LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಮನೆಬಾಗಿಲಿಗೆ ಆಡಳಿತ ತಲುಪಿಸುವುದೇ 'ಪ್ರಜಾಸೇವೆ'ಯ ಮುಖ್ಯ ಉದ್ದೇಶ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಜನರು ಆಯ್ಕೆ ಮಾಡಿದ ಸರ್ಕಾರ ಜನರ ಮಧ್ಯದಲ್ಲೇ ಇದ್ದು ಕೆಲಸ ಮಾಡುವುದೇ ನಿಜವಾದ ಪ್ರಜಾಸೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿ ಮೈದಾನದಲ್ಲಿನ ಪ್ರಜಾ ಆಂದೋಲನ ಸಭೆ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

news_1791181369_2_469.webp

​ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ವೇದಿಕೆ

​"ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಯನ್ನು ಹೊಸಪೇಟೆ (ವಿಜಯನಗರ ಜಿಲ್ಲೆ)ಯಲ್ಲಿ ಉದ್ಘಾಟನೆ ಮಾಡಿದರು. ಜನರ ಬಳಿಗೆ ಜನಪ್ರತಿನಿಧಿಗಳು, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ತೆರಳಿ, ಅಹವಾಲುಗಳನ್ನು ಪಡೆದು ಸ್ಥಳದಲ್ಲೇ ಪರಿಹರಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ. ರಾಜ್ಯ ಮಟ್ಟದಲ್ಲಿ ಆಗಬೇಕಾದ ಕೆಲಸಗಳಿಗೆ ಸ್ಪಷ್ಟತೆ ನೀಡುವ ವ್ಯವಸ್ಥೆ ಇದಾಗಿದೆ. ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೇ ವೇದಿಕೆಯಲ್ಲಿ ಕುಳಿತು ಪರಿಹಾರ ನೀಡಲು ಈ 'ಪ್ರಜಾಸೇವೆ' ಕಾರ್ಯಕ್ರಮ ಸಹಕಾರಿಯಾಗಿದೆ" ಎಂದರು.

news_1791181369_3_571.webp

​ಅರ್ಜಿಗಳ ವಿಲೇವಾರಿಗೆ ವಿಶೇಷ ಇಲಾಖೆ ಹಾಗೂ ನಿಗಾ

​"ಹಿಂದೆ ಕಾಗೋಡು ತಿಮ್ಮಪ್ಪನವರು ಮತ್ತು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಅವಧಿಯಲ್ಲಿ (2013–18) ಇಂತಹ ಜನಸೇವಾ ಕಾರ್ಯಕ್ರಮಗಳನ್ನು ನಾವು ಸೊರಬದಲ್ಲಿ ಯಶಸ್ವಿಯಾಗಿ ಮಾಡಿದ್ದೆವು. ಈಗ ಸರ್ಕಾರ ಇದಕ್ಕಾಗಿ ಪ್ರತ್ಯೇಕ ಇಲಾಖೆಯನ್ನೇ ಮಾಡಿದೆ. ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಅರ್ಜಿಯೂ ಆನ್‌ಲೈನ್‌ ವ್ಯವಸ್ಥೆಯಲ್ಲಿ ದಾಖಲಾಗಲಿದ್ದು, ತಾಲೂಕು, ಜಿಲ್ಲಾ ಅಥವಾ ರಾಜ್ಯ ಮಟ್ಟದಲ್ಲಿ ಯಾವ ಹಂತದಲ್ಲಿದೆ ಎಂಬುದು ನೇರವಾಗಿ ನಮಗೂ ಹಾಗೂ ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೂ ತಿಳಿಯಲಿದೆ. ಜೊತೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಮೂಲ ಸಮಸ್ಯೆಗಳು ಯಾವುವು ಎಂಬುದನ್ನು ಗುರುತಿಸಿ ನೀತಿ ನಿರ್ಧಾರಗಳನ್ನು ಕೈಗೊಳ್ಳಲು ಇದು ಸರ್ಕಾರಕ್ಕೆ ನೆರವಾಗಲಿದೆ" ಎಂದು ಮಾಹಿತಿ ನೀಡಿದರು.

news_1791181369_1_856.webp

​ಸರ್ಕಾರದ ಗ್ಯಾರಂಟಿ ಹಾಗೂ ಅಭಿವೃದ್ಧಿ ಯೋಜನೆಗಳು

​ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿದ್ದು, ಉತ್ತಮವಾಗಿ ನಡೆಯುತ್ತಿವೆ. ಇದರ ಜೊತೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯ 'ಬಾರೋ ಜೋಡೋ' ಅಂತಹ ಹಲವು ವಿನೂತನ ಕಾರ್ಯಕ್ರಮಗಳು ಗ್ರಾಮ ಪಂಚಾಯತಿ ಮಟ್ಟದಲ್ಲೂ ಮುಂಬರುವ ದಿನಗಳಲ್ಲಿ ಜಾರಿಯಾಗಲಿವೆ ಎಂದು ತಿಳಿಸಿದರು.

news_1791181368_0_954.webp

​ನವೆಂಬರ್ ಅಂತ್ಯಕ್ಕೆ 500 ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಉದ್ಘಾಟನೆ

​ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳನ್ನು ಹಂಚಿಕೊಂಡ ಸಚಿವರು:

  • ​ಶಕ್ತಿ ಮೀರಿ ಕೆಲಸ: "ಮಕ್ಕಳ ಭವಿಷ್ಯವನ್ನು ರೂಪಿಸುವುದು ದೇಶದ ಪ್ರಗತಿಗೆ ಅಡಿಪಾಯ. ಈ ದೊಡ್ಡ ಇಲಾಖೆಯನ್ನು ವಿಶ್ವಾಸದಿಂದ ನನಗೆ ವಹಿಸಿದ್ದು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶಕ್ತಿ ಮೀರಿ ಶ್ರಮಿಸುತ್ತಿದ್ದೇನೆ."
  • ​ಬೃಹತ್ ಯೋಜನೆ: "ನವೆಂಬರ್ ಅಂತ್ಯದ ವೇಳೆಗೆ ಮುಖ್ಯಮಂತ್ರಿಗಳ ದಿನಾಂಕ ಪಡೆದು, ರಾಜ್ಯಾದ್ಯಂತ ಸುಮಾರು 1,250 ಕೆಪಿಎಸ್ (KPS) ಶಾಲೆಗಳ ಪೈಕಿ ಮೊದಲ ಹಂತದಲ್ಲಿ ₹4,300 ಕೋಟಿ ವೆಚ್ಚದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಒಂದೇ ವಾರದಲ್ಲಿ ಲೋಕಾರ್ಪಣೆ ಅಥವಾ ಕಾಮಗಾರಿಗೆ ಚಾಲನೆ ನೀಡುವ ತೀರ್ಮಾನ ಮಾಡಲಾಗಿದೆ."
  • ​ಉಚಿತ ಬಸ್ ಹಾಗೂ ಗುಣಮಟ್ಟದ ಶಿಕ್ಷಣ: "ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿ (LKG)ಯಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಶಿಕ್ಷಣ, ಕಂಪ್ಯೂಟರ್ ತರಬೇತಿ, ಪ್ರತಿ ತರಗತಿಗೂ ಪ್ರತ್ಯೇಕ ಶಿಕ್ಷಕರು, ದೈಹಿಕ ಮತ್ತು ಸಂಗೀತ ಶಿಕ್ಷಕರು ಇರಲಿದ್ದಾರೆ. ಜೊತೆಗೆ, ಸುತ್ತಮುತ್ತಲಿನ ಹಳ್ಳಿಗಳಿಂದ ಮಕ್ಕಳನ್ನು ಶಾಲೆಗೆ ಕರೆತರಲು ಉಚಿತ ಶಾಲಾ ಬಸ್ ಸೌಲಭ್ಯವನ್ನು ಶಿಕ್ಷಣ ಇಲಾಖೆಯೇ ಒದಗಿಸಲಿದೆ. ಪೋಷಕರು ಯಾವುದೇ ಆರ್ಥಿಕ ಹೊರೆಯಿಲ್ಲದೆ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು."

​ಕೊನೆಯಲ್ಲಿ, "ಸರ್ಕಾರ, ಮಂತ್ರಿಗಳು, ಶಾಸಕರು ಮತ್ತು ಇಡೀ ಆಡಳಿತ ಯಂತ್ರ ಸದಾ ಜನರ ಸೇವೆಯಲ್ಲಿ ಇರಲಿದೆ" ಎಂದು ಭರವಸೆ ನೀಡಿದರು.

news_1791181536_0_777.webp

​ಈ ಸಂದರ್ಭದಲ್ಲಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್, ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ್, ಸಾಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್, ಎಸಿ ವೀರೇಶ್ ಕುಮಾರ್, ಡಿಸಿಎಫ್ ಮೊಹಮ್ಮದ್ ಫಯಾಜುದ್ದೀನ್, ಎಎಸ್‌ಪಿ ಡಾ.ಬೆನಕ ಪ್ರಸಾದ್, ತಹಶೀಲ್ದಾರ್ ಡಾ.ಪ್ರತಿಭಾ.ಆರ್ ಹಾಗೂ ವಿವಿಧ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!