LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕಿಸ್ತಾನಕ್ಕೆ ಸೇನಾ ಮಾಹಿತಿ ರವಾನೆ: ನಿವೃತ್ತ ಯೋಧ ಸೇರಿ ಇಬ್ಬರು ಅರೆಸ್ಟ್

ನವದೆಹಲಿ: ಪಾಕಿಸ್ತಾನಕ್ಕೆ ಸೇನಾ ಮಾಹಿತಿ, ಭದ್ರತೆಗೆ ಸಂಬಂಧಿಸಿದ ಮಾಹಿತಿಗಳನ್ನು ರವಾನಿಸಿದ ಆರೋಪದ ಮೇಲೆ, ನಿವೃತ್ತ ಯೋಧ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಕೇಂದ್ರೀಯ ಸಂಸ್ಥೆಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ, ಗುವಾಹಟಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ಬೇಹುಗಾರಿಕೆ ಸಂಬಂಧಿತ ಚಟುವಟಿಕೆಗಳ ಆರೋಪದ ಮೇಲೆ ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆಯು ಬಂಧಿಸಿದೆ.

ಭದ್ರತಾ ಪಡೆಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತನೊಬ್ಬನಿಗೆ ರವಾನಿಸುವಲ್ಲಿ ಆತ ಭಾಗಿಯಾಗಿದ್ದನೆಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಸಂಸ್ಥೆಗಳ ಮಾಹಿತಿಯ ಮೇರೆಗೆ ಅಸ್ಸಾಂ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅವರಲ್ಲಿ ಒಬ್ಬ ನಿವೃತ್ತ ಸೇನಾ ಯೋಧ. ಈತ ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದಾರೆ.

ಆರೋಪಿಗಳಲ್ಲಿ ಒಬ್ಬನನ್ನು ಬಿಹಾರದ ಪೂರ್ವ ಚಂಪಾರಣ್‌ನ 31 ವರ್ಷದ ಅಭಿಷೇಕ್ ಕುಮಾರ್ ಸಿಂಗ್ ಎಂದು ಗುರುತಿಸಿದ್ದಾರೆ. ಶಂಕಿತ ವ್ಯಕ್ತಿಯ ಕುರಿತಾದ ಪ್ರಾಥಮಿಕ ಮಾಹಿತಿಯನ್ನು ತೇಜ್‌ಪುರ ಮೂಲದ ಗಜರಾಜ್ ಕಾರ್ಪ್ಸ್‌ನ ಮಿಲಿಟರಿ ಗುಪ್ತಚರ ವಿಭಾಗವು ಹಂಚಿಕೊಂಡಿದೆ.

ಕಾರ್ಯಾಚರಣೆಯ ವೇಳೆ, ಆತನ ಬಳಿಯಿದ್ದ ಮೊಬೈಲ್ ಫೋನ್, ಸಿಮ್ ಕಾರ್ಡ್‌ಗಳು ಮತ್ತು ಅಪರಾಧಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ.

ಇಂದಿನಿಂದ ರೇಸ್‌ಕೋರ್ಸ್‌ ರಸ್ತೆಯಲ್ಲಿ 60 ದಿನ ವಾಹನ ಸಂಚಾರ ನಿರ್ಬಧ: ಪರ್ಯಾಯ ಮಾರ್ಗದ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರು ನಗರದ ರೇಸ್‌ಕೋರ್ಸ್‌ ರಸ್ತೆಯಲ್ಲಿ ಇಂದಿನಿಂದ ಎರಡು ತಿಂಗಳ ಕಾಲ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಕಗಿದೆ. ಮಳೆ ನೀರು ಕಾಲುವೆ ಮತ್ತು ಒಳ ಚರಂಡಿ ಕಾಮಗಾರಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 60 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಜಿಬಿಎ, ರೇಸ್‌ಕೋರ್ಸ್‌ ರಸ್ತೆಯ ಮೌರ್ಯ ಜಂಕ್ಷನ್‌ನಿಂದ ಹರೇಕೃಷ್ಣ ರಸ್ತೆ ಜಂಕ್ಷನ್‌ವರೆಗೆ ಈಗಾಗಲೇ ವೈಟ್‌ ಟಾಪಿಂಗ್‌ ಕಾಮಗಾರಿ ನಡೆಸುತ್ತಿದೆ. ಇದೇ ರಸ್ತೆಯಲ್ಲಿ ಹೊಸದಾಗಿ ಮಳೆ ನೀರು ಚರಂಡಿ ಮತ್ತು ಒಳ ಚರಂಡಿ ಕಾಮಗಾರಿ ಆರಂಭವಾಗಲಿದ್ದು, ಸುಗಮ ವಾಹನ ಸಂಚಾರದ ದೃಷ್ಟಿಯಿಂದ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಹೈಗ್ರೌಂಡ್ಸ್‌ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ರೇಸ್‌ಕೋರ್ಸ್‌ ರಸ್ತೆಯ ಟ್ರಿಲೈಟ್‌ ಜಂಕ್ಷನ್‌ನಿಂದ ಮೌರ್ಯ ಜಂಕ್ಷನ್‌ವರೆಗೆ ಹಾಗೂ ಶಿವಾನಂದ ಜಂಕ್ಷನ್‌ನಿಂದ ಮೌರ್ಯ ಜಂಕ್ಷನ್‌ವರೆಗೆ ಎಲ್ಲಾ ವಾಹನಗಳ ಸಂಚಾರವನ್ನು 60 ದಿನಗಳ ಕಾಲ ನಿರ್ಬಂಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪರ್ಯಾಯ ಮಾರ್ಗ

ಸ್ಯಾಂಕಿ ರಸ್ತೆಯಿಂದ ಕೆ.ಆರ್‌.ಮಾರ್ಕೆಟ್‌ ಕಡೆಗೆ ಸಂಚರಿಸುವ ಬಿಎಂಟಿಸಿ ಬಸ್‌ಗಳು, ಖಾಸಗಿ ಬಸ್‌ಗಳು ಹಾಗೂ ಭಾರಿ ಸರಕು ಸಾಗಣೆ ವಾಹನಗಳು ವಿಂಡ್ಸರ್‌ ಮ್ಯಾನರ್‌ ಬ್ರಿಡ್ಜ್‌ನಿಂದ ಎಲ್‌ಆರ್‌ಡಿಇ ಜಂಕ್ಷನ್‌ ಕಡೆಗೆ ಹೋಗಬೇಕು. ನಂತರ ಎಲ್‌ ಆರ್‌ಡಿಇ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಬಸವೇಶ್ವರ ಜಂಕ್ಷನ್‌ ಮೂಲಕ ಸಾಗಬೇಕು.

ಸ್ಯಾಂಕಿ ರಸ್ತೆಯಿಂದ ಮೆಜೆಸ್ಟಿಕ್‌ ಕಡೆಗೆ ಸಂಚರಿಸುವ ಬಿಎಂಟಿಸಿ ಬಸ್‌ಗಳು, ಖಾಸಗಿ ಬಸ್‌ಗಳು ಹಾಗೂ ಭಾರಿ ಸರಕು ಸಾಗಣೆ ವಾಹನಗಳು ಕುಮಾರಕೃಪಾ ರಸ್ತೆ ಮೂಲಕ ಶಿವಾನಂದ ಸರ್ಕಲ್‌ಗೆ ಹೋಗಿ ಬಲ ತಿರುವು ಪಡೆದು ಎಸ್‌.ಸಿ.ರಸ್ತೆಯಲ್ಲಿ ಎಡಕ್ಕೆ ತಿರುಗಿ ಮುಂದೆ ಸಾಗಬೇಕು.

ಹಳೆ ಜೆಡಿಎಸ್‌ ಕಚೇರಿ ಜಂಕ್ಷನ್‌ನಿಂದ ಟ್ರಿಲೈಟ್‌ ಜಂಕ್ಷನ್‌ ಕಡೆಗೆ ಹೋಗುವ ವಾಹನಗಳು ಹಳೆ ಜೆಡಿಎಸ್‌ ಕಚೇರಿ ಜಂಕ್ಷನ್‌ನಲ್ಲಿ ಎಡ ಭಾಗದ ರಸ್ತೆಯಲ್ಲಿ ಟ್ರಿಲೈಟ್‌ ಜಂಕ್ಷನ್‌ ಕಡೆಗೆ ಮತ್ತು ರೇಸ್‌ ವ್ಯೂ ಜಂಕ್ಷನ್‌ನಲ್ಲಿಎಡ ತಿರುವು ಪಡೆದು ಕುಮಾರ ಕೃಪಾ ರಸ್ತೆ ಮೂಲಕ ಶಿವಾನಂದ ಜಂಕ್ಷನ್‌ ಕಡೆಗೆ ಸಂಚರಿಸಬೇಕು.

ಟ್ರಿಲೈಟ್‌ ಜಂಕ್ಷನ್‌ನಿಂದ ಮೌರ್ಯ ಜಂಕ್ಷನ್‌ ಕಡೆಗೆ ಹೋಗುವ ಎಲ್ಲಾ ವಾಹನಗಳು ಶಿವಾನಂದ ಮೇಲ್ಸೇತುವೆ ಮೂಲಕ ಸಾಗಿ ನೆಹರೂ ಸರ್ಕಲ್‌ನಿಂದ ಎಸ್‌.ಸಿ.ರಸ್ತೆಗೆ ತಲುಪಿ ಮೆಜೆಸ್ಟಿಕ್‌ ಕಡೆಗೆ ಸಂಚರಿಸಬೇಕು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?