LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪುರುಷರ ಮನಸ್ಸಿನಲ್ಲಿ ಪ್ರಾಣಭಯ ಹುಟ್ಟಿಸಿ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಹೀಗೆ ಹೇಳಿದ್ದೇಕೆ?

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿ ದೆಹಲಿ ಪೊಲೀಸರಿಗೆ ಖಡಕ್ ಸೂಚನೆ ನೀಡಿದೆ.

ಲೈಂಗಿಕ ಅಪರಾಧಗಳನ್ನು ಮಾಡುವ ಪ್ರವೃತ್ತಿ ಹೊಂದಿರುವ ಪುರುಷರ ಮನಸ್ಸಿನಲ್ಲಿ ಪ್ರಾಣ ಭಯ ಹುಟ್ಟಬೇಕು.’ಇನ್ನು ಮುಂದೆ ಇಂತಹ ಕೃತ್ಯವೆಸಗಿದರೆ ನಾವು ಖಂಡಿತವಾಗಿಯೂ ಬದುಕಲು ಸಾಧ್ಯವಿಲ್ಲ, ಸಾಯುತ್ತೇವೆ’ ಎಂಬ ಭಯ ಅವರಲ್ಲಿ ಕಾಡಬೇಕು. ಅಂತಹ ಸ್ಥಿತಿಯನ್ನು ಪೊಲೀಸರು ಸೃಷ್ಟಿಸಬೇಕು. ಮಹಿಳೆಯರು ರಾತ್ರಿ 10 ಗಂಟೆಯಾದರೂ ಸುರಕ್ಷಿತವಾಗಿ ಹೊರಗೆ ಓಡಾಡುವಂತಾಗಬೇಕು ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಕೆಲದಿನಗಳ ಹಿಂದೆ ದಕ್ಷಿಣ ದೆಹಲಿಯ ಲೇಡಿ ಶ್ರೀ ರಾಮ್ (LSR) ಮಹಿಳಾ ಕಾಲೇಜಿನಿಂದ ಕೇವಲ 2 ಕಿ.ಮೀ ದೂರದಲ್ಲಿರುವ ಆಸ್ಥಾ ಕುಂಜ್ ಪಾರ್ಕ್‌ನಲ್ಲಿ 17 ವರ್ಷದ ಬಾಲಕಿಯ ಮೇಲೆ ನಕಲಿ ಪೊಲೀಸರ ಸೋಗಿನಲ್ಲಿ ಬಂದು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣವನ್ನು ನ್ಯಾಯಪೀಠ ಗಂಭೀರವಾಗಿ ಪರಿಗಣಿಸಿದೆ. ಆ ಪ್ರದೇಶದಲ್ಲಿ ಈ ಹಿಂದೆಯೇ ಕಿರುಕುಳದ ದೂರುಗಳಿದ್ದರೂ ಪೊಲೀಸರು ಮುನ್ನೆಚ್ಚರಿಕೆ ವಹಿಸದಿರುವುದನ್ನು ತರಾಟೆಗೆ ತೆಗೆದುಕೊಂಡಿತು.

ಇದೇ ವೇಳೆ ಗ್ರೇಟರ್ ನೋಯ್ಡಾದಿಂದ ದೆಹಲಿಗೆ ಸುಮಾರು 47 ಕಿ.ಮೀ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಅಪ್ರಾಪ್ತೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಸ್ವರೂಪ್ ನಗರದಲ್ಲಿ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ನ್ಯಾಯಾಲಯ ಪ್ರಸ್ತಾಪಿಸಿ, ಇದು ವ್ಯವಸ್ಥೆಯ ವೈಫಲ್ಯ ಎಂದು ಕಿಡಿಕಾರಿದೆ.

ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು, “2012ರ ನಿರ್ಭಯಾ ಪ್ರಕರಣದ ಅಪರಾಧಿಗಳು ಸಹ ಅಪರಾಧ ಎಸಗುವ ಮುನ್ನ ಮದ್ಯ ಸೇವಿಸಿ ಸುತ್ತಾಡುತ್ತಿದ್ದರು. ಒಂದು ದಶಕ ಕಳೆದರೂ ಪರಿಸ್ಥಿತಿ ಬದಲಾಗದಿರುವುದು ನೋವಿನ ಸಂಗತಿ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಕಾಲೇಜುಗಳ ಸುತ್ತ ಕಟ್ಟೆಚ್ಚರಮಹಿಳಾ ಕಾಲೇಜುಗಳ ಸುತ್ತ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವ ಪೋಕರಿಗಳು ಮತ್ತು ಅಲೆಮಾರಿಗಳ ಮೇಲೆ ನಿಗಾ ಇರಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಅಕ್ರಮ ತಿನಿಸುಗಳು/ಢಾಬಾಗಳ ನಿಯಂತ್ರಣಸಮಾಜವಿರೋಧಿ ಶಕ್ತಿಗಳು ಜಮಾಯಿಸಿ ಅಕ್ರಮವಾಗಿ ಮದ್ಯ ಸೇವಿಸುವ ತಿನಿಸುಗಳು ಹಾಗೂ ಅಡ್ಡೆಗಳ ಮೇಲೆ ತಕ್ಷಣವೇ ದಾಳಿ ನಡೆಸಬೇಕು ಎಂದು ಸೂಚಿಸಿದೆ.

ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆ ಮತ್ತು ತುರ್ತು ಸ್ಪಂದನೆಗಾಗಿ ಮೀಸಲಾದ ಸಮಗ್ರ ‘ವಾರ್ ರೂಮ್’ ಕಾರ್ಯನಿರ್ವಹಣೆಯನ್ನು ಚುರುಕುಗೊಳಿಸುವುದು.ಲೈಂಗಿಕ ಅಪರಾಧಿಗಳ ಡೇಟಾಬೇಸ್ರಾಷ್ಟ್ರೀಯ ಲೈಂಗಿಕ ಅಪರಾಧಿಗಳ ಡೇಟಾಬೇಸ್ ಪರಿಶೀಲಿಸಿ, ಹಳೆಯ ಅಪರಾಧಿಗಳು ಮತ್ತು ಶಂಕಿತರ ಚಲನವಲನಗಳ ಮೇಲೆ ನಿರಂತರ ಕಣ್ಗಾವಲು ಇಡಬೇಕು.

ಬೀಟ್ ಗಸ್ತು, ಸಿಸಿಟಿವಿ ಕಣ್ಗಾವಲು ಹಾಗೂ ಕತ್ತಲೆಯಿರುವ ಸಾರ್ವಜನಿಕ ಸ್ಥಳಗಳಲ್ಲಿ ದೀಪಗಳ ವ್ಯವಸ್ಥೆಯನ್ನು ಬಲಪಡಿಸಿ 4 ವಾರಗಳಲ್ಲಿ ವರದಿ ಸಲ್ಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಂವಿಧಾನದ 21ನೇ ವಿಧಿಯಡಿ ಮಹಿಳೆಯರ ಘನತೆ ಮತ್ತು ಜೀವಿಸುವ ಹಕ್ಕನ್ನು ರಕ್ಷಿಸುವುದು ಆಡಳಿತ ಹಾಗೂ ಪೊಲೀಸರ ಮೂಲಭೂತ ಕರ್ತವ್ಯ ಎಂದು ನ್ಯಾಯಾಲಯ ಖಡಕ್ ಆಗಿ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?