ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲಿಂಗ್‌ಗೆ ಗುರಿಯಾಗುವುದು ಸಾಮಾನ್ಯವಾಗಿದೆ. ಐಶ್ವರ್ಯಾ ರೈ, ಕತ್ರಿನಾ ಕೈಫ್, ರಣಬೀರ್ ಕಪೂರ್, ಸಲ್ಮಾನ್ ಖಾನ್ ಸೇರಿದಂತೆ ಹಲವು ಖ್ಯಾತ ನಟ-ನಟಿಯರು ವಿವಿಧ ಕಾರಣಗಳಿಗೆ ಟ್ರೋಲ್ ಆಗಿದ್ದಾರೆ. ಇದೀಗ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕೂಡ ತಮ್ಮ ವಿರುದ್ಧ ನಡೆಯುತ್ತಿರುವ ಟ್ರೋಲಿಂಗ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಎಲ್ಲರೊಂದಿಗೂ ಸ್ನೇಹಪರವಾಗಿ ಬೆರೆಯುವುದನ್ನು ಕೆಲವರು ಇಷ್ಟಪಡುವುದಿಲ್ಲ. ಆದರೆ, ಅಂತಹ ಟೀಕೆಗಳಿಗಾಗಿ ತಮ್ಮ ಸ್ವಭಾವವನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂದು ರಶ್ಮಿಕಾ ಸ್ಪಷ್ಟಪಡಿಸಿದ್ದಾರೆ. ಬಿಡುಗಡೆಯ ಹೊಸ್ತಿಲಲ್ಲಿರುವ ‘ರಣಬಾಲಿ’ ಚಿತ್ರದ ಪ್ರಚಾರದ ವೇಳೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.
‘ಎಲ್ಲರೊಂದಿಗೆ ಒಳ್ಳೆಯತನದಿಂದ ಇರುವುದು ದೌರ್ಬಲ್ಯವಲ್ಲ. ನಾನು ಇರುವ ಜಾಗದಲ್ಲಿ ಸಕಾರಾತ್ಮಕ ವಾತಾವರಣ ಇರಬೇಕು ಎಂಬ ಕಾರಣಕ್ಕೆ ಸದಾ ಉತ್ಸಾಹದಿಂದ ಇರುತ್ತೇನೆ. ಎಲ್ಲರೂ ನನ್ನನ್ನು ಇಷ್ಟಪಡಬೇಕು ಎಂಬ ಹಠ ನನಗಿಲ್ಲ. ಆದರೆ, ನಾನು ಹೀಗಿರುವುದೇ ನನಗೆ ಇಷ್ಟ. ಬೇರೆಯವರಿಗಾಗಿ ನನ್ನನ್ನು ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ರಶ್ಮಿಕಾ ಹೇಳಿದ್ದಾರೆ.
ತಮ್ಮ ಉತ್ಸಾಹಭರಿತ ಸ್ವಭಾವದಿಂದ ಕುಟುಂಬ ಮತ್ತು ಸ್ನೇಹಿತರು ಸಂತೋಷವಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ. ಈ ವೇಳೆ ಪತಿ ವಿಜಯ್ ದೇವರಕೊಂಡ ಕೂಡ ರಶ್ಮಿಕಾಗೆ ಬೆಂಬಲ ನೀಡಿದ್ದಾರೆ.
ಅಭಿಮಾನಿಗಳೊಂದಿಗೆ ಆತ್ಮೀಯವಾಗಿ ಬೆರೆಯುವ ರಶ್ಮಿಕಾ ಅವರ ಗುಣವನ್ನು ಹಲವರು ಮೆಚ್ಚುತ್ತಾರೆ. ಆದರೆ, ಇದೇ ವಿಚಾರವಾಗಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ನಡವಳಿಕೆಯನ್ನು ಕೆಲವರು ‘ಓವರ್ ಆ್ಯಕ್ಟಿಂಗ್’ ಎಂದು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರಶ್ಮಿಕಾ, ಸಾರ್ವಜನಿಕರ ಮೆಚ್ಚುಗೆ ಪಡೆಯಲು ತಾವು ಈ ರೀತಿ ವರ್ತಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
‘ರಣಬಾಲಿ’ ಬಗ್ಗೆ ರಶ್ಮಿಕಾ ಮಾತು
ಇದೇ ಸಂದರ್ಶನದಲ್ಲಿ ರಶ್ಮಿಕಾ ತಮ್ಮ ಮುಂಬರುವ ‘ರಣಬಾಲಿ’ ಚಿತ್ರದ ಬಗ್ಗೆಯೂ ಮಾತನಾಡಿದ್ದಾರೆ. ಈ ಸಿನಿಮಾ ತಮ್ಮ ಪಾಲಿಗೆ ತುಂಬಾ ವಿಶೇಷ ಎಂದು ಅವರು ಹೇಳಿದ್ದಾರೆ.
ರಾಹುಲ್ ಸಂಕೃತ್ಯಾನ್ ನಿರ್ದೇಶನದ ಚಿತ್ರದಲ್ಲಿ ನಟಿಸಬೇಕು ಎಂಬುದು ಬಹಳ ದಿನಗಳ ಆಸೆಯಾಗಿತ್ತು. ಹೀಗಾಗಿ ಈ ಅವಕಾಶವನ್ನು ಕೈಬಿಡಲು ಇಷ್ಟಪಡಲಿಲ್ಲ ಎಂದು ರಶ್ಮಿಕಾ ಹೇಳಿದ್ದಾರೆ. ವಿಜಯ್ ದೇವರಕೊಂಡ ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ ಎಂಬುದು ತಿಳಿದ ಬಳಿಕ ಸಿನಿಮಾಗೆ ಒಪ್ಪಿಕೊಂಡೆ ಎಂದು ತಿಳಿಸಿದ್ದಾರೆ.
ಬಹಳ ಸಮಯದ ಬಳಿಕ ವಿಜಯ್ ದೇವರಕೊಂಡ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದರಿಂದ ಈ ಸಿನಿಮಾ ಮತ್ತಷ್ಟು ವಿಶೇಷವಾಗಿದೆ ಎಂದು ಅವರು ಹೇಳಿದ್ದಾರೆ.
ಚಿತ್ರದಲ್ಲಿ ರಶ್ಮಿಕಾ ‘ಜಯಮ್ಮ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರ ತುಂಬಾ ಭಾವನಾತ್ಮಕವಾಗಿದ್ದು, ಪ್ರೇಕ್ಷಕರ ಮನಸ್ಸಿನಲ್ಲಿ ಆಳವಾಗಿ ಉಳಿಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಅಜಯ್-ಅತುಲ್ ಜೋಡಿ ಚಿತ್ರಕ್ಕೆ ಸಂಗೀತ ನೀಡಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌ಗೆ ನೀಡಿರುವ ಹಿನ್ನೆಲೆ ಸಂಗೀತವೂ ಗಮನ ಸೆಳೆದಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರವನ್ನು ನಿರ್ಮಿಸುತ್ತಿದ್ದು, ಟಿ-ಸೀರಿಸ್ ಪ್ರಸ್ತುತಪಡಿಸುತ್ತಿದೆ.
https://www.instagram.com/reel/DdlWW8doSK6/?utm_source=ig_embed&utm_campaign=loading” data-instgrm-version=”14″ style=” background:#FFF; border:0; border-radius:3px; box-shadow:0 0 1px 0 rgba(0,0,0,0.5),0 1px 10px 0 rgba(0,0,0,0.15); margin: 1px; max-width:540px; min-width:326px; padding:0; width:99.375%; width:-webkit-calc(100% – 2px); width:calc(100% – 2px);”>https://www.instagram.com/reel/DdlWW8doSK6/?utm_source=ig_embed&utm_campaign=loading” style=” background:#FFFFFF; line-height:0; padding:0 0; text-align:center; text-decoration:none; width:100%;” target=”_blank”>View this post on Instagramhttps://www.instagram.com/reel/DdlWW8doSK6/?utm_source=ig_embed&utm_campaign=loading” style=” color:#c9c8cd; font-family:Arial,sans-serif; font-size:14px; font-style:normal; font-weight:normal; line-height:17px; text-decoration:none;” target=”_blank”>A post shared by Rashmika Mandanna (@rashmika_mandanna)
">www.instagram.com/embed.js”>
ದಸರಾ ಹಬ್ಬದ ಹಿನ್ನೆಲೆಯಲ್ಲಿ ‘ರಣಬಾಲಿ’ ಅಕ್ಟೋಬರ್ 16ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಕೈಯಲ್ಲಿವೆ ಮತ್ತಷ್ಟು ಸಿನಿಮಾಗಳು
‘ರಣಬಾಲಿ’ ಮಾತ್ರವಲ್ಲದೆ ರಶ್ಮಿಕಾ ಅವರ ಕೈಯಲ್ಲಿ ಇನ್ನೂ ಹಲವು ಪ್ರಮುಖ ಸಿನಿಮಾಗಳಿವೆ. ಖ್ಯಾತ ಸಂಗೀತ ದಿಗ್ಗಜೆ ದಿ. ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನವನ್ನು ಆಧರಿಸಿದ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
‘ಜೆರ್ಸಿ’ ಖ್ಯಾತಿಯ ಗೌತಮ್ ತಿನ್ನನೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ನಡೆದಿದೆ.
ಇದರ ಜೊತೆಗೆ ಚೊಚ್ಚಲ ನಿರ್ದೇಶಕ ರವೀಂದ್ರ ಪುಲ್ಲೆ ನಿರ್ದೇಶನದ ‘ಮೈಸಾ’ ಚಿತ್ರದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ಈ ಸಿನಿಮಾ ನವೆಂಬರ್ 27ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ.