LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು – ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಬೆಂಗಳೂರು: ವಾರಾಂತ್ಯ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈರುತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ಎರಡೂ ಮಾರ್ಗಗಳಲ್ಲಿ ತಲಾ ಒಂದು ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರವನ್ನು ನಡೆಸಲಿದೆ.

ರೈಲು ಸಂಖ್ಯೆ 06563 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ  ವಿಶೇಷ ಎಕ್ಸ್’ಪ್ರೆಸ್ ರೈಲು 16.10.2026 ರಂದು ಎಸ್ಎಂವಿಟಿ ಬೆಂಗಳೂರಿನಿಂದ 19.00 ಗಂಟೆಗೆ ಹೊರಟು, ಮರುದಿನ 08.25 ಗಂಟೆಗೆ ಬೆಳಗಾವಿ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06564 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್’ಪ್ರೆಸ್ ರೈಲು 17.10.2026 ರಂದು ಬೆಳಗಾವಿಯಿಂದ 17.30 ಗಂಟೆಗೆ ಹೊರಟು, ಮರುದಿನ 05.00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಮಾರ್ಗಮಧ್ಯದಲ್ಲಿ ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಮ್ಎಮ್ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 18 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 8 ಸ್ಲೀಪರ್ ಕ್ಲಾಸ್, 4 ಜನರಲ್ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ದಿವ್ಯಾಂಗ ಸ್ನೇಹಿ ಕಂಪಾರ್ಟ್’ಮೆಂಟ್’ಗಳನ್ನು ಹೊಂದಿರುವ ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್’ಗಳು ಇರಲಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ