳವಾಗಿ ನಡೆದುಕೊಂಡು ಬರುತ್ತಿತ್ತು. ಪ್ರಾರಂಭದಲ್ಲಿ ಕಾಂಗ್ರೆಸ್‌ನವರು ಅಲ್ಲಲ್ಲಿ ಮಸೀದಿಯಲ್ಲಿ  ಅರ್ಜಿ ತುಂಬಿಸುವುದಕ್ಕೆ ನಾವು  ವಿರೋಧಿಸಿದ್ದೇವು.. ಆದರೆ ನಂತರದ ಕ್ರಮಗಳ ಪ್ರಕಾರ ಇದು ಸರಳವಾಗಿ ಮುಗಿಯಬೇಕಿತ್ತು,  ಅಕ್ಟೋಬರ್ 8 ರಂದು ಕರಡು ಮತ ಪಟ್ಟಿಯನ್ನು ಕೊಡಬೇಕಾಗಿತ್ತು. ಇಂತ ಸಂದರ್ಭದಲ್ಲಿ ಕಾಂಗ್ರೆಸ್ ನವರು ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ ಗೊಂದಲ ಸೃಷ್ಟಿಸಿದ್ದಾರೆ. ನಮ್ಮ ಪಕ್ಷದ ಪ್ರಮುಖರು ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಈಗ ಕಾನೂನು ಪ್ರಕಾರ ಎಲ್ಲವೂ ಹೊರಬರುತ್ತಿದೆ ಎಂದಿರುವ ಅವರು, ರಾಜ್ಯ ಸರ್ಕಾರಕ್ಕೆ ನೇರವಾಗಿ ಇದರ ವಿರುದ್ಧ ಕೇಸ್ ಹಾಕುವ ಯಾವುದೇ ಅಧಿಕಾರವಿಲ್ಲ, ಇದು ಸಂಪೂರ್ಣವಾಗಿ ಚುನಾವಣಾ ಅಧಿಕಾರಿಗಳು ಮಾಡಬೇಕಾದ ಕೆಲಸ. ಕಾನೂನಿನ ಪ್ರಕಾರ ಅರ್ಹರ ಮತಗಳು ಮಾತ್ರ ರಕ್ಷಿಸಲ್ಪಡಬೇಕು ಮತ್ತು ಅನರ್ಹರ ಮತಗಳನ್ನು ತೆಗೆದುಹಾಕಬೇಕು ಎನ್ನುವುದು ನಮ್ಮ ಸ್ಪಷ್ಟ ನಿಲುವು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  

ಡಿಲಿಮಿಟೇಷನ್ ಆಗಬೇಕು

ಸವಣೂರು ತಾಲೂಕು ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಆಗಬೇಕು ಎನ್ನುವ ಬೇಡಿಕೆ ಕುರಿತು ಕೇಳಿದ್ರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, .ಚುನಾವಣಾ ಆಯೋಗದ ನಿಯಮಗಳ ಪ್ರಕಾರವೇ ಡಿಲಿಮಿಟೇಶನ್ (ಗಡಿ ನಿರ್ಣಯ) ಪ್ರಕ್ರಿಯೆ ನಡೆಯಬೇಕು, ಅದಾದ ಬಳಿಕ ಕೇಂದ್ರ ಮತ್ತು ರಾಜ್ಯ ಸಮಿತಿಗಳು ರಚನೆಯಾಗುತ್ತವೆ. ಒಂದು ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ಜನಸಂಖ್ಯೆ ಇರಬೇಕು ಎಂದು ನಿರ್ಧಾರ ಆಗುತ್ತದೆ. ಆ ಸಂದರ್ಭದಲ್ಲಿ ಅವರ ಮನವಿಯನ್ನು ಪರಿಗಣಿಸಲಾಗುತ್ತದೆ ಎಂದು ಹೇಳಿದರು.

ಆತ್ಮಾವಲೋಕನ ಮಾಡಿಕೊಳ್ಳಲಿ

ಎಸ್ ಐ ಆರ್ ಪ್ರಕ್ರಿಯೆ ಶುರುವಾದ ನಂತರ ನಡೆದ ಎಲ್ಲ ಚುನಾವಣೆಗಳನ್ನು ರದ್ದು ಪಡಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರು ಎಲ್ಲ ಕಡೆ ಸೋತಿದ್ದಾರೆ. ಅದಕ್ಕಾಗಿ ಕುಂಟು ನೆಪ ಹೇಳುತ್ತಿದ್ದಾರೆ. ಅವರ ಪಕ್ಷ ಯಾಕೆ ಸೋತಿದೆ ಅನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಜನ ಸೊಪ್ಪು ಹಾಕುವುದಿಲ್ಲ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮಾನತು ಮಾಡಬೇಕೆಂಬ ಬೇಡಿಕೆಗೆ ಕುರಿತು ಕೇಳಿದ ಪ್ರಶ್ಮೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಾಗೂ ಅವರ ಮಿತ್ರ ಪಕ್ಷದವರಿಗೆ ದೇಶದ ಅಭಿವೃದ್ಧಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರು ದೇಶದಲ್ಲಿ ಹೇಗಾದರೂ ಮಾಡಿ ದಂಗೆ ಎಬ್ಬಿಸಬೇಕೆಂದು ಬಯಸುತ್ತಿದ್ದಾರೆ. ಅದಕ್ಕೆ ದೇಶದ ಜನರು ಸೊಪ್ಪು ಹಾಕುವುದಿಲ್ಲ ಎಂದು ಹೇಳಿದರು

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!