LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯಲ್ಲಿ ಪತ್ರಕರ್ತೆಯ ಮೇಲೆ ದೌರ್ಜನ್ಯ: ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಸಾಗರ: ದೆಹಲಿಯಲ್ಲಿ ಪ್ರತಿಭಟನೆಯ ವರದಿಗಾರಿಕೆಗೆ ತೆರಳಿದ್ದ ಮಹಿಳಾ ಪತ್ರಕರ್ತೆಯ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದನ್ನು ಖಂಡಿಸಿ, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ತಾಲೂಕು ಘಟಕದ ವತಿಯಿಂದ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಭಾರತದ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ವರದಿಗಾರಿಕೆಗೆ ತೆರಳಿದ್ದಾಗ ಅನುಚಿತ ವರ್ತನೆ, ದೂರು ದಾಖಲಿಸದೆ ಸತಾಯಿಸಿದ ದೆಹಲಿ ಪೊಲೀಸರು:

ದೆಹಲಿಯ ಜಂತರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡಲು ತೆರಳಿದ್ದ ಮೂವರು ಮಹಿಳಾ ಪತ್ರಕರ್ತೆಯರ ಮೇಲೆ ಪೊಲೀಸರು ಹಲ್ಲೆ ನಡೆಸಿ, ಅನುಚಿತವಾಗಿ ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಮಹಿಳಾ ಪತ್ರಕರ್ತೆಯರು ಅಧಿಕೃತ ಗುರುತಿನ ಚೀಟಿ (Press ID) ಹೊಂದಿದ್ದರೂ ಪೊಲೀಸರು ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.

ಅಲ್ಲದೆ, ಕಿರುಕುಳ ನೀಡಿದ ಅಧಿಕಾರಿಯ ವಿರುದ್ಧ ದೂರು ದಾಖಲಿಸಲು ಠಾಣೆಗೆ ಹೋದಾಗ ಪೊಲೀಸರು ಗಂಟೆಗಟ್ಟಲೆ ಕಾಯಿಸಿ, ಎಫ್‌ಐಆರ್ ದಾಖಲಿಸದೆ ಸತಾಯಿಸಿ, ಆಕೆಯನ್ನು ವಶಕ್ಕೆ ಪಡೆದು ಕಾನೂನುಬಾಹಿರವಾಗಿ ನಡೆದುಕೊಂಡಿದ್ದಾರೆ. ಈ ಹಿಂದೆ ನೀಟ್ (NEET) ಪರೀಕ್ಷೆ ಸಂದರ್ಭದಲ್ಲೂ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಯರ ಮೇಲೆ ಇದೇ ರೀತಿ ದೌರ್ಜನ್ಯ ಎಸಗಲಾಗಿತ್ತು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

news_1791270704_0_346.webp

ಪತ್ರಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ: ಸಂಘದ ಅಧ್ಯಕ್ಷ ಮಹೇಶ್ ಹೆಗಡೆ ಕಳವಳ

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಸಾಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್ ಹೆಗಡೆ ಅವರು, "ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಾರೆ. ಅಂತಹ ಸಂದರ್ಭದಲ್ಲಿ ನ್ಯಾಯಾಂಗ ಮತ್ತು ರಕ್ಷಣಾ ವ್ಯವಸ್ಥೆಯ ಭಾಗವಾಗಿರುವ ಪೊಲೀಸರೇ ಮಹಿಳಾ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅತ್ಯಂತ ಕೆಟ್ಟ ನಡವಳಿಕೆಯಾಗಿದ್ದು, ನಾವೆಲ್ಲರೂ ತಲೆತಗ್ಗಿಸುವಂತಹ ಘಟನೆಯಾಗಿದೆ" ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

"ದೆಹಲಿಯ ಘಟನೆ ಕೇವಲ ಒಂದು ಉದಾಹರಣೆಯಷ್ಟೇ. ಸಾಗರದಿಂದ ಹಿಡಿದು ದೆಹಲಿ ಮಟ್ಟದವರೆಗೂ ಎಲ್ಲ ಹಂತಗಳಲ್ಲೂ ಇಂದು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವೆಡೆ ಪತ್ರಕರ್ತರು ಭಯದ ವಾತಾವರಣದಲ್ಲೇ ಕಾರ್ಯನಿರ್ವಹಿಸುವ ದುಸ್ಥಿತಿ ಇದೆ. ಮಹಿಳಾ ಪತ್ರಕರ್ತೆ ಠಾಣೆಗೆ ದೂರು ನೀಡಲು ಹೋದಾಗ ಎಫ್‌ಐಆರ್ ದಾಖಲಿಸದೆ ಸತಾಯಿಸಿದ್ದು ನಾಚಿಕೆಗೇಡಿನ ಸಂಗತಿ ಎಂದರು.

ಸರ್ಕಾರ ಮತ್ತು ಉನ್ನತ ಪ್ರಾಧಿಕಾರಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯ ಎಸಗಿದ ಅಧಿಕಾರಿಯ ವಿರುದ್ಧ ನಿರ್ದಾಕ್ಷಿಣ್ಯವಾಗಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮಾಧ್ಯಮದವರು ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸಲು ಪೂರಕ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸಬೇಕು" ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದೀಪಕ್ ಸಾಗರ್, ನಾಗೇಶ್.ಜಿ, ಎಂ.ಜಿ ರಾಘವನ್, ಮಾ.ಸಾ ನಂಜುಂಡಸ್ವಾಮಿ, ಶಿವನಗೌಡ, ಲೋಕೇಶ್ ಗುಡಿಗಾರ್, ಗಿರೀಶ್ ರಾಯ್ಕರ್, ಇಮ್ರಾನ್ ಸಾಗರ್, ಮೂರನೇ ಕಣ್ಣು ನಾಗರಾಜ್, ರಫೀಕ್ ಕೊಪ್ಪ, ಬಿ.ಡಿ ರವಿಕುಮಾರ್, ರಾಜೇಶ್ ಬಡ್ತಿ ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!