LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೀದರ್: ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ ಮನೆ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ!

ಬೀದರ್: ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮುಧ್ನಾಳ್ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯೊಂದು ಬೆಂಕಿಗಾಹುತಿಯಾದ ಭೀಕರ ಘಟನೆ ನಡೆದಿದೆ. ಗ್ರಾಮದ ಚುಕ್ಕೆಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಇದ್ದಕ್ಕಿದ್ದಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಮನೆಗೆ ಆವರಿಸಿದೆ. ನೋಡನೋಡುತ್ತಿದ್ದಂತೆ ದಟ್ಟ ಹೊಗೆ ಹಾಗೂ ಬೆಂಕಿಯ ಕೆನ್ನಾಲಗೆ ಇಡೀ ಮನೆಯನ್ನು ಆವರಿಸಿದ್ದರಿಂದ ಗ್ರಾಮದಲ್ಲಿ ಕೆಲಕಾಲ ತೀವ್ರ ಆತಂಕ ಹಾಗೂ ಭೀತಿಯ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿಯ ತೀವ್ರತೆಗೆ ಮನೆಯ ಹಾಲ್ ಹಾಗೂ ಅಡುಗೆ ಕೋಣೆಯಲ್ಲಿದ್ದ ಫ್ರಿಡ್ಜ್, ದಿನಸಿ ಸಾಮಗ್ರಿಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಗೃಹಬಳಕೆಯ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ತಕ್ಷಣ ಎಚ್ಚೆತ್ತ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿದ್ದಾರೆ. ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಗಮಿಸಿದ ಕಾರಣ ಅನಾಹುತ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಸಂಬಂಧ ಚಿಟಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!