LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೇನಾಮಿ ಆಸ್ತಿ, ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ನಟಿ ರಕುಲ್ ಪ್ರೀತ್ ಗರಂ: ಐಟಿ ತನಿಖೆ ಕುರಿತು ನೀಡಿದ್ರು ಖಡಕ್ ಸ್ಪಷ್ಟನೆ!

ಚಿತ್ರ ನಿರ್ಮಾಪಕ ವಾಶು ಭಗ್ನಾನಿ ಹಾಗೂ ಪನೋರಮಾ ಸ್ಟುಡಿಯೋಸ್‌ಗೆ ಸಂಬಂಧಿಸಿದಂತೆ ಐಟಿ ಇಲಾಖೆ ನಡೆಸುತ್ತಿರುವ ವಿದೇಶಿ ಚಿತ್ರ ನಿಧಿ ಅಕ್ರಮ ವ್ಯವಹಾರಗಳ ತನಿಖೆಯ ನಡುವೆ, ತಮ್ಮ ವಿರುದ್ಧ ಹರಿದಾಡುತ್ತಿರುವ ಸುದ್ದಿಗಳ ಕುರಿತು ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿದ್ದಾರೆ. ತಮಗೆ ಸಂಬಂಧಿಸಿದಂತೆ ಯಾವುದೇ ಐಟಿ ದಾಳಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿರುವ ನಟಿ, ಸತ್ಯಾಸತ್ಯತೆ ಪರಿಶೀಲಿಸದೇ ಸುಳ್ಳು ಸುದ್ದಿ ಬಿತ್ತರಿಸುತ್ತಿರುವ ಮಾಧ್ಯಮಗಳು ಹಾಗೂ ಆನ್‌ಲೈನ್ ವರದಿಗಾರರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೋಮವಾರ ಇನ್‌ಸ್ಟಾಗ್ರಾಮ್‌ನಲ್ಲಿ ದೀರ್ಘ ಬರಹ ಹಂಚಿಕೊಂಡಿರುವ ರಕುಲ್, “ನಾನು ಸೇನಾ ಹಿನ್ನೆಲೆಯಿಂದ ಬಂದವಳು, ಸಿನಿರಂಗದಲ್ಲಿ ನನಗೆ ಯಾವುದೇ ಗಾಡ್‌ಫಾದರ್ ಇರಲಿಲ್ಲ. ಸಂಪೂರ್ಣ ಸ್ವಂತ ಶ್ರಮದಿಂದ ಈ ಹಂತಕ್ಕೆ ಬೆಳೆದಿದ್ದೇನೆ. ಒಬ್ಬ ಜವಾಬ್ದಾರಿಯುತ ಹಾಗೂ ಕಾಯ್ದೆ ಪಾಲಿಸುವ ಪ್ರಜೆಯಾಗಿ ನನ್ನ ೨೦ನೇ ವಯಸ್ಸಿನಿಂದಲೂ ಬಾಕಿ ಇಲ್ಲದೆ ತೆರಿಗೆ ಪಾವತಿಸುತ್ತಾ ಬಂದಿದ್ದೇನೆ,” ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, “ನನ್ನ ವೈಯಕ್ತಿಕ ಸಾಮರ್ಥ್ಯದಲ್ಲಾಗಲೀ ಅಥವಾ ಯಾವುದೇ ನಿರ್ಮಾಣ ಸಂಸ್ಥೆಯ ಪರವಾಗಿಯಾಗಲೀ ನಾನು ಯಾವುದೇ ರೀತಿಯ ಅಕ್ರಮ ವಿದೇಶಿ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿಲ್ಲ. ಭಾರತದಲ್ಲಾಗಲಿ ಅಥವಾ ವಿದೇಶದಲ್ಲಾಗಲಿ ಯಾರ ಬೆನಾಮಿ ಆಸ್ತಿಯನ್ನೂ ನಾನು ಹೊಂದಿಲ್ಲ. ನನಗೆ ಯಾರೂ ಎಂದೂ ಯಾವುದೇ ಆಸ್ತಿಯನ್ನು ಉಡುಗೊರೆಯಾಗಿ ನೀಡಿಲ್ಲ, ಹಾಗೆ ನೀಡುವ ದುಬಾರಿ ಗಿಫ್ಟ್‌ಗಳನ್ನು ಸ್ವೀಕರಿಸದಿರುವುದು ನನ್ನ ತತ್ವ,” ಎಂದು ಖಡಕ್ ಆಗಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಸಂಸ್ಥೆಗಳಿಗೆ ವ್ಯವಹಾರಿಕ ಒತ್ತಡಗಳಿರಬಹುದು, ಆದರೆ ಅದು ಯಾರದ್ದೋ ಗೌರವ ಮತ್ತು ಜೀವನೋಪಾಯಕ್ಕೆ ಧಕ್ಕೆ ತರುವಂತಿರಬಾರದು ಎಂದಿರುವ ನಟಿ, ತಮ್ಮ ವಿರುದ್ಧ ಹರಿದಾಡುತ್ತಿರುವ ಸುಳ್ಳು ಹಾಗೂ ಕಲ್ಪಿತ ವರದಿಗಳನ್ನು ತಕ್ಷಣವೇ ಹಿಂಪಡೆಯುವಂತೆ ವಿನಂತಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?