LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯ ನಿವಾಸಿ ಆಯುಕ್ತ ಸಮೀರ್ ಶುಕ್ಲಗೆ ಸಚಿವ ಈಶ್ವರ ಖಂಡ್ರೆ ಬೀಳ್ಕೊಡುಗೆ

ಬೆಂಗಳೂರು : ದೆಹಲಿ ನಿವಾಸಿ ಆಯುಕ್ತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಸ್ನೇಹ ಸೇತುವಾಗಿದ್ದು, ಸಮೀರ್ ಶುಕ್ಲ ಅವರು ಈ ಕಾರ್ಯವನ್ನು ಉತ್ತಮವಾಗಿ ನಿರ್ಹವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ದೆಹಲಿಯ ನಿವಾಸಿ ಆಯುಕ್ತರಾಗಿ ವರ್ಗಾವಣೆಯಾಗಿರುವ ಸಮೀರ್ ಶುಕ್ಲ ಅವರಿಗೆ ವಿಕಾಸಸೌಧದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷಗಳಿಂದ ಸಮೀರ್ ಶುಕ್ಲ ಅವರು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ. ಕೇಂದ್ರ ಸರ್ಕಾರ ಕಾರ್ಯದರ್ಶಿಗಳೊಂದಿಗೆ ಸಂಪರ್ಕ ಬೆಳೆಸಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಇಲಾಖೆಗೆ ಪ್ರಧಾನಕಾರ್ಯದರ್ಶಿಗಳಾಗಿ ವರ್ಗಾವಣೆಯಾಗಿ ಅಧಿಕಾರ ವಹಿಸಿಕೊಂಡಿರುವ ಪಂಕಜ್ ಕುಮಾರ್ ಪಾಂಡೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುತ್ತಾರೆ  ಎಂಬ ವಿಶ್ವಾಸ ವ್ಯಕ್ತಪಡಿಸಿದರು.   

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.60ರಷ್ಟು ಜನರು ಗ್ರಾಮೀಣ ಕರ್ನಾಟಕದಲ್ಲಿ ವಾಸಿಸುತ್ತಿದ್ದು, ಇವರೆಲ್ಲರ ಜೀವನಮಟ್ಟ ಸುಧಾರಿಸುವ ಮತ್ತು ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಪ್ರಸ್ತುತ ಮಳೆಯ ಕೊರತೆಯಿಂದ ನೀರಿನ ಸಮಸ್ಯೆ ಇದ್ದು, ವಿಬಿಜಿ ರಾಮ್ ಜಿ ಉದ್ಯೋಗವನ್ನು ಗ್ರಾಮೀಣ ಬಡಜನರಿಗೆ ಒದಗಿಸಿ ಗುಳೆ ತಪ್ಪಿಸಬೇಕು. ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಯೋಜನೆ ರೂಪಿಸಬೇಕು ಎಂದರು.

ಇಲಾಖೆಯ ಪ್ರಧಾನಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್, ಆಯುಕ್ತರುಗಳಾದ ಫೌಜಿಯ ತರನ್ನಂ, ವೈ.ಎಸ್. ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?