LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜಾಪ್ರಭುತ್ವದ ನಿಜವಾದ ಅರ್ಥ ಜನಸೇವೆ, ಜನರ ಸಮಸ್ಯೆ ಪರಿಹರಿಸುವುದೇ ನೈಜ ಆಡಳಿತ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ:"ಪ್ರಜಾಪ್ರಭುತ್ವದ ನಿಜವಾದ ಅರ್ಥ ಜನಸೇವೆ. ಸರ್ಕಾರ ಎಂದರೆ ಕೇವಲ ಕಚೇರಿಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ; ಬದಲಿಗೆ ಜನರ ಮನೆಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಬಗೆಹರಿಸುವುದೇ ನೈಜ ಆಡಳಿತ," ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

news_1791181369_2_469.webp

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪ್ರಜಾ ಸೇವೆ ಆಂದೋಲನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

​ಪ್ರತಿಯೊಂದು ಅರ್ಜಿಯೂ ವಿಲೇವಾರಿಯಾಗಬೇಕು: ಅಧಿಕಾರಿಗಳಿಗೆ ಖಡಕ್ ಸೂಚನೆ

​"ಸಾರ್ವಜನಿಕರು ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ದೂರದ ಊರುಗಳಿಂದ ಇಲ್ಲಿಗೆ ಬಂದಿದ್ದಾರೆ. ಸಾರ್ವಜನಿಕರು ನೀಡುವ ಪ್ರತಿಯೊಂದು ಅರ್ಜಿಗೂ ಬೆಲೆಯಿದೆ. ಯಾವುದೇ ಅಧಿಕಾರಿಯೂ ನಿರ್ಲಕ್ಷ್ಯ ತೋರುವಂತಿಲ್ಲ. ಎಲ್ಲ ಅರ್ಜಿಗಳನ್ನು ಸ್ವೀಕರಿಸಿ, ಅವುಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು. ಎಷ್ಟೇ ಸಮಯವಾದರೂ ಸರಿ, ಎಲ್ಲರ ಅರ್ಜಿಗಳನ್ನು ಸ್ವೀಕರಿಸಿದ ನಂತರವೇ ನಾವು ಇಲ್ಲಿಂದ ತೆರಳುತ್ತೇವೆ," ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು.

news_1791181369_3_571.webp

​ಸಾಗರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

​ಮಲೆನಾಡು ಭಾಗದಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ಪ್ರಸ್ತಾಪಿಸಿದ ಶಾಸಕರು, "ನಾನೂ ಕೂಡ ಒಬ್ಬ ರೈತನ ಮಗ. ಹೊಲದಲ್ಲಿ ದುಡಿದು, ಗೊಬ್ಬರ ಹೊತ್ತು ಬಂದವನು. ರೈತರ ಕಷ್ಟ-ನಷ್ಟಗಳು ನನಗೆ ಚೆನ್ನಾಗಿ ತಿಳಿದಿವೆ. ಸಾಗರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ರೈತರು ಮತ್ತು ಸಂಘಟನೆಗಳು ಒತ್ತಾಯಿಸುತ್ತಿವೆ. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ನಾಳೆ ನಡೆಯಲಿರುವ ಸಚಿವ ಸಂಪುಟ (ಕ್ಯಾಬಿನೆಟ್) ಸಭೆಯಲ್ಲಿ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು, ಸಾಗರವನ್ನು ಬರಪೀಡಿತ ಎಂದು ಘೋಷಿಸಲು ಕ್ರಮ ಕೈಗೊಳ್ಳಬೇಕು," ಎಂದು ವೇದಿಕೆಯಲ್ಲೇ ಸಚಿವರಿಗೆ ಮನವಿ ಮಾಡಿದರು.

news_1791181536_0_777.webp

​ಸಾಗರಕ್ಕೆ 10,000 ನಿವೇಶನ ಮಂಜೂರು ಮಾಡಲು ಡಿಸಿಗೆ ಬೇಡಿಕೆ

​ರಾಜ್ಯ ಸರ್ಕಾರವು ಜಿಲ್ಲೆಗೆ 50,000 ಆಶ್ರಯ ನಿವೇಶನಗಳನ್ನು ನೀಡಲು ತೀರ್ಮಾನಿಸಿರುವುದನ್ನು ಸ್ವಾಗತಿಸಿದ ಶಾಸಕರು, "ಸಾಗರ ತಾಲೂಕಿನಲ್ಲಿ ಬಡವರಿಗೆ ನಿವೇಶನದ ಅಗತ್ಯ ಹೆಚ್ಚಾಗಿದೆ. ಆದ್ದರಿಂದ ಜಿಲ್ಲೆಗೆ ಹಂಚಿಕೆಯಾಗಿರುವ 50,000 ನಿವೇಶನಗಳಲ್ಲಿ ಸಾಗರ ತಾಲೂಕೊಂದಕ್ಕೇ ಕನಿಷ್ಠ 10,000 ನಿವೇಶನಗಳನ್ನು ಮೀಸಲಿಡಬೇಕು. ಇದಕ್ಕಾಗಿ ಅಗತ್ಯವಿರುವ ಜಮೀನನ್ನು ಗುರುತಿಸಿ ಕೂಡಲೇ ಪ್ರಕ್ರಿಯೆ ಆರಂಭಿಸಬೇಕು," ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

​ಗೋವುಗಳ ಕಳ್ಳತನ ತಡೆಗೆ ಕಠಿಣ ಕ್ರಮಕ್ಕೆ ಎಸ್ಪಿಗೆ ಸೂಚನೆ

​ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗೋವು ಕಳ್ಳತನದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಬೇಳೂರು ಅವರು, ವೇದಿಕೆಯಲ್ಲಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನೇರವಾಗಿ ಸೂಚನೆ ನೀಡಿದರು:

"ಸಾಗರ ವ್ಯಾಪ್ತಿಯಲ್ಲಿ ಬೇರೆ ಬೇರೆ ಕಡೆಗಳಿಂದ ಬಂದು ರಾತ್ರಿ ವೇಳೆ ಹಸುಗಳನ್ನು ಕಳ್ಳತನ ಮಾಡುವ ಜಾಲ ಸಕ್ರಿಯವಾಗಿದೆ. ಯಾವುದೇ ಧರ್ಮ, ಜಾತಿ ಅಥವಾ ಪ್ರಭಾವವನ್ನು ನೋಡದೆ, ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಗೋ ರಕ್ಷಣೆಗೆ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಳ್ಳಬೇಕು," ಎಂದು ತಾಕೀತು ಮಾಡಿದರು. ಇದೇ ಸಂದರ್ಭದಲ್ಲಿ ಗಣೇಶ ವಿಸರ್ಜನೆಯನ್ನು ಶಾಂತಿಯುತವಾಗಿ ನಿರ್ವಹಿಸಿದ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದರು.

​ವೇದಿಕೆಯಲ್ಲಿ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಬಿ.ಆರ್. ಜಯಂತ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್, ವೈಲ್ಡ್ ಲೈಫ್ ಡಿಸಿಎಫ್ ಪ್ರಸನ್ನ ಪಾಟಗಾರ್, ಸಾಗರ ಡಿಸಿಎಫ್ ಮೊಹಮ್ಮದ್ ಫಯಾಜುದ್ದೀನ್ ಸೇರಿದಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!