LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೌಚಾಲಯಕ್ಕೂ ಜಾತಿ ತಂದ ಅಧಿಕಾರಿಗಳು: ಶಾಸಕರ ಸಮ್ಮುಖದಲ್ಲೇ ಕಣ್ಣೀರಿಟ್ಟು ಗೋಳಾಡಿದ ಮಹಿಳೆ

ಶೃಂಗೇರಿ: ಶೌಚಾಲಯದಂತಹ ಕನಿಷ್ಠ ಮೂಲಸೌಕರ್ಯ ಒದಗಿಸುವುದಕ್ಕೂ ಅಧಿಕಾರಿಗಳು ಜಾತಿ ಲೆಕ್ಕಾಚಾರ ಮುಂದಿಟ್ಟಿರುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಬೆಳಕಿಗೆ ಬಂದಿದೆ.

ಶೃಂಗೇರಿಯಲ್ಲಿ ಶಾಸಕ ಟಿ.ಡಿ. ರಾಜೇಗೌಡ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ 'ಪ್ರಜಾ ಸೇವಾ' ಜನಸಂಪರ್ಕ ಸಭೆಯಲ್ಲಿ ಮಹಿಳೆಯೊಬ್ಬರು ತಮಗಾದ ಕಹಿ ಅನುಭವವನ್ನು ಬಿಡಿಸಿಡುತ್ತಾ, ತುಂಬಿದ ಸಭೆಯಲ್ಲೇ ಕಣ್ಣೀರಿಟ್ಟಿದ್ದಾರೆ.

ಅಧಿಕಾರಿಗಳ ಅಸಡ್ಡೆಗೆ ಬೇಸತ್ತು ಶಾಸಕರ ಮುಂದೆ ಅಳಲು

ತಮ್ಮ ಮನೆಯಲ್ಲಿ ಶೌಚಾಲಯವಿಲ್ಲದೆ ಎಂಟು ವರ್ಷದ ಚಿಕ್ಕ ಮಗುವನ್ನು ಕಟ್ಟಿಕೊಂಡು ತೀವ್ರ ಸಂಕಷ್ಟ ಎದುರಿಸುತ್ತಿರುವ ಬಡ ಮಹಿಳೆಯೊಬ್ಬರು, ಸರ್ಕಾರದ ಸೌಲಭ್ಯದಡಿ ಶೌಚಾಲಯ ನಿರ್ಮಿಸಿಕೊಡುವಂತೆ ಕೋರಿ ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬಂದಿದ್ದರು. ಆದರೆ ಕಚೇರಿಗಳಿಗೆ ಅಲೆದಾಡಿ ಸಾಕಾಗಿದ್ದ ಮಹಿಳೆಗೆ ಅಧಿಕಾರಿಗಳು ಸ್ಪಂದಿಸುವ ಬದಲು ಜಾತಿ ಯಾವುದು ಎಂದು ಪ್ರಶ್ನಿಸಿದ್ದಾರೆ. ನೀವು ಎಸ್‌ಸಿ ಅಥವಾ ಎಸ್‌ಟಿ ಸಮುದಾಯಕ್ಕೆ ಸೇರಿದವರಾಗಿದ್ದರೆ ಏನಾದರೂ ಮಾಡಬಹುದು, ಇಲ್ಲದಿದ್ದರೆ ಕಷ್ಟ ಎಂದು ಸಬೂಬು ಹೇಳಿ ಸಾಗಹಾಕಿದ್ದಾರೆ.

ತುಂಬಿದ ಸಭೆಯಲ್ಲಿ ಮಹಿಳೆಯ ಆಕ್ರಂದನ

ಅಧಿಕಾರಿಗಳ ಮಾತಿಗೆ ಉತ್ತರಿಸಿದ್ದ ಮಹಿಳೆ, ತಾನು ಬ್ರಾಹ್ಮಣ ಸಮುದಾಯಕ್ಕೆ ಸೇರಿದವಳು ಎಂದಾಗ ಯಾವುದೇ ಸಹಾಯ ಮಾಡಲಾಗದು ಎಂದು ಕೈಚೆಲ್ಲಿದ್ದಾರೆ. ಮೂಲಭೂತ ಅವಶ್ಯಕತೆಯಾದ ಶೌಚಾಲಯಕ್ಕೂ ಅಧಿಕಾರಿಗಳು ಜಾತಿ ಅಸ್ತ್ರ ಪ್ರಯೋಗಿಸಿ ಅವಮಾನಿಸಿದ್ದನ್ನು ನೆನೆದು ಮಹಿಳೆ ಶಾಸಕರ ಮುಂದೆ ಕಣ್ಣೀರು ಹಾಕಿದ್ದಾರೆ. ಎಂಟು ವರ್ಷದ ಮಗುವಿನೊಂದಿಗೆ ಶೌಚಕ್ಕಾಗಿ ಪ್ರತಿದಿನ ಪರದಾಡಬೇಕಾದ ದುಸ್ಥಿತಿಯನ್ನು ವಿವರಿಸಿ, ಕೂಡಲೇ ತಮಗೆ ನ್ಯಾಯ ಒದಗಿಸಬೇಕೆಂದು ಸಭೆಯಲ್ಲಿ ಅಲವತ್ತುಕೊಂಡಿದ್ದಾರೆ. ಬಡತನ ಹಾಗೂ ನೈರ್ಮಲ್ಯದ ಅಗತ್ಯಕ್ಕೆ ಜಾತಿಯ ಬೇಲಿ ಹಾಕಿದ ಅಧಿಕಾರಿಗಳ ಧೋರಣೆಗೆ ಸಾರ್ವಜನಿಕ ವಲಯದಲ್ಲೂ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ